)
ಧಾರವಾಡ:
ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಸುಭಾಸ ಮಾದಣ್ಣವರ ಹಾಗೂ ರೈತ ಮುಖಂಡ ಶ್ರೀಶೈಲಗೌಡ ಕಮತರ, ಕಬ್ಬಿಗೆ ₹ 5500 ಬೆಂಬಲ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಸೆ. 29ರಂದು ಹುಬ್ಬಳ್ಳಿಯಲ್ಲಿ ನಡೆದ ಬೃಹತ್ ಪ್ರತಿಭಟನೆ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ರೈತ ಮುಖಂಡರನ್ನು ದೆಹಲಿಗೆ ಆಹ್ವಾನಿಸಿದ್ದು ಸ್ವಾಗತಾರ್ಹ. ಆದರೆ, ರಾಜಕಾರಣದ ಮೂಲಕ ರೈತರನ್ನು ದಾರಿ ತಪ್ಪಿಸುವ ಕೆಲಸ ಆಗಬಾರದು ಎಂದರು.
ಕಬ್ಬಿಗೆ ಬೆಂಬಲ ಬೆಲೆ ಹಾಗೂ ಎಫ್‌ಆರ್‌ಪಿ ದರವನ್ನು ಹೆಚ್ಚಳ ಮಾಡುವುದು, ಕಾರ್ಖಾನೆಗಳಲ್ಲಿ ತೂಕದ ಯಂತ್ರಗಳನ್ನು ತಾಂತ್ರಿಕ ದೋಷಗಳು ಇಲ್ಲದಂತೆ ನೋಡಿಕೊಳ್ಳಬೇಕು, ಸ್ವಾಮಿನಾಥನ್ ವರದಿ ಜಾರಿಗೆ ತರುವುದು, ಬರಗಾಲದ ಈ ಸಂದರ್ಭದಲ್ಲಿ ರೈತರಿಗೆ ಗೌರವಯುತ ಪರಿಹಾರ ಧನ ಒದಗಿಸುವುದು ಸೇರಿದಂತೆ ಕಳಸಾ-ಬಂಡೂರಿ ಜಾರಿಯಾಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಅ.12ರೊಳಗೆ ಸ್ಪಷ್ಟ ಭರವಸೆ ನೀಡಿಯೇ ರೈತ ಮುಖಂಡರನ್ನು ದೆಹಲಿಗೆ ಕರೆಯಬೇಕು. ಇಲ್ಲದೇ ಹೋದಲ್ಲಿ ಮತ್ತೇ ಪ್ರತಿಭಟನೆ ಮಾಡಬೇಕಾದೀತು ಎಂದು ಎಚ್ಚರಿಸಿದರು.ಸರ್ಕಾರದ ವಿರುದ್ಧ ವಾಗ್ದಾಳಿ:
ಯಾವ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡುತ್ತದೆಯೇ ಅದು ಯಾವತ್ತೂ ಉಳಿದಿರುವ ಉದಾಹರಣೆ ಇಲ್ಲ. ಈ ಹಿನ್ನಲೆಯಲ್ಲಿ ರಾಜ್ಯವಾಗಲಿ ಅಥವಾ ಕೇಂದ್ರವಾಗಲಿ ರೈತರೊಂದಿಗೆ ಎಚ್ಚರಿಕೆ ಹೆಜ್ಜೆಗಳನ್ನು ಇಡಬೇಕು ಎಂದು ಆಗ್ರಹಿಸಿದರು.