ಆಂತರಿಕ ಸಮಸ್ಯೆಗಳ ಬಹಿರಂಗ ಹೇಳಿಕೆ ಬೇಡ: ಬಿವೈವಿ

KannadaprabhaNewsNetwork |  
Published : Jul 20, 2025, 01:20 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು, ಶನಿವಾರ ಕಲಬುರಗಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ವಿಭಾಗೀಯ ಸಂಘಟನಾ ಸಭೆ ನಂತರ, ಯಾದಗಿರಿ ಜಿಲ್ಲಾ ಘಟಕದ ಪದಾಧಿಕಾರಿಗಳೊಡನೆ ಪ್ರತ್ಯೇಕ ಸಭೆ ನಡೆಸಿದರು. | Kannada Prabha

ಸಾರಾಂಶ

ಪಕ್ಷದಲ್ಲಿ ಆಂತರಿಕ ಸಮಸ್ಯೆಗಳೇನೇ ಇದ್ದರೂ, ಬಹಿರಂಗವಾಗಿ ಹೇಳಿಕೆ ನೀಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಪಕ್ಷದಲ್ಲಿ ಆಂತರಿಕ ಸಮಸ್ಯೆಗಳೇನೇ ಇದ್ದರೂ, ಬಹಿರಂಗವಾಗಿ ಹೇಳಿಕೆ ನೀಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿರ್ದೇಶನ ನೀಡಿದರು.

ಶನಿವಾರ ಕಲಬುರಗಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ವಿಭಾಗೀಯ ಸಂಘಟನಾ ಸಭೆ ನಂತರ, ಯಾದಗಿರಿ ಜಿಲ್ಲಾ ಘಟಕದ ಪದಾಧಿಕಾರಿಗಳೊಡನೆ ಪ್ರತ್ಯೇಕ ಸಭೆ ನಡೆಸಿ ಮಾತನಾಡಿದ ಅವರು, ಆಂತರಿಕ ಸಮಸ್ಯೆ ಬಹಿರಂಗ ಮಾಡಬೇಡಿ, ಮುಂಬರುವ ಸ್ಥಳೀಯ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಂತೆ ಸೂಚನೆ ನೀಡಿದರು.

ಮುಂಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿವೆ. ಹೀಗಾಗಿ, ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ನಮ್ಮಲ್ಲಿ ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಧ್ಯೇಯವಿದೆ. ಆ ನಿಲುವಿಗೆ ಪ್ರತಿಯೊಬ್ಬರು ಬದ್ಧರಾಗಿರುವಂತೆ ಬಿ. ವೈ. ವಿಜಯೇಂದ್ರ ಹೇಳಿದರು.

ಬಿಜೆಪಿ ಯಾದಗಿರಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು. ಲಲಿತಾ ಅನಪುರ, ಮಾಜಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲರಡ್ಡಿ ನಾಯ್ಕಲ್‌, ನಿಕಟಪೂರ್ವ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್, ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಚೆನ್ನುಗೌಡ ಬಿಳ್ಹಾರ್‌, ಡಾ. ಚಂದ್ರಶೇಖರ ಸುಬೇದಾರ್, ಸದಾಶಿವಪ್ಪಗೌಡ ರೋಟ್ನಡನಗಿ, ಪರ್ವತರಡ್ಡಿ ಬೆಂಡೆಬೆಂಬಳಿ, ಬಸವರಾಜ ಸೊನ್ನದ, ಅಡಿವೆಪ್ಪ ಜಾಕಾ, ಮಾರುತಿ ಕಲಾಲ್, ದೇವಿಂದ್ರಪ್ಪ ಕೊನೇರ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಮೋರ್ಚಾ ಪದಾಧಿಕಾರಿಗಳು ಹಾಗೂ ಆರು ಮಂಡಳಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

---------------

ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಪ್ರವಾಸ ಮಾಡಲಾಗುವುದು. ಭ್ರಷ್ಟ ಕಾಂಗ್ರೆಸ್‌ ರಾಜ್ಯ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಸಲಾಗುತ್ತದೆ.

: ಬಿ. ವೈ. ವಿಜಯೇಂದ್ರ, ರಾಜ್ಯಾಧ್ಯಕ್ಷರು, ಭಾರತೀಯ ಜನತಾ ಪಕ್ಷ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!