ಕನ್ನಡಪ್ರಭ ವಾರ್ತೆ ಬೀದರ್
ಅಕ್ಕಮಹಾದೇವಿ ಮಹಿಳಾ ಮಂಡಳ ನಾವದಗೇರಿ ಬೀದರ ಇದರ ಸಭಾಂಗಣ ಉದ್ಘಾಟನೆ ಮತ್ತು ಸಂಸ್ಕೃತಿ ಮಂತ್ರಾಲಯ ನವದೆಹಲಿ ಸಹಕಾರದಲ್ಲಿ ರಾಜಾರಾಮ್ ಮೋಹನರಾಯ್ ಅವರ 250ನೇ ಜನ್ಮ ವಾರ್ಷಿಕೋತ್ಸವದ ಪ್ರಯುಕ್ತ ಭಾನುವಾರ ನಡೆದ ಮಹಿಳಾ ಸಾಧಕಿಯರಿಗೆ ಅಕ್ಕಮಹಾದೇವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಪುರುಷ ಮಹಿಳೆ ಎಂಬ ಭೇದಭಾವ ಮಾಡುವುದು ಸರಿಯಲ್ಲ. ಹೋಲಿಕೆಯೂ ಸರಿಯಲ್ಲ. ಮಹಿಳೆಗೆ ಒಂದಿಷ್ಟು ಪ್ರೇರಣೆ ನೀಡಿದರೆ ಮೇಲ್ಮಟ್ಟಕ್ಕೆ ಬೆಳೆಯುತ್ತಾಳೆ ಎಂದರು.ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಟ್ಟು ಸತ್ಯನಾರಾಯಣ ಸಭಾಂಗಣ ಉದ್ಘಾಟಿಸಿ ಮಾತನಾಡಿ, ರಾಜಾರಾಮ ಮೋಹನರಾಯ ಅವರು ಅಂದು ಸಮಾಜದಲ್ಲಿ ತಾಂಡವವಾಡುತ್ತಿದ್ದ ಸತಿ ಸಹಗಮನ ಪದ್ಧತಿಯನ್ನು ಹೋಗಲಾಡಿಸಿ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತಂದಿದ್ದರು.
ಹೆಬ್ಬಾಳೆ ಕುಟುಂಬ ಇಂದು ಅಕ್ಕಮಹಾದೇವಿ ಮಹಿಳಾ ಮಂಡಳ ವತಿಯಿಂದ ಬೃಹತ್ ಸಭಾಂಗಣ ನಿರ್ಮಿಸಿ ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಹೇಳಿದರು.
ಅಕ್ಕಮಹಾದೇವಿ ಮಹಿಳಾ ಮಂಡಳ ಕಾರ್ಯದರ್ಶಿ ಡಾ. ಮಹಾದೇವಿ ಹೆಬ್ಬಾಳೆ ಪ್ರಾಸ್ತಾವಿಕ ಮಾತನಾಡಿ, ಅಕ್ಕಮಹಾದೇವಿ ಮಹಿಳಾ ಮಂಡಳ ಇಂದು ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಮಹಿಳಾ ಸಾಧಕಿಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷವಾಗಿ ಇಂದು 6 ಜನ ಮಹಿಳಾ ಸಾಧಕಿಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ಬೀದರ ವಿ.ವಿ.ಯ ಕನ್ನಡ ನಿಕಾಯದ ಡೀನ್ ಡಾ. ಜಗನ್ನಾಥ ಹೆಬ್ಬಾಳೆ, ಕರ್ನಾಟಕ ಕೇಂದ್ರೀಯ ವಿವಿ ಕಲಬುರಗಿ ಅಧ್ಯಯನಾಂಗದ ನಿರ್ದೇಶಕ ಪ್ರೊ. ಬಸವರಾಜ ಡೊಣೂರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನ್ನೋಳಿ, ಮಲ್ಲಮ್ಮ ಹೆಬ್ಬಾಳೆ, ಮಹಾನಂದ ಹೆಬ್ಬಾಳೆ ಉಪಸ್ಥಿತರಿದ್ದರು. ಅಕ್ಕಮಹಾದೇವಿ ಮಹಿಳಾ ಮಂಡಳಿಯ ಅಧ್ಯಕ್ಷೆ ಡಾ. ನೀಲಗಂಗಾ ಹೆಬ್ಬಾಳೆ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ. ವೈಜಿನಾಥ ಕಮಠಾಣೆ, ಸಂತೋಷ ತಾಳಂಪಳ್ಳಿ, ಎಸ್.ವಿ.ಕಲ್ಮಠ, ಮಲ್ಲಮ್ಮ ಸಂತಾಜಿ, ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.