ದೌರ್ಜನ್ಯ ಪ್ರಕರಣಗಳ ಪರಿಹಾರ ವಿತರಣೆಯಲ್ಲಿ ವಿಳಂಬ ಸಲ್ಲದು: ಜಿಲ್ಲಾಧಿಕಾರಿ

KannadaprabhaNewsNetwork |  
Published : Sep 29, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಅರ್ಹರಿಗೆ ಪರಿಹಾರಧನ ವಿತರಿಸುವಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನುಸೂಚಿತ ಜಾತಿ, ಪಂಗಡಗಳ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಅರ್ಹರಿಗೆ ಪರಿಹಾರಧನ ವಿತರಿಸುವಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ, ಪಂಗಡಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ದೌರ್ಜನ್ಯ ಅಧಿನಿಯಮದಡಿ ದಾಖಲಾದ ಪ್ರತಿಯೊಂದು ಪ್ರಕರಣ ಪರಿಶೀಲಿಸಿ, ಪರಿಹಾರಧನ ಮಂಜೂರು ಮಾಡಬೇಕಾದ ಪ್ರಕರಣಗಳಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಈಗಾಗಲೇ ನಿರ್ದೇಶನ ನೀಡಿದ್ದರೂ ಕೆಲವು ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳದಿರುವುದು ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಕೂಡಲೇ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.ಅರಣ್ಯ ಹಕ್ಕು ಅರ್ಜಿಗಳ ಪರಿಶೀಲನೆಗೆ ಸೂಚನೆ:ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮದ ಶೆಟ್ಟಿಹಿತ್ಲು ವ್ಯಾಪ್ತಿಯ ಸರ್ವೇ ನಂ.89 ಮತ್ತು 95ರಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ತಿರಸ್ಕೃತವಾಗಿರುವ ಅರ್ಜಿಗಳ ಪುನರ್ ಪರಿಶೀಲನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸುಮಾರು 100 ವರ್ಷಗಳಿಂದ ಇಲ್ಲಿ ವಾಸವಾಗಿರುವ ಆದಿವಾಸಿ ಕುಟುಂಬಗಳ ಅರ್ಜಿಗಳ ಪೈಕಿ 18 ಅರ್ಜಿಗಳಿಗೆ 2005ಕ್ಕೂ ಹಿಂದಿನ ದಾಖಲೆ ಗಳ ಕೊರತೆಯಿಂದ ಹಿಂಬರಹ ನೀಡಲಾಗಿದೆ. ಬಾಕಿ ಇರುವ ಫಲಾನುಭವಿಗಳು ದಾಖಲೆ ಒದಗಿಸುತ್ತಿದ್ದು, ಮುಂದಿನ ಗ್ರಾಮಸಭೆಯಲ್ಲಿ ಮಂಡಿಸಿ ಅರ್ಹತೆ ಆಧರಿಸಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಬನ್ನೂರು ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 479 ಅರ್ಜಿಗಳ ಪರಿಶೀಲನೆ ನಡೆಯಬೇಕಿದ್ದು, ಈಗಾಗಲೇ 173 ಅರ್ಜಿಗಳನ್ನು ಪರಿಶೀಲಿಸಲಾಗಿದೆ. ಉಳಿದ 306 ಅರ್ಜಿಗಳ ಮಹಜರು ಕಾರ್ಯವನ್ನು ಹಂತ ಹಂತವಾಗಿ ಕೈಗೊಂಡು, ಗ್ರಾಮಸಭೆಯಲ್ಲಿ ಮಂಡಿಸಿ ವರದಿ ಸಲ್ಲಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದರು.ಈ ಕುರಿತು ಈಗಾಗಲೇ ನಿರ್ದೇಶನ ನೀಡಿದ್ದರೂ ಪ್ರಗತಿ ಕಂಡುಬಂದಿಲ್ಲ. ಕೂಡಲೇ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.ದಾಸರಹಳ್ಳಿಯಲ್ಲಿ 5 ಎಕರೆ ಜಮೀನು ಕಾಯ್ದಿರಿಸುವಿಕೆ:ಲಕ್ಯಾ ಹೋಬಳಿ ದಾಸರಹಳ್ಳಿ ಗ್ರಾಮದ ಸರ್ವೇ ನಂ.61ರಲ್ಲಿ ಪರಿಶಿಷ್ಟ ಜಾತಿಯ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಲು ಐದು ಎಕರೆ ಸರ್ಕಾರಿ ಜಮೀನು ಕಾಯ್ದಿರಿಸಲಾಗಿದೆ. ಜಮೀನನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈಗಾಗಲೇ ಹಸ್ತಾಂತರಿಸಲಾಗಿದೆ ಎಂದು ಚಿಕ್ಕಮಗಳೂರು ತಹಸೀಲ್ದಾರ್ ತಿಳಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ಪುರುರಾಜ್ ಸಿಂಗ್ ಸೋಲಂಕಿ, ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜು ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ. ಶ್ರೀಪರ್ಣಾ ಸಾಹಾಗೆ ಡಾ. ಅಪ್ಪಾಜಿ ನಾವೀನ್ಯತಾ ಪ್ರಶಸ್ತಿ
ಜ್ಞಾನೇಶ ಕುಮಾರ್ ರಾಜಿನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ