
ಕಾರವಾರ: ಭ್ರಷ್ಟಾಚಾರ ಮತ್ತು ಕಳ್ಳತನ ಮಾಡುವವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಿದರೆ ಒಳ್ಳೆಯದು. ಆದರೆ, ಇಂತಹ ವಿಷಯಗಳಲ್ಲಿ ಸ್ಟಿಂಗ್ ಆಪರೇಷನ್ ಮಾಡುವುದು ಸಮಂಜಸವಲ್ಲ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ದಾಖಲಾಗಿದೆಯೇ ಅಥವಾ ಅವರ ಆಪ್ತರ ವಿರುದ್ಧ ದಾಖಲಾಗಿದೆಯೇ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ತಮ್ಮ ಬಳಿ ಗೃಹ ಖಾತೆ ಇಲ್ಲ ಎಂದು ಸ್ಪಷ್ಟಪಡಿಸಿದರು.ಬಿಜೆಪಿ ಅಭಿವೃದ್ಧಿಯ ಆಧಾರದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಹಿಂದೂ- ಮುಸ್ಲಿಂ ಭಾವನಾತ್ಮಕ ವಿಚಾರಗಳನ್ನು ಬಳಸಿಕೊಂಡು ಅಧಿಕಾರಕ್ಕೇರಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತದ ಸಾಧನೆಗಳೇನು ಎಂಬುದನ್ನು ಮಾಧ್ಯಮಗಳು ಪ್ರಶ್ನಿಸಬೇಕು ಎಂದರು.ಕೇಂದ್ರ ಸರ್ಕಾರ ಅದಾನಿ ಮತ್ತು ಅಂಬಾನಿ ಅವರ ಸಾಲದ ವಿಚಾರಕ್ಕೆ ಹೆಚ್ಚಿನ ಗಮನ ನೀಡುತ್ತಿದ್ದು, ಸಣ್ಣ ಉದ್ದಿಮೆದಾರರು ಹಾಗೂ ವ್ಯಾಪಾರಿಗಳ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಲಾಡ್ ಆರೋಪಿಸಿದರು. ದೇಶದಲ್ಲಿ ನಿರುದ್ಯೋಗ ಹೆಚ್ಚುತ್ತಿದ್ದು, ಶಿಕ್ಷಣದ ಖಾಸಗೀಕರಣದಿಂದ ಬಡ ಮತ್ತು ಮಧ್ಯಮ ವರ್ಗದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಜಿ.ಟಿ. ನಾಯ್ಕ, ಕಾಂಗ್ರೆಸ್ ಮುಖಂಡ ವಿ.ಎಸ್. ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಕಲ್ಗುಟ್ಕರ್ ಮತ್ತಿತರರು ಇದ್ದರು. ಕಾಳಿ ಹುಲಿ ಸಂರಕ್ಷಿತ ಪ್ರದೇಶದ ತನಿಖಾ ಶ್ವಾನ ಕ್ವೀಪರ್ ಇನ್ನಿ
2016ರಿಂದ 2026ರ ವರೆಗೆ ಸುದೀರ್ಘ 10 ವರ್ಷಗಳ ಕಾಲ ತನ್ನ ಕರ್ತವ್ಯವನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸಿದ ಈ ಶ್ವಾನ, ಕೆನರಾ ವೃತ್ತದ ವಿವಿಧ ವಿಭಾಗಗಳಲ್ಲಿ ನಡೆದ ಅರಣ್ಯ ಅಪರಾಧಗಳ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು.
ಒಟ್ಟು 44 ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಅಗತ್ಯ ಸುಳಿವು ನೀಡುವಲ್ಲಿ ಯಶಸ್ವಿಯಾಗಿತ್ತು. ಅದರಲ್ಲೂ ಜೋಯಿಡಾ ವ್ಯಾಪ್ತಿಯಲ್ಲಿ ನಡೆದ ಚಿರತೆ ಚರ್ಮ ಪತ್ತೆ ಪ್ರಕರಣ, ಅಕ್ರಮ ನಾಡ ಬಂದೂಕು ಪ್ರಕರಣಗಳು ಹಾಗೂ ಅಕ್ರಮ ಕಡವೆ ಬೇಟೆ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಲ್ಲಿ ಕ್ವೀಪರ್ನಪಾತ್ರ ಮಹತ್ವದ್ದಾಗಿತ್ತು. ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು.