ಜಮೀರ್‌ ದೇಶಪ್ರೇಮದ ಬಗ್ಗೆ ಶಂಕೆ ಬೇಡ: ಯು.ಟಿ.ಖಾದರ್‌

KannadaprabhaNewsNetwork |  
Published : Aug 16, 2026, 04:00 AM IST
ಯು.ಟಿ.ಖಾದರ್‌ | Kannada Prabha

ಸಾರಾಂಶ

ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರ ದೇಶಪ್ರೇಮದ ಬಗ್ಗೆ ಯಾರೂ ಪ್ರಶ್ನಿಸುವಂತಿಲ್ಲ. ಅನಿವಾರ್ಯ ಕಾರಣಗಳಿಂದ ಅವರು ವಿಜಯನಗರ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಗೈರು ಆಗಿರುವುದಕ್ಕೆ ಪತ್ರ ಬರೆದಿದ್ದಾರೆ. ಇದನ್ನು ಅಪಾರ್ಥ ಮಾಡಿಕೊಂಡು ವಿಪಕ್ಷಗಳು ರಾಜಕೀಯ ಮಾಡುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಹೇಳಿದ್ದಾರೆ.

ಮಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರ ದೇಶಪ್ರೇಮದ ಬಗ್ಗೆ ಯಾರೂ ಪ್ರಶ್ನಿಸುವಂತಿಲ್ಲ. ಅನಿವಾರ್ಯ ಕಾರಣಗಳಿಂದ ಅವರು ವಿಜಯನಗರ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಗೈರು ಆಗಿರುವುದಕ್ಕೆ ಪತ್ರ ಬರೆದಿದ್ದಾರೆ. ಇದನ್ನು ಅಪಾರ್ಥ ಮಾಡಿಕೊಂಡು ವಿಪಕ್ಷಗಳು ರಾಜಕೀಯ ಮಾಡುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಹೇಳಿದ್ದಾರೆ.ಅವರು ಮಂಗಳೂರು ನೆಹರೂ ಮೈದಾನದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಜಮೀರ್‌ ಅಹ್ಮದ್‌ ಖಾನ್‌ ದೇಶದ ಅತ್ಯಂತ ಸತ್ಪ್ರಜೆಯಾಗಿದ್ದು, ಎಲ್ಲ ಸಂದರ್ಭದಲ್ಲೂ ಸೌಹಾರ್ದತೆ ಮತ್ತು ದೇಶಪ್ರೇಮವನ್ನು ಎತ್ತಿಹಿಡಿದಿದ್ದಾರೆ. ಕೆಲವೊಂದು ಕಾರಣಗಳಿಂದ ಅವರಿಗೆ ಇವತ್ತಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿ ಪತ್ರವನ್ನು ಬರೆದಿದ್ದಾರೆ. ಆ ಪತ್ರದ ಹಿಂದಿರುವ ಭಾವನೆ ಮತ್ತು ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು. ಆ ಪತ್ರದಲ್ಲಿರುವ ಒಂದೆರಡು ಶಬ್ದಗಳನ್ನು ಹಿಡಿದುಕೊಂಡು ಅಪಾರ್ಥ ಕಲ್ಪಿಸಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.ಖಾತೆ ಹಂಚಿಕೆ ಅಥವಾ ಮಂತ್ರಿ ಸ್ಥಾನದ ಅಸಮಾಧಾನದಿಂದಲೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು, ಎಐಸಿಸಿ ಅಧ್ಯಕ್ಷರು ಮತ್ತು ಮುಖಂಡರು ನಮ್ಮೆಲ್ಲರ ಜೊತೆ ಚರ್ಚೆ ಮಾಡಿಯೇ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಎಲ್ಲ ನಾಯಕರ ಒಪ್ಪಿಗೆಗೆ ಅನುಗುಣವಾಗಿಯೇ ನಡೆದಿದೆ. ನಮ್ಮಲ್ಲಿ ಯಾವುದೇ ಅಪಸ್ವರಗಳಿಲ್ಲ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಖಾದರ್‌ ತಿಳಿಸಿದರು.

ಧಾರ್ಮಿಕ ಸಭೆ-ಸಮಾರಂಭಗಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ಮಾತನಾಡುತ್ತಾ, ಸಂವಿಧಾನ ಮತ್ತು ಕಾನೂನಿಗೆ ಅನುಗುಣವಾಗಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಜನಸಾಮಾನ್ಯರಿಗೆ ತೊಂದರೆಯಾಗದಂತೆ, ವಿರೋಧ ಪಕ್ಷಗಳ ನಾಯಕರೊಂದಿಗೆ ಚರ್ಚಿಸಿ ಎಲ್ಲರ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವ ಸ್ಥಾನ ತಪ್ಪಲು ಎಂ.ಬಿ.ಪಾಟೀಲ ಕಾರಣ
ಹುನ್ನಾರಗಳಿಗೆ ಜನರೇ ಕಡಿವಾಣ ಹಾಕಲಿ