ಗರ್ಭಕಂಠ ಕ್ಯಾನ್ಸರ್ ಲಸಿಕೆ ಬಗ್ಗೆ ಅನುಮಾನ ಬೇಡ

KannadaprabhaNewsNetwork |  
Published : Apr 28, 2026, 02:00 AM IST
ದಿನೇಶ ಗುಂಡೂರಾವ್  | Kannada Prabha

ಸಾರಾಂಶ

ಸರ್ಕಾರದ ಆಸ್ಪತ್ರೆಗಳಲ್ಲಿ ರೆಡಿಯೋಲಜಿ ತಜ್ಞರ ಕೊರತೆ ಮೊದಲಿನಿಂದಲೂ ಇದೆ. ಅವರಿಗೆ ಹೆಚ್ಚಿನ ಬೇಡಿಕೆ ಇದ್ದು, ಟೆಲಿ ರೆಡಿಯಾಲಾಜಿ‌ ಮೂಲಕ ಈ ಕೊರತೆ ನೀಗಿಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.

ಧಾರವಾಡ:

ಗರ್ಭಕಂಠ ಕ್ಯಾನ್ಸರ್‌ ಬರದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಾಲಕಿಯರಿಗೆ ಕೊಡುತ್ತಿರುವ ಲಸಿಕೆ ಎಲ್ಲ ರೀತಿಯಲ್ಲಿ ಪ್ರಮಾಣೀಕರಿಸಿದ್ದು, ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಉದ್ದೇಶ ಪೂರ್ವಕವಾಗಿ ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ಲಸಿಕೆಯನ್ನು ಇಡೀ ವಿಶ್ವದಲ್ಲಿಯೇ ಕೊಡಲಾಗುತ್ತಿದೆ. ಆದ್ದರಿಂದ 14 ವರ್ಷದ ಬಾಲಕಿಯರು ಈ ಲಸಿಕೆ ಪಡೆದರೆ ಭವಿಷ್ಯದಲ್ಲಿ ಅವರಿಗೆ ಗರ್ಭಕಂಠ ಕ್ಯಾನ್ಸರ್‌ ಬರುವುದಿಲ್ಲ. ಈಗಾಗಲೇ ಇಲಾಖೆಯಿಂದ ಒಂದು ಲಕ್ಷಕ್ಕೂ ಹೆಚ್ಚು ಬಾಲಕಿಯರಿಗೆ ಈ ಲಸಿಕೆ ನೀಡಲಾಗಿದೆ ಎಂದರು.

ಸರ್ಕಾರದ ಆಸ್ಪತ್ರೆಗಳಲ್ಲಿ ರೆಡಿಯೋಲಾಜಿಸ್ಟ್‌ ಕೊರತೆಯ ಪ್ರಶ್ನೆಗೆ ಉತ್ತರಿಸಿದ ಗುಂಡೂರಾವ್‌, ರೆಡಿಯೋಲಜಿ ತಜ್ಞರ ಕೊರತೆ ಮೊದಲಿನಿಂದಲೂ ಇದೆ. ಅವರಿಗೆ ಹೆಚ್ಚಿನ ಬೇಡಿಕೆ ಇದ್ದು, ಟೆಲಿ ರೆಡಿಯಾಲಾಜಿ‌ ಮೂಲಕ ಈ ಕೊರತೆ ನೀಗಿಸುತ್ತೇವೆ ಎಂದು ಹೇಳಿದರು.

ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ಬಗ್ಗೆ ಮಾತನಾಡಿದ ಅವರು, ರಾಜ್ಯದ 1300 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 200ಕ್ಕೂ ಹೆಚ್ಚು ವೈದ್ಯರ ನೇಮಕಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.ಮುಖ್ಯಮಂತ್ರಿ ಬದಲಾವಣೆ ಮಾಧ್ಯಮ ಸೃಷ್ಟಿ. ಮುಖ್ಯಮಂತ್ರಿ ಸ್ಥಾನದ ಬದಲಾವಣೆಗೆ ಯಾರಿಗೂ ಯಾರೂ ಗಡುವು ನೀಡಿಲ್ಲ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕಾರ್ಯ ನಿಮಿತ್ತ ದೆಹಲಿಗೆ ಹೋಗಿದ್ದು, ವಿಶೇಷ ಏನಿಲ್ಲ.

ದಿನೇಶ ಗುಂಡೂರಾವ್‌, ಆರೋಗ್ಯ ಸಚಿವ-----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ. ಅಂಬೇಡ್ಕರ್‌ ಸಮಾನತೆ ನೀಡಿದ ಮಹಾ ನಾಯಕ: ರಾಘವೇಂದ್ರ ಹಿಟ್ನಾಳ
ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ: ಶಿವರಾಜ ತಂಗಡಗಿ