ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬಿಂಡಿಗನವಿಲೆ ಹೋಬಳಿಯ ವಡ್ಡರಹಟ್ಟಿ ಗ್ರಾಮದಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿಯ ಉಪಕೇಂದ್ರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ತಾಲೂಕಿನ ಬಿದರಕೆರೆ ನ್ಯಾಯಬೆಲೆ ಅಂಗಡಿ ವ್ಯಾಪ್ತಿಯ ವಡ್ಡರಹಟ್ಟಿ ಗ್ರಾಮವು ಐದಾರು ಕಿ.ಮೀ.ದೂರವಿರುವುದರಿಂದ ಪ್ರತಿ ತಿಂಗಳು ಪಡಿತರ ಪದಾರ್ಥ ಪಡೆಯಲು ಹೋಗಿಬರುವುದು ಕಷ್ಟವಾಗುತ್ತಿದೆ ಎಂದು ಸ್ಥಳೀಯರು ಹಾಗೂ ಕಾರ್ಡ್‌ದಾರರು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದರು. ಕಾರ್ಡ್‌ದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿ ಉಪಕೇಂದ್ರ ತೆರೆಸಿದ್ದಾರೆ ಎಂದರು.
ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಮೂಡ್ಲೀಗೌಡ ಮಾತನಾಡಿ, ಬಡ ಕೂಲಿ ಕಾರ್ಮಿಕರೇ ವಾಸಿಸುತ್ತಿರುವ ವಡ್ಡರಹಟ್ಟಿ, ಆಚಾರ್‌ಪುರ ಮತ್ತು ಬ್ಯಾಡರಹಳ್ಳಿ ಗ್ರಾಮಗಳಲ್ಲಿ 150 ಕ್ಕೂ ಹೆಚ್ಚು ಕುಟುಂಬಗಳಿವೆ. ಅನ್ನಭಾಗ್ಯ ಯೋಜನೆಯ ಪಡಿತರ ಪದಾರ್ಥ ಪಡೆಯಲು ಐದು ಕಿ.ಮೀ.ಗೂ ಹೆಚ್ಚು ದೂರವಿರುವ ಬಿದರಕೆರೆ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾರ್ಣವಾಗಿತ್ತು . ಈಗ ಈ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ತಾಲೂಕು ಗ್ಯಾರಂಟಿ ಯೋಜನೆ ಸಮಿತಿಗೆ ಈ ಗ್ರಾಮಗಳ ಜನರು ಮನವಿ ಸಲ್ಲಿಸಿದ್ದರಿಂದ ಕಾರ್ಡ್‌ದಾರರ ಅನುಕೂಲಕ್ಕಾಗಿ ವಡ್ಡರಹಟ್ಟಿ ಗ್ರಾಮದಲ್ಲಿ ಉಪಕೇಂದ್ರ ತೆರೆಯಲಾಗಿದೆ. ಉಪ ಕೇಂದ್ರದಲ್ಲಿಯೇ ಮೂರು ಗ್ರಾಮಗಳ ಕಾರ್ಡ್‌ದರರಿಗೆ ಆಹಾರ ಪದಾರ್ಥ ವಿತರಿಸಲು ಕ್ರಮವಹಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.