ಬರದ ನಡುವೆ ದಸರಾ ಬೇಡ: ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ನಿರಾಕರಿಸಲಿ: ಶಾಂತವೇರಿ ಗೋಪಾಲಗೌಡ

KannadaprabhaNewsNetwork |  
Published : Oct 07, 2026, 01:45 AM IST
ಪೋಟೋ: 06ಎಸ್‌ಎಂಜಿಕೆಪಿ03ಶಿವಮೊಗ್ಗದ ಪತ್ರಿಕಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ  ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಮಾತನಾಡಿದರು. | Kannada Prabha

ಸಾರಾಂಶ

ರಾಜ್ಯದ 217 ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇರುವ ಸಂದರ್ಭದಲ್ಲಿ ನೂರಾರು ಕೋಟಿ ರು.ವೆಚ್ಚದಲ್ಲಿ ದಸರಾ ಉತ್ಸವ ಆಚರಿಸುವುದು ಸೂಕ್ತವಲ್ಲ. ಹೀಗಾಗಿ 2026ರ ದಸರಾ ಉತ್ಸವ ಉದ್ಘಾಟನೆಗೆ ನೀಡಿರುವ ಆಹ್ವಾನವನ್ನು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನೈತಿಕತೆಯ ಆಧಾರದ ಮೇಲೆ ನಿರಾಕರಿಸಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯದ 217 ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇರುವ ಸಂದರ್ಭದಲ್ಲಿ ನೂರಾರು ಕೋಟಿ ರು.ವೆಚ್ಚದಲ್ಲಿ ದಸರಾ ಉತ್ಸವ ಆಚರಿಸುವುದು ಸೂಕ್ತವಲ್ಲ. ಹೀಗಾಗಿ 2026ರ ದಸರಾ ಉತ್ಸವ ಉದ್ಘಾಟನೆಗೆ ನೀಡಿರುವ ಆಹ್ವಾನವನ್ನು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನೈತಿಕತೆಯ ಆಧಾರದ ಮೇಲೆ ನಿರಾಕರಿಸಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ 46,324 ಕೋಟಿ ರು. ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿ ಮೋದಿ ಅವರನ್ನು ಸ್ವಾಮೀಜಿ ಭೇಟಿಯಾಗಿ ಒತ್ತಾಯಿಸಬೇಕು ಎಂದರು.ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಅಂತರ್‌ ಸಚಿವಾಲಯ ತಂಡ ರಾಜ್ಯಕ್ಕೆ ಭೇಟಿ ನೀಡಿದೆ. ಎನ್‌ಡಿಆರ್‌ಎಫ್‌ ಮಾನದಂಡದಡಿ 46,324 ಕೋಟಿ ರು. ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟಿಸುವುದಕ್ಕಿಂತ ಬರ ಪರಿಹಾರಕ್ಕಾಗಿ ಕೇಂದ್ರದ ಮೇಲೆ ಒತ್ತಡ ತರುವುದು ಸೂಕ್ತ ಎಂದರು.ಕಡಿದಾಳ್ ಶಾಮಣ್ಣ ಮಾದರಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2015ರಲ್ಲಿ ಸಮಾಜವಾದಿ ಲೇಖಕ, ಚಿಂತಕ ಹಾಗೂ ರೈತ ಮುಖಂಡ ಕಡಿದಾಳ್ ಶಾಮಣ್ಣ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಿತ್ತು. ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅವರು ಆಹ್ವಾನವನ್ನು ನಿರಾಕರಿಸಿದ್ದರು. ಅಗತ್ಯವಿದ್ದರೆ ವಿಧಾನಸೌಧದ ಮೆಟ್ಟಿಲುಗಳ ಕಸ ಗುಡಿಸಲು ಸಿದ್ಧ, ಆದರೆ ದಸರಾ ಉದ್ಘಾಟಿಸುವುದಿಲ್ಲ ಎಂಬ ನಿಲುವು ತಳೆದಿದ್ದರು ಎಂದು ಮೇಘರಾಜ್ ನೆನಪಿಸಿದರು.ಗೋಷ್ಠಿಯಲ್ಲಿ ಎಚ್.ಎಂ. ಸಂಗಯ್ಯ, ಎಸ್.ಪಿ. ಶೇಷಾದ್ರಿ, ಆಲೀಂ ಖಾನ್, ಶಿವಣ್ಣ, ಪ್ರಭಾಕರ್, ಸಣ್ಣನಾಯಕ, ಆದಿಶೇಷ ಹಾಗೂ ಸಂಧ್ಯಾ ರಾಗಿಗುಡ್ಡ ಇದ್ದರು.----------------------

ಪೋಟೋ: 06ಎಸ್‌ಎಂಜಿಕೆಪಿ03

ಪತ್ರಿಕಾಗೋಷ್ಠಿಯಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯಪುರ ಶಾಸಕ ಯತ್ನಾಳ್ ವಿರುದ್ಧ ದಾವಣಗೆರೆ ಕಾಂಗ್ರೆಸ್ ದೂರು
ಶಿಥಿಲ, ಹಳೇ ಪಶು ವೈದ್ಯಕೀಯ ಆಸ್ಪತ್ರೆಗಳ ಪಟ್ಟಿ ನೀಡಿ: ಶಾಂತನಗೌಡ