ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದ ಆವರಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನದಲ್ಲಿ ಮಾತನಾಡಿ, ಸರ್ಕಾರ ಸ್ವ-ಪಕ್ಷದ ಶಾಸಕರ ಕ್ಷೇತ್ರಗಳಿಗೆ ನೀಡುವ ಅನುದಾನದಂತೆ ವಿಪಕ್ಷಗಳ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೂ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.
ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲ ಬಾರಿ ಸಿಎಂ ಆಗಿದ್ದಾಗ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸಿ ಜನರ ಮನೆಬಾಗಿಲಿಗೆ ಆಡಳಿತ ಯಂತ್ರವನ್ನು ತೆಗೆದುಕೊಂಡು ಹೋಗುತ್ತಿದ್ದರು. ಆನಂತ ಬಿ.ಎಸ್.ಯಡಿಯೂರಪ್ಪ ಹಾಗೂ ಬಸರಾಜ ಬೊಮ್ಮಾಯಿ ಅವರು ಜನಸ್ಪಂದನಾ ಕಾರ್ಯಕ್ರಮಗಳ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ಕೆಲಸ ಮಾಡಿದ್ದರು ಎಂದರು.ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರತ್ಯೇಕ ಪ್ರಜಾಸೇವೆ ಇಲಾಖೆಯನ್ನೇ ರೂಪಿಸಿದೆ. ಇದರಿಂದ ಕಡತಗಳ ವಿಲೇವಾರಿ ಪ್ರಕ್ರಿಯೆಗೆ ತ್ವರಿತ ಚಾಲನೆ ದೊರಕಿ ಸರ್ಕಾರಿ ಆಡಳಿತ ಯಂತ್ರ ಚುರುಕುಗೊಳ್ಳಲಿದೆ. ಇದೊಂದು ಒಳ್ಳೆಯ ಕಾರ್ಯಕ್ರಮ ಎಂದು ಶ್ಲಾಘಿಸಿದರು.
ಈ ಯೋಜನೆಗೆ ಹೆಚ್ಚುವರಿ 53 ಕೋಟಿ ರು. ಹಣ ಬೇಕು. ಇದರಿಂದ ಹೆಚ್ಚುವರಿ 79 ಕೆರೆಗಳು ಹೇಮೆಯ ನೀರಿನಿಂದ ತುಂಬಲಿವೆ. ಇದಕ್ಕೆ ಸಚಿವ ಸಂಪುಟದಲ್ಲಿ ಅಗತ್ಯ ಅನುಮೋದನೆ ದೊರಕಿಸಿಕೊಡಬೇಕು. ಗೂಡೇಹೊಸಹಳ್ಳಿ ಏತ ನೀರಾವರಿಗೂ ಹೆಚ್ಚುವರಿ 39 ಕೆರೆಗಳ ಸೇರ್ಪಡೆ ಮಾಡಿ ನಮ್ಮ ತಾಲೂಕಿನ ಈ ಎರಡೂ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿಕೊಡಬೇಕೆಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕೈಮಗ್ಗ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಎಸ್ಪಿ ಶೋಭಾರಾಣಿ, ಡಿವೈಎಸ್ಪಿ ಚಲುವರಾಜು, ತಹಸೀಲ್ದಾರ್ ಶ್ರೇಯಸ್, ಇ.ಓ ಕೆ.ಸುಷ್ಮಾ, ಮುಖಂಡರಾದ ಬಿ.ಎಲ್.ದೇವರಾಜು, ಎಂ.ಡಿ.ಕೃಷ್ಣಮೂರ್ತಿ, ಕಿಕ್ಕೇರಿ ಸುರೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇನಹಳ್ಳಿ ಮೋಹನ್, ಟಿ.ಎ.ಪಿ.ಸಿ.ಎಂ.ಎಸ್ ಮಾಜಿ ಅಧ್ಯಕ್ಷ ಟಿ.ಬಲದೇವ್ ಸೇರಿದಂತೆ ಹಲವರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 270 ಅರ್ಜಿಗಳನ್ನು ಸ್ವೀಕರಿಸಿಲಾಯಿತು. ಪಾಲಿಟೆಕ್ನಿಕ್ ಹಿಂಭಾಗದಲ್ಲಿ ಕೃಷಿ ಜಮೀನು ಹೊಂದಿರುವ ರೈತರು ದಲಿತ ಮುಖಂಡ ಡಿ.ಪ್ರೇಂಕುಮಾರ್ ನೇತೃತ್ವದಲ್ಲಿ ಸಚಿವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.