ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನಾ ಸಮಾರಂಭದ ಅಂಗವಾಗಿ ಶನಿವಾರ ನಡೆದ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿ ದರು.
ಮಾರ್ಚ್ ಎರಡನೇ ವಾರದಲ್ಲಿ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟವಾಗಬಹುದು. ಎರಡು ತಿಂಗಳಲ್ಲಿ ಚುನಾವಣೆ ಮುಗಿದೇ ಹೋಗಲಿದೆ. ಹಾಗಾಗಿ ಕಾರ್ಯಕರ್ತರು, ಮುಂಚೂಣಿ ಮುಖಂಡರು ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕೊಟ್ಟಿರುವ ಹಲವು ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿಕೊಡುವ ಕೆಲಸ ಮಾಡಬೇಕು ಎಂದ ಅವರು, ಅಭಿವೃದ್ಧಿ ಆಧಾರದ ಮೇಲೆ ವೋಟ್ ಕೇಳಿ ಎಂದು ಕರೆ ನೀಡಿದರು.ಡೆಲ್ಲಿಯ ಹಣ ಹಳ್ಳಿಗೆ ಬರಲು ಸಾಧ್ಯನಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದರು, ದೀನ ದಯಾಳ್ ವಿದ್ಯುದ್ದೀಕರಣ, ಪಿಎಂಜಿಎಸ್‌ಆರ್‌ವೈ, ಕಿಸಾನ್ ಸಮ್ಮಾನ್ ಸೇರಿದಂತೆ ಹಲವು ಯೋಜನೆಗಳನ್ನು ಜಾರಿ ಮಾಡುವ ಮೂಲಕ ಡೆಲ್ಲಿಯ ಹಣ ಹಳ್ಳಿಗಳಿಗೆ ತಲುಪಿದೆ. ಗ್ರಾಮೀಣ ಭಾಗದ ಶೇ. 90 ರಷ್ಟು ಜನರು ಸೌಲಭ್ಯ ಪಡೆದುಕೊಂಡಿದ್ದಾರೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು, ನರೇಂದ್ರಮೋದಿಯವರು ಪ್ರಧಾನಿಯಾಗಬೇಕು. ಹಾಗಾಗಿ ಯಾವುದೇ ಹಿಂಜರಿಕೆ ಇಲ್ಲದೆ ಬಿಜೆಪಿಗೆ ಮತ ಕೇಳಿ ಎಂದು ಹೇಳಿದರು.
ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಮಾತನಾಡಿ, ಈ ಬಾರಿ ಅಧಿವೇಶನವನ್ನು ಕೇಂದ್ರ ಸರ್ಕಾರವನ್ನು ಟೀಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಬಳಸಿಕೊಂಡಿತು. ಮಾತು ಮಾತಿಗೂ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಸಿ.ಟಿ. ರವಿ, ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನಕ್ಕೆ ಗೌರವ ಕೊಟ್ಟೆ ಗೊತ್ತಿಲ್ಲ, ಅರ್ಟಿಕಲ್ 370 ರದ್ದುಪಡಿಸುವವರೆಗೂ ಸಂವಿಧಾನದ ಪ್ರಕಾರ ಕಾಶ್ಮೀರಕ್ಕೆ ಮೀಸಲಾತಿ ಸಿಗುತ್ತಿರಲಿಲ್ಲ. ಸಂವಿಧಾನದ ಶಿಲ್ಪಿ ಬದುಕಿದ್ದಾಗಲೂ, ಸತ್ತಿದ್ದಾಗಲೂ ಅಪಮಾನ ಮಾಡಿದಂತಹ ಜನ. ಅಂಬೇಡ್ಕರ್ ಹೆಸರಿನಲ್ಲಿ ವಶೀಕರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಸಕ್ಷನ್ 356 ಬಳಸಿ ರಾಜ್ಯ ಸರ್ಕಾರವನ್ನು ವಜಾ ಮಾಡಿದ್ದು ಕಾಂಗ್ರೆಸ್ ಪಕ್ಷ. ಅವರಿಗೆ ಸಂವಿಧಾನದ ಬಗ್ಗೆ ಜಾಗೃತಿ ಇದ್ದಿದ್ದರೆ, ಈ ರೀತಿ ಮಾಡುತ್ತಿರಲಿಲ್ಲ. 1993 ರಲ್ಲಿ 4 ರಾಜ್ಯಗಳ ಸರ್ಕಾರವನ್ನು ವಜಾ ಮಾಡಿತು. ಸಂವಿಧಾನದ ಬಗ್ಗೆ ಗೌರವ ಇದ್ದಿದ್ದರೆ ಚುನಾಯಿತ ಸರ್ಕಾರಗಳನ್ನು ವಜಾ ಮಾಡುತ್ತಿರಲಿಲ್ಲ . ಇದು ಕಾಂಗ್ರೆಸ್‌ನ ಇತಿಹಾಸ. ಸಂವಿಧಾನ ದೇಶವನ್ನು ಜೋಡಿಸಿತು. ಜಾಗೃತಿ ಎಂದರೆ ದೇಶ ಒಡೆಯುವುದಲ್ಲ. ಎಂದು ಕಿವಿ ಮಾತು ಹೇಳಿದರು.
ಚಿಕ್ಕಮಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ತೆರೆಯಲಾದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರದ ಕಾರ್ಯಾಲಯವನ್ನು ಮಾಜಿ ಸಚಿವ ಸಿ.ಟಿ. ರವಿ ಉದ್ಘಾಟಿಸಿದರು. ಸಚಿವೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಇದ್ದರು.