ಕನ್ನಡ ಉಳಿಸುವುದು ಬೇಡ ಬಳಸಿದರೆ ಸಾಕು

KannadaprabhaNewsNetwork | Published : May 20, 2025 1:28 AM
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನಗರದ ಬಿ.ಕಾಟೀಹಳ್ಳಿಯ ಸಂತ ಜೋಸೆಫರ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಲೋಯೋಲಾ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಕನ್ನಡ ನಾಡು-ನುಡಿ ಸಾವಿರಾರು ವರ್ಷಗಳ ದೀರ್ಘ ಇತಿಹಾಸ ಮತ್ತು ಪರಂಪರೆಯನ್ನು ಒಳಗೊಂಡು ಶ್ರೀಮಂತವಾಗಿದೆ, ಇಂತಹ ಭಾಷೆಯನ್ನು ಉಳಿಸಿ ಬೆಳೆಸುವ ಕರ್ತವ್ಯ ಪ್ರತಿಯೊಬ್ಬ ಕನ್ನಡಿಗನಾದ್ದಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಇತರ ಭಾಷೆಗಳನ್ನು ಕಲಿಯುವ ಅಗತ್ಯತೆ, ಅನಿವಾರ್ಯತೆ ಇದೆ ನಿಜ, ಆದರೆ ನಮ್ಮ ಭಾಷೆಯನ್ನು ಬಳಸಿಕೊಂಡು ಹೋದರೆ ಸಾಕು ನಮ್ಮ ಹೃದಯದ ಭಾಷೆ,ಮಾತೃ ಭಾಷೆ ಕನ್ನಡ ಚಿರಸ್ಥಾಯಿಯಾಗಲಿದೆ ಎಂದರು.
Follow Us

ಕನ್ನಡಪ್ರಭ ವಾರ್ತೆ ಹಾಸನ

ಕನ್ನಡವನ್ನು ಉಳಿಸುವುದು, ಬೆಳೆಸುವುದು ಬೇಡ ಬಳಸಿದರೆ ಸಾಕು ಎಂದು ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಕೆ ಗಂಗಾಧರ್‌ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನಗರದ ಬಿ.ಕಾಟೀಹಳ್ಳಿಯ ಸಂತ ಜೋಸೆಫರ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಲೋಯೋಲಾ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಕನ್ನಡ ನಾಡು-ನುಡಿ ಸಾವಿರಾರು ವರ್ಷಗಳ ದೀರ್ಘ ಇತಿಹಾಸ ಮತ್ತು ಪರಂಪರೆಯನ್ನು ಒಳಗೊಂಡು ಶ್ರೀಮಂತವಾಗಿದೆ, ಇಂತಹ ಭಾಷೆಯನ್ನು ಉಳಿಸಿ ಬೆಳೆಸುವ ಕರ್ತವ್ಯ ಪ್ರತಿಯೊಬ್ಬ ಕನ್ನಡಿಗನಾದ್ದಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಇತರ ಭಾಷೆಗಳನ್ನು ಕಲಿಯುವ ಅಗತ್ಯತೆ, ಅನಿವಾರ್ಯತೆ ಇದೆ ನಿಜ, ಆದರೆ ನಮ್ಮ ಭಾಷೆಯನ್ನು ಬಳಸಿಕೊಂಡು ಹೋದರೆ ಸಾಕು ನಮ್ಮ ಹೃದಯದ ಭಾಷೆ,ಮಾತೃ ಭಾಷೆ ಕನ್ನಡ ಚಿರಸ್ಥಾಯಿಯಾಗಲಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಮ್ಯಾಕ್ಸಿಮ್ ಡಯಾಸ್ ಮಾತನಾಡಿ, ಕನ್ನಡಿಗರು ಕನ್ನಡವನ್ನು ನಿತ್ಯ ಬಳಸುವುದು ಮತ್ತು ಕನ್ನಡೇತರರಿಗೆ ಕನ್ನಡವನ್ನು ಸಣ್ಣಮಟ್ಟದಲ್ಲಾದರೂ ಕಲಿಸುವುದು ಅಗತ್ಯ. ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿರುವ ನಾವು ಭಾಷೆಯನ್ನು ಉಳಿಸಿ ಬೆಳೆಸುವುದಕ್ಕೆ ಸಂಬಂಧಪಟ್ಟ ಎಲ್ಲಾ ಸಾಧ್ಯತೆಗಳನ್ನು ಬಳಸಿಕೊಳ್ಳಲು ಮುಂದಾಗಬೇಕಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬಿ.ಆರ್‌. ಬೊಮ್ಮೇಗೌಡ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, 110 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಸರ್‌ ಎಂ.ವಿ,ಮಿರ್ಜಾ ಇಸ್ಮಾಯಿಲ್ ಅವರ ಆಶಯಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿಕೊಂಡು ಮುನ್ನಡೆಯುತ್ತಿದೆ ಎಂದರು.

ಕಸಾಪ ದತ್ತಿ ಕಾರ್ಯಕ್ರಮಗಳ ಮೂಲಕ, ಸಮ್ಮೇಳನಗಳ ಮೂಲಕ, ನಾಡು-ನುಡಿಯ ಸಾಧಕರನ್ನು ಸನ್ಮಾನಿಸುವ ಮೂಲಕ ಸಾಹಿತ್ಯಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಾಷೆಯ ಗಟ್ಟಿತನಕ್ಕೆ ಸದಾ ಜಾಗರೂಕವಾಗಿ ಕಾರ್ಯನಿರ್ವಹಿಸುವುದರ ಜೊತೆ ಜೊತೆಗೆ ಕನ್ನಡಿಗರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ರಂಗೇಗೌಡ ಮಾತನಾಡಿದರು. ಇದೇ ವೇಳೆ ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕಗಳಿಸಿದ ಜಿಲ್ಲಾ ಕಸಾಪ ಸಂಘಟನಾ ಸಹ ಕಾರ್ಯದರ್ಶಿ ನಾಗೇಸ್ ಎಂ.ಡಿ, ಪದಾಧಿಕಾರಿ ಕಮಲಮ್ಮ, ಹಾಸನ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ರಮೇಶ್, ಶಿಕ್ಷಕ ನಾಗರಾಜ್ ಹಾಗೂ ಕಾಲೇಜಿನ ಉಪನ್ಯಾಸಕ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.