ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದ ಜನತೆ ಅತಿವೃಷ್ಠಿ ಮತ್ತು ಅನಾವೃಷ್ಠಿಯಿಂದ ಬೇಸತ್ತಿದ್ದಾರೆ. ಅಧಿಕಾರಿಗಳು ಮೂಗಿನ ನೇರಕ್ಕೆ ಕೆಲಸ ಮಾಡುತ್ತಿದ್ದು, ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ. ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸದೇ ಅಭಿವೃದ್ಧಿ ಕಡೆಗೆ ತುರ್ತು ಗಮನ ನೀಡಲಿ ಎಂದರು.
ಲೋಕಸಭೆ ಚುನಾವಣೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರರ ಗೆಲುವಿನ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಶ್ರಮವಿದೆ. ರಾಜ್ಯದಲ್ಲಿ ಮೈತ್ರಿ ಯಶಸ್ವಿಯಾಗಿದೆ ಎಂದರು.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಭಾರಿ ಬಹುಮತದಿಂದ ಗೆದ್ದಿದ್ದಾರೆ. ರಾಘವೇಂದ್ರರು ಮೂರು ಬಾರಿ ಸಂಸದರಾಗಿ ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಜಿಲ್ಲೆಯ ರಸ್ತೆ, ವಿಮಾನ ನಿಲ್ದಾಣ, ಸಮುದಾಯ ಭವನಗಳು, ರೈಲ್ವೆ ಮೇಲ್ಸೆತುವೆಗಳು, ಪ್ರವಾಸೋಧ್ಯಮ ಅಭಿವೃದ್ಧಿ, ದೂರ ಸಂಪರ್ಕ ಕ್ರಾಂತಿ, ಅನೇಕ ರೈಲು ಸಂಚಾರಗಳು ಸೇರಿ ಅಭಿವೃದ್ಧಿ ಮಹಾಪೂರ ಹರಿಸಿದ್ದು, ಕ್ಷೇತ್ರದ ಜನತೆ ಅವರ ಕೈ ಹಿಡಿದಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಕೂಡ ಬಿಜೆಪಿಯೊಂದಿಗೆ ಅವರ ಗೆಲುವಿಗೆ ಕಾರಣರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸಂಗಯ್ಯ, ತ್ಯಾಗರಾಜ್, ಗೀತಾ ಸತೀಶ್, ದೀಪಕ್‍ಸಿಂಗ್, ಎಸ್.ಎಲ್. ನಿಖಿಲ್, ಗಂಧದಮನೆ ನರಸಿಂಹ, ವಿನಯ್ ಮತ್ತಿತರರು ಇದ್ದರು.