ಮತದಾನಕ್ಕೆ ಅಸಡ್ಡೆ, ಅಡ್ಡದಾರಿ ಬೇಡ: ಪ್ರತೀಕ್ ಬಾಯಲ್

KannadaprabhaNewsNetwork |  
Published : Mar 31, 2024, 02:13 AM IST
ಬಾಯಲ್30 | Kannada Prabha

ಸಾರಾಂಶ

ಉಡುಪಿ ನಗರದ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾಲಯ, ಉಡುಪಿ ಜಿಲ್ಲಾ ಲೀಡ್ ಕಾಲೇಜು ವತಿಯಿಂದ ಚುನಾವಣಾ ಸಾಕ್ಷರತಾ ಸಂಘ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಅಂತರಿಕ ಗುಣಮಟ್ಟ ಭರವಸೆ ಕೋಶದ ಸಂಯುಕ್ತ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಮತದಾನಕ್ಕೆ ಅಸಡ್ಡೆ, ಅಡ್ಡದಾರಿಯನ್ನು ಹಿಡಿಯದೇ ಸಮರ್ಥ ನಾಯಕತ್ವದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದ್ದಾರೆ.

ಅವರು ಶನಿವಾರ ನಗರದ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾಲಯ, ಉಡುಪಿ ಜಿಲ್ಲಾ ಲೀಡ್ ಕಾಲೇಜು ವತಿಯಿಂದ ಚುನಾವಣಾ ಸಾಕ್ಷರತಾ ಸಂಘ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಅಂತರಿಕ ಗುಣಮಟ್ಟ ಭರವಸೆ ಕೋಶದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಅಭಿವೃದ್ಧಿ, ಕೊಡುಗೆ ಹಿತಾದೃಷ್ಟಿಯಿಂದ ಪ್ರತಿಯೊಬ್ಬರು ಮತದಾನ ಮಾಡಬೇಕು. ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡು ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಮತದಾನದ ಬಗ್ಗೆ ನಿರಾಸಕ್ತಿ ಹೊಂದಿರುವರನ್ನು ಗುರುತಿಸಿ ಈ ಬಗ್ಗೆ ಮನವರಿಕೆ ಮಾಡಿಸಿ ಮತದಾನ ಮಾಡಿಸುವ ಮಹತ್ತರವಾದ ಜವಾಬ್ದಾರಿ ಯುವ ಜನರ ಮೇಲಿದೆ. ಹಣ, ಉಡುಗೊರೆಯ ಆಮಿಷಕ್ಕೆ ಬಲಿಯಾಗದೆ ಶುದ್ಧ, ಪ್ರಾಮಾಣಿಕ ಮತದಾನ ಮಾಡಬೇಕು ಎಂದರು.

ನಗರಸಭೆಯ ಪೌರಾಯುಕ್ತ ರಾಯಪ್ಪ ಪ್ರಮಾಣ ವಚನ ಬೋಧಿಸಿ ಮಾತನಾಡಿ, ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಬೇಕು. ಯುವ ಜನತೆ ಸಮಾಜದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಸೋಜನ್ ಕೆ.ಜಿ., ಎನ್‌ಎಸ್‌ಎಸ್ ಯೋಜನಾಕಾರಿ ವಿದ್ಯಾ ಡಿ., ಸಾಕ್ಷರತಾ ಸಂಘದ ಕ್ಯಾಂಪಸ್ ರಾಯಭಾರಿ ವಿದ್ಯಾರ್ಥಿನಿ ಗಾನವಿ ಕೆ. ಉಪಸ್ಥಿತರಿದ್ದರು.

ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕ ಮಂಜುನಾಥ ಸ್ವಾಗತಿಸಿದರು. ಚುನಾವಣಾ ಸಾಕ್ಷರತಾ ಸಂಘದ ಕ್ಯಾಂಪಸ್ ರಾಯಭಾರಿ ವಿದ್ಯಾರ್ಥಿನಿ ಮಂಗಳಾ ಗೌರಿ ಭಟ್ ನಿರೂಪಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ನಿಕೇತನಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ