ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಬೇಡ

KannadaprabhaNewsNetwork |  
Published : Nov 05, 2025, 01:30 AM IST
ಭದ್ರಾವತಿ ನಗರದ ಜನ್ನಾಪುರ ಫಿಲ್ಟರ್‌ಶೆಡ್‌ನಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವಂತೆ ಆಗ್ರಹಿಸಿ ಮಂಗಳವಾರ ಉಂಬ್ಳೆಬೈಲು ರಸ್ತೆ, ಅಂಡರ್‌ಬ್ರಿಡ್ಜ್ ಸಮೀಪದಲ್ಲಿರುವ ಮೆಸ್ಕಾಂ ಶಾಖಾ ಕಛೇರಿ ಆವರಣದಲ್ಲಿ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬೀರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ನಗರದ ಜನ್ನಾಪುರ ಫಿಲ್ಟರ್‌ಶೆಡ್‌ನಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವಂತೆ ಆಗ್ರಹಿಸಿ ಮಂಗಳವಾರ ಉಂಬ್ಳೆಬೈಲು ರಸ್ತೆ, ಅಂಡರ್‌ಬ್ರಿಡ್ಜ್ ಸಮೀಪದಲ್ಲಿರುವ ಮೆಸ್ಕಾಂ ಶಾಖಾ ಕಚೇರಿ ಆವರಣದಲ್ಲಿ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬೀರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಭದ್ರಾವತಿ: ನಗರದ ಜನ್ನಾಪುರ ಫಿಲ್ಟರ್‌ಶೆಡ್‌ನಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವಂತೆ ಆಗ್ರಹಿಸಿ ಮಂಗಳವಾರ ಉಂಬ್ಳೆಬೈಲು ರಸ್ತೆ, ಅಂಡರ್‌ಬ್ರಿಡ್ಜ್ ಸಮೀಪದಲ್ಲಿರುವ ಮೆಸ್ಕಾಂ ಶಾಖಾ ಕಚೇರಿ ಆವರಣದಲ್ಲಿ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬೀರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರಮುಖರು ಮಾತನಾಡಿ, ಕೆಲವು ಪ್ರಭಾವಿಗಳು ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಸೇರಿದ ಜಾಗದಲ್ಲಿ ಅಂತರಘಟ್ಟಮ್ಮ ದೇವಸ್ಥಾನದ ಬಳಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದು, ಇದಕ್ಕೆ ಯಾವುದೇ ದಾಖಲಾತಿಗಳು ಇರುವುದಿಲ್ಲ. ಈ ಕಟ್ಟಡವನ್ನು ಕಾರ್ಖಾನೆ ಆಡಳಿತ ಮಂಡಳಿ ತನ್ನ ಅಧೀನಕ್ಕೆ ತೆಗೆದುಕೊಂಡು ಕಟ್ಟಡ ನೆಲಸಮಗೊಳಿಸಬೇಕೆಂದು ಅಥವಾ ಕಟ್ಟಡವನ್ನು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ನೀಡಬೇಕೆಂದು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಅನಧಿಕೃತ ಕಟ್ಟಡಕ್ಕೆ ಯಾವುದೇ ಕಾರಣಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸಬಾರದೆಂದು ಆಗ್ರಹಿಸಿದರು.

ಒಂದು ವೇಳೆ ನಮ್ಮ ಹೋರಾಟಕ್ಕೆ ಬೆಲೆಕೊಡದೆ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಲ್ಲಿ ತಮ್ಮ ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಹಾದೇವಿ, ಇಂದ್ರಮ್ಮ, ಪ್ರಕಾಶ್, ದಿವ್ಯಶ್ರೀ ಮತ್ತು ವೈ. ಶಶಿಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ