ರಾಜ್ಯಾದ್ಯಂತ ಶುರುವಾಗಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರ ಗಾಂಧಿನಗರದಲ್ಲಿರುವ ಮನೆಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ, ಎನ್ಯೂಮರೇಷನ್ ಫಾರಂ ವಿತರಿಸಿ ಎಸ್.ಐ.ಆರ್ ಕಾರ್ಯಕ್ಕೆ ಚಾಲನೆ ನೀಡಿದರು.
ತುಮಕೂರು: ರಾಜ್ಯಾದ್ಯಂತ ಶುರುವಾಗಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರ ಗಾಂಧಿನಗರದಲ್ಲಿರುವ ಮನೆಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ, ಎನ್ಯೂಮರೇಷನ್ ಫಾರಂ ವಿತರಿಸಿ ಎಸ್.ಐ.ಆರ್ ಕಾರ್ಯಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜ್ಯೋತಿ ಗಣೇಶ್ ಅವರು ಬೂತ್ ಮಟ್ಟದ ಅಧಿಕಾರಿಗಳ ಬಳಿ ಇರುವ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ, ನಮೂನೆ-6ನ್ನು ಭರ್ತಿ ಮಾಡಿ, ಘೋಷಣಾ ಫಾರಂ ಜೊತೆಗೆ ಬೂತ್ ಮಟ್ಟದ ಅಧಿಕಾರಿಗೆ ಸಲ್ಲಿಸುವುದರ ಮೂಲಕ ಯಾವುದೇ ಭಾರತೀಯ ನಾಗರೀಕರು ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆಯಿಂದ ವಂಚಿತರಾಗಬಾರದೆಂದು ಮನವಿ ಮಾಡಿದರು.ತುಮಕೂರು ನಗರದಲ್ಲಿ ಎಸ್.ಐ.ಆರ್ ಪ್ರಕ್ರಿಯೆಗೆಂದು ಈಗಾಗಲೇ ತುಮಕೂರು ಮಹಾನಗರಪಾಲಿಕೆ ಕಚೇರಿಯಲ್ಲಿಯು ಸೇರಿದಂತೆ ನಗರದ 25 ಕಡೆಗಳಲ್ಲಿ ಆರಂಭವಾಗಿದ್ದು, ಜನರಿಗೆ ಅರ್ಜಿ ತುಂಬುವ ಬಗ್ಗೆ ಸರಿಯಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗೆ ತುಮಕೂರು ನಗರ ಶಾಸಕರು ಸಲಹೆ ನೀಡಿದರು.ಈ ಸಂದರ್ಭದಲ್ಲಿ ತುಮಕೂರು ಮಹಾನಗರಪಾಲಿಕೆ ಆಯುಕ್ತರಾದ ಶುಭ.ಬಿ, ಉಪ-ಆಯುಕ್ತರಾದ ಮನುಕುಮಾರ್ ಹಾಗೂ ಮುಂತಾದ ಅಧಿಕಾರಿಗಳು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.