ಕಾರ್ಮಿಕರ ಹಿತರಕ್ಷಣೆಗೆ ಮುಲಾಜು ಬೇಡ - ಟಿ. ಎಂ.ಶಾಹಿದ್

KannadaprabhaNewsNetwork |  
Published : Oct 19, 2026, 03:00 AM IST
ರಾಜ್ಯದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ಅವರು ಕಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿದರು | Kannada Prabha

ಸಾರಾಂಶ

ರಾಜ್ಯದಲ್ಲಿ ಸುಮಾರು 3.5 ಕೋಟಿ ವಿವಿಧ ವಲಯದ ಕಾರ್ಮಿಕರು ಇದ್ದಾರೆ. ಈ ಕಾರ್ಮಿಕರ ಹಿತಾಸಕ್ತಿ ರಕ್ಷಣೆಯನ್ನು ಯಾವುದೇ ಮುಲಾಜಿಲ್ಲದೇ ಮಾಡಬೇಕು. ಕಾರ್ಮಿಕರು ರಾಜ್ಯದ ಯಾವುದೇ ಮೂಲೆಯವರಾಗಿರಲಿ, ಅವರು ಮಾಡಿದ ಕೆಲಸಕ್ಕೆ ಕನಿಷ್ಠ ಕೂಲಿ ಸಿಗುತ್ತಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ರಾಜ್ಯದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ಹೇಳಿದರು.

ಉಡುಪಿ : ರಾಜ್ಯದಲ್ಲಿ ಸುಮಾರು 3.5 ಕೋಟಿ ವಿವಿಧ ವಲಯದ ಕಾರ್ಮಿಕರು ಇದ್ದಾರೆ. ಈ ಕಾರ್ಮಿಕರ ಹಿತಾಸಕ್ತಿ ರಕ್ಷಣೆಯನ್ನು ಯಾವುದೇ ಮುಲಾಜಿಲ್ಲದೇ ಮಾಡಬೇಕು. ಕಾರ್ಮಿಕರು ರಾಜ್ಯದ ಯಾವುದೇ ಮೂಲೆಯವರಾಗಿರಲಿ, ಅವರು ಮಾಡಿದ ಕೆಲಸಕ್ಕೆ ಕನಿಷ್ಠ ಕೂಲಿ ಸಿಗುತ್ತಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ರಾಜ್ಯದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ಹೇಳಿದರು.

ಅವರು ಶುಕ್ರವಾರ ರಜತಾದ್ರಿಯ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ಕಾರ್ಮಿಕ ಅಧಿಕಾರಿಗಳು ಹಾಗೂ ಜಿಲ್ಲೆಯ ಕಾರ್ಮಿಕ ಮುಖಂಡರುಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು.

ವೇತನ ಪರಿಷ್ಕರಣೆಗೆ ಕ್ರಮ: ರಾಜ್ಯದಲ್ಲಿ ಪ್ರಸ್ತುತ ಜೀವನಶೈಲಿ ಬದಲಾವಣೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಸರ್ಕಾರವು 9 ವರ್ಷಗಳ ನಂತರ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆಗೆ ಕ್ರಮ ಕೈಗೊಂಡಿದ್ದು, ವಿವಿಧ ಹಂತದಲ್ಲಿ ಕನಿಷ್ಠ ವೇತನ ನಿಗಧಿಪಡಿಸುವ ಪ್ರಕ್ರಿಯೆ ನಡೆದಿದೆ. ಆದರೆ ಕೆಲವರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಶೀಘ್ರದಲ್ಲಿ ಈ ಬಗ್ಗೆ ಸೂಕ್ತ ನಿರ್ಣಯ ಹೊರಬೀಳಲಿದೆ ಎಂದರು. ಕಾರ್ಮಿಕ ಸಂಘಟನೆಗಳು ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಕಾರ್ಮಿಕರುಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ಸರಕಾರದಿಂದ ದೊರಕುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಅಸಂಘಟಿತ ಕಾರ್ಮಿಕರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ದುಡಿಯುವ ವರ್ಗದ ಕಾರ್ಮಿಕರ ಹಿತವನ್ನು ಕಾಪಾಡುವುದರೊಂದಿಗೆ ಅವರುಗಳ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಜೀವನ ಕಟ್ಟಿಕೊಳ್ಳಲು ಅನುವು ಮಾಡಿಕೊಡಬೇಕು ಎಂದ ಅವರು ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಕನಿಷ್ಠ ವೇತನ ದೊರೆಯುವುದರೊಂದಿಗೆ ಸಾಮಾಜಿಕ ಭದ್ರತೆಯ ಸೌಲಭ್ಯಗಳು ಸಿಗುವಂತಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಉಡುಪಿ ಕಾರ್ಮಿಕ ನಿರೀಕ್ಷಕರುಗಳಾದ ಸಂಜಯ್ ಹಾಗೂ ಮಲ್ಲಿಕ್ ಪ್ರಸಾದ್, ಉಡುಪಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ್ ವಿ, ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೃದಯದ ಭಾಷೆಯೇ ನಿಜವಾದ ಸಾಹಿತ್ಯ: ಡಾ.ಶ್ರೀರಾಮ ಇಟ್ಟನ್ನವರ
ನಶಿಸಿಸುತ್ತಿರುವ ಭಾರತೀಯ ಸಂಸ್ಕೃತಿ, ಸಂಪ್ರದಾಯಗಳು: ಅನುಪಮಾ ಧಾರವಾಡ