ಕನ್ನಡಪ್ರಭ ವಾರ್ತೆ ಕಮತಗಿ
ಪಟ್ಟಣ ಪಂಚಾಯತಿ ಹಾಲಿ ಅಧ್ಯಕ್ಷ ರಮೇಶ ಎಸ್. ಜಮಖಂಡಿ ಅವರು ತಮ್ಮ ಆಡಳಿತ ವೈಖರಿ ಹಾಗೂ ಪಟ್ಟಣ ಪಂಚಾಯತಿ ಸದಸ್ಯರನ್ನು ವಿಶ್ವಾಸಕ್ಕೆ ತಗೆದುಕೊಳ್ಳದೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದು, ಜನಪ್ರತಿನಿಧಿಗಳ ಮಾತಿಗೆ ಮನ್ನಣೆ ಕೊಡದಿರುವುದು, ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಉಂಟಾಗಿದೆ. ಆದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಪಟ್ಟಣ ಪಂಚಾಯತಿ ಸದಸ್ಯರು ಸ್ವ ಇಚ್ಛೆಯಿಂದ ಸಹಿ ಮಾಡಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ವಿಶೇಷ ಸಭೆ ಕರೆಯುವಂತೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳ ಮೂಲಕ ಅಧ್ಯಕ್ಷರಿಗೆ ಮನವಿ ಪತ್ರ ನೀಡಿ ಆಗ್ರಹಿಸಿದ್ದಾರೆ.
ಪಟ್ಟಣ ಪಂಚಾಯಿತಿ ಸದಸ್ಯರಾದ ಬಸವರಾಜ ಕುಂಬಳಾವತಿ, ಸಂಗಪ್ಪ ಗಾಣಗೇರ, ಹುಚ್ಚೇಶ ಮದ್ಲಿ, ರತ್ನಾ ತಳಗೇರಿ, ನೇತ್ರಾವತಿ ನಿಂಬಲಗುಂದಿ, ಹುಚ್ಚವ್ವ ಹಗೇದಾಳ, ಲಕ್ಷ್ಮಣ ಮಾದರ, ದೇವಿಪ್ರಸಾದ ನಿಂಬಲಗುಂದಿ, ನಂದಾ ದ್ಯಾಮಣ್ಣವರ, ಸುಮಿತ್ರಾ ಲಮಾಣಿ, ಮಂಜುಳಾ ಮುರಾಳ, ಕಸ್ತೂರಿಬಾಯಿ ಬಾಗೇವಾಡಿ,ಚಂದಪ್ಪ ಕುರಿ ಇದ್ದರು.