ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಇನ್ನು ‘ಸೈಲೆಂಟ್‌’!

KannadaprabhaNewsNetwork |  
Published : May 02, 2024, 12:16 AM IST
ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಡಿಸ್‌ಪ್ಲೇ ಮಾಹಿತಿ | Kannada Prabha

ಸಾರಾಂಶ

ತಡೆರಹಿತ ಪ್ರಯಾಣದ ಮಾಹಿತಿಗೆ ಸಹಾಯ, ಬೋರ್ಡಿಂಗ್, ಗೇಟ್ ಬದಲಾವಣೆ, ವಿಮಾನದ ಮರು ವೇಳಾಪಟ್ಟಿ ಮುಂತಾದ ವಿಷಯಗಳು ಏರ್‌ಲೈನ್‌ನಿಂದ ಪ್ರಯಾಣಿಕರ ಮೊಬೈಲ್‌ಗೆ ಎಸ್‌ಎಂಎಸ್ ಅಥವಾ ಇ-ಮೈಲ್‌ ಸಂದೇಶ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈವರೆಗೆ ಪ್ರಯಾಣಿಕರ ಮಾಹಿತಿಗಾಗಿ ಲೌಡ್ ಸ್ಪೀಕರ್‌ಗಳಲ್ಲಿ ಹೊರಡಿಸಲಾಗುತ್ತಿದ್ದ ಘೋಷಣೆಗಳಿಗೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ. ಅದರ ಬದಲು ಕೇವಲ ಎಲೆಕ್ಟ್ರಾನಿಕ್ಸ್‌ ಡಿಸ್‌ಪ್ಲೇಗಳಲ್ಲಿ ಮಾತ್ರ ಮಾಹಿತಿ ತಿಳಿಸಲಾಗುತ್ತದೆ.

ವಿಮಾನ ನಿಲ್ದಾಣದಲ್ಲಿ ಲೌಡ್‌ಸ್ಪೀಕರ್‌ ಘೋಷಣೆಗಳಿಂದ ಪ್ರಯಾಣಿಕರಿಗೆ ಇದರಿಂದ ಕಿರಿಕಿರಿಯಾಗುತ್ತದೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಆಡಳಿತ ಈ ಉಪಕ್ರಮಕ್ಕೆ ಮುಂದಾಗಿದೆ.ಇನ್ನುಮುಂದೆ ವಿಮಾನ ಆಗಮನ- 1 ನಿರ್ಗಮನ, ವಿಳಂಬ ಸಹಿತ ವಿವಿಧ ಮಾಹಿತಿಯನ್ನು ಪ್ರಯಾಣಿಕರಿಗೆ ಏರ್ ಪೋರ್ಟ್‌ನಲ್ಲಿರುವ ಡಿಸ್‌ಪ್ಲೆ (ಫ್ಲೈಟ್ ಇನ್ಫಾರ್ಮೇಶನ್ ಡಿಸ್‌ಪ್ಲೇ ಸಿಸ್ಟಂ) ಮೂಲಕ ಪಡೆಯಬಹುದಾಗಿದೆ. ವಿಮಾನ ನಿಲ್ದಾಣದ ಒಳಭಾಗ ಮತ್ತು ಹೊರಭಾಗಗಳಲ್ಲಿ ದೊಡ್ಡ ಡಿಸ್ ಪ್ಲೇಯನ್ನು ಇರಿಸಲಾಗಿದೆ.

ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಸ್ ಯು’ ಡೆಸ್ಕ್ ಸ್ಥಾಪಿಸಲಾಗಿದ್ದು, ಅಲ್ಲಿ ಸಿಬ್ಬಂದಿ, ಕಾರ್ಯನಿರ್ವಾಹಕರು ಸಹಾಯಕ್ಕೆ ಇರಲಿದ್ದಾರೆ. ಎಲ್ಲ ಏರ್‌ಲೈನ್ಸ್ ಚೆಕ್- ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿಯೂ ವಿಮಾನದ ಮಾಹಿತಿ ಪಡೆಯಲು ಸಾಧ್ಯವಿದೆ.

ತಡೆರಹಿತ ಪ್ರಯಾಣದ ಮಾಹಿತಿಗೆ ಸಹಾಯ, ಬೋರ್ಡಿಂಗ್, ಗೇಟ್ ಬದಲಾವಣೆ, ವಿಮಾನದ ಮರು ವೇಳಾಪಟ್ಟಿ ಮುಂತಾದ ವಿಷಯಗಳು ಏರ್‌ಲೈನ್‌ನಿಂದ ಪ್ರಯಾಣಿಕರ ಮೊಬೈಲ್‌ಗೆ ಎಸ್‌ಎಂಎಸ್ ಅಥವಾ ಇ-ಮೈಲ್‌ ಸಂದೇಶ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಟರ್ಮಿನಲ್ ವ್ಯವಸ್ಥಾಪಕರ ಕಚೇರಿ ಅಥವಾ ಆಯಾ ವಿಮಾನಯಾನ ಸಂಸ್ಥೆಗೂ ಕರೆ ಮಾಡಬಹುದಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!