ಜಲಸಂಪನ್ಮೂಲ ಇಲಾಖೇಲಿ ವರ್ಗವಾಣೆ ಬೇಡ : ಡಿಕೆಶಿ

KannadaprabhaNewsNetwork |  
Published : May 30, 2025, 12:58 AM ISTUpdated : May 30, 2025, 12:22 PM IST
fight against bjp jds from booth level dcm dk shivakumar calls rav

ಸಾರಾಂಶ

ಜಲಸಂಪನ್ಮೂಲ ಇಲಾಖೆಯಲ್ಲಿ ಎಂಜಿನಿಯರ್‌ಗಳ ಕೊರತೆಯಿದೆ. ಅದರ ನಡುವೆ ಎಂಜಿನಿಯರ್‌ಗಳು ಬಡ್ತಿ ಪಡೆದು ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ನನ್ನ ಗಮನ ತರದೇ ವರ್ಗಾವಣೆ ಮಾಡಬೇಡಿ ಎಂದು ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

  ಬೆಂಗಳೂರು : ಜಲಸಂಪನ್ಮೂಲ ಇಲಾಖೆಯಲ್ಲಿ ಎಂಜಿನಿಯರ್‌ಗಳ ಕೊರತೆಯಿದೆ. ಅದರ ನಡುವೆ ಎಂಜಿನಿಯರ್‌ಗಳು ಬಡ್ತಿ ಪಡೆದು ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ನನ್ನ ಗಮನ ತರದೇ ವರ್ಗಾವಣೆ ಮಾಡಬೇಡಿ ಎಂದು ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ತಾವು ನಿರ್ವಹಿಸುವ ಇಲಾಖೆಗಳಲ್ಲಿನ ಯಾವುದೇ ವರ್ಗಾವಣೆ, ನೇಮಕಾತಿಗೂ ಮುನ್ನ ತಮ್ಮ ಪೂರ್ವಾನುಮತಿ ಪಡೆಯುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಕುರಿತು ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ‘ಜಲಸಂಪನ್ಮೂಲ ಇಲಾಖೆಗೆ ತುರ್ತಾಗಿ ಎಂಜಿನಿಯರ್‌ಗಳು ಬೇಕು. ಆದ್ದರಿಂದ ನಮ್ಮ ಇಲಾಖೆಯಿಂದ ಯಾರನ್ನೂ ಬೇರೆಡೆಗೆ ಕಳುಹಿಸಬೇಡಿ ಎಂದು ಪತ್ರದಲ್ಲಿ ತಿಳಿಸಿದ್ದೇನೆ. ನಮ್ಮ ಇಲಾಖೆಗೆ ಬಂದು ಬಡ್ತಿ ಪಡೆದು ನಂತರ ಲೋಕೋಪಯೋಗಿ, ಜಿಲ್ಲಾ ಪಂಚಾಯತಿ ಸೇರಿದಂತೆ ಇತರ ಇಲಾಖೆಗಳಿಗೆ ವರ್ಗಾವಣೆ ಪಡೆಯುತ್ತಾರೆ. ಅದರಿಂದ ತುರ್ತು ಕಾರ್ಯಕ್ಕೂ ಎಂಜಿನಿಯರ್‌ಗಳಿಲ್ಲದಂತಾಗುತ್ತಿದೆ’ ಎಂದರು.ಒತ್ತಡ ಇದೆ:

ನಿಮ್ಮ ಅನುಮತಿಯಿಲ್ಲದೆ ಯಾರು ವರ್ಗಾವಣೆ ಮಾಡುತ್ತಾರೆ ಎಂಬ ಪ್ರಶ್ನೆಗೆ, ಉನ್ನತ ಮಟ್ಟದಲ್ಲಿ ಈ ರೀತಿ ವರ್ಗಾವಣೆ ಮಾಡಲು ಅವಕಾಶವಿದೆ. ಅನೇಕ ಶಾಸಕರು ತಮಗೆ ಬೇಕಾದವರನ್ನು ಬೇರೆ ಇಲಾಖೆಗೆ ಕಳುಹಿಸಿಕೊಡಿ ಎಂದು ಒತ್ತಡ ಹಾಕುತ್ತಾರೆ. ಅಲ್ಲದೆ, ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡಲು ಎಂಜಿನಿಯರ್‌ಗಳು ಮುಂದೆ ಬರುತ್ತಿಲ್ಲ. ಈ ಎಲ್ಲವನ್ನು ಗಮನಿಸಿ ನನ್ನ ಗಮನಕ್ಕೆ ತರದೇ ಯಾರನ್ನೂ ವರ್ಗಾವಣೆ ಮಾಡದಂತೆ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಇಲಾಖೆಯಲ್ಲಿ ಎಂಜಿನಿಯರ್ ಗಳ ವರ್ಗಾವಣೆ ಮಾಡದಂತೆ ಹಾಗೂ ಹಾಲಿ ಮಾಡಿರುವ ವರ್ಗಾವಣೆ ರದ್ದು ಪಡಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರ ಬಹಿರಂಗಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.ಕೋಟ್‌

ಉನ್ನತ ಮಟ್ಟದಲ್ಲಿ ಈ ರೀತಿ ವರ್ಗಾವಣೆ ಮಾಡಲು ಅವಕಾಶವಿದೆ. ಅನೇಕ ಶಾಸಕರು ತಮಗೆ ಬೇಕಾದವರನ್ನು ಬೇರೆ ಇಲಾಖೆಗೆ ಕಳುಹಿಸಿಕೊಡಿ ಎಂದು ಒತ್ತಡ ಹಾಕುತ್ತಾರೆ. ಅಲ್ಲದೆ, ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡಲು ಎಂಜಿನಿಯರ್‌ಗಳು ಮುಂದೆ ಬರುತ್ತಿಲ್ಲ. ಈ ಎಲ್ಲವನ್ನು ಗಮನಿಸಿ ನನ್ನ ಗಮನಕ್ಕೆ ತರದೇ ಯಾರನ್ನೂ ವರ್ಗಾವಣೆ ಮಾಡದಂತೆ ಹೇಳಿದ್ದೇನೆ.ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ==

PREV
Read more Articles on

Recommended Stories

ಮಾಲೇಗಾಂವ ಸ್ಫೋಟ ತೀರ್ಪು; ಸಂಭ್ರಮಾಚರಣೆ
ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಷಡ್ಯಂತ್ರ: ಪ್ರಮೋದ ಮುತಾಲಿಕ