ಕೊರೋನಾ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ

KannadaprabhaNewsNetwork |  
Published : May 27, 2025, 11:49 PM IST
ಎಚ್೨೫.೫-ಡಿಎನ್‌ಡಿ೧: ನಗರದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಆರ್.ವಿ.ದೇಶಪಾಂಡೆ ಭೆಟ್ಟಿ ನೀಡಿರುವ ಚಿತ್ರ. | Kannada Prabha

ಸಾರಾಂಶ

ಕೊರೋನಾ ಬಂದ ನಂತರ ಎಚ್ಚರಿಕೆ ತೆಗೆದುಕೊಳ್ಳುವ ಬದಲು ಕೊರೋನಾ ಮಹಾಮಾರಿ ಬರದಂತೆ ತಡೆಗಟ್ಟಲು ಆರೋಗ್ಯ ಇಲಾಖೆಯ ಜತೆ ಸಾರ್ವಜನಿಕರು ಸಹಕರಿಬೇಕು

ದಾಂಡೇಲಿ: ಮೂರು ವರ್ಷದ ನಂತರ ಮತ್ತೆ ಕೊರೋನಾ ಕಾಣಿಸಿಕೊಳ್ಳುತ್ತಿದೆ. ಕೊರೋನಾ ಬಗ್ಗೆ ಆತಂಕ, ಭಯ ಬೇಡ, ಆದರೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

ಅವರು ಭಾನುವಾರ ದಾಂಡೇಲಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಬಗ್ಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದು, ಆರೋಗ್ಯ ಇಲಾಖೆಗೆ ಸೂಕ್ತ ನಿರ್ದೇಶನ ಕೂಡ ನೀಡಿದೆ. ಹಳಿಯಾಳ, ಜೋಯಿಡಾ ತಾಲೂಕಾಸ್ಪತ್ರೆಯಲ್ಲಿ ಕೋವಿಡ್ ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಈಗಾಗಲೇ ಸಭೆ ನಡೆಸಿ ಅಗತ್ಯ ಮಾಹಿತಿ ನೀಡಲಾಗಿದೆ.

ಕೊರೋನಾ ಬಂದ ನಂತರ ಎಚ್ಚರಿಕೆ ತೆಗೆದುಕೊಳ್ಳುವ ಬದಲು ಕೊರೋನಾ ಮಹಾಮಾರಿ ಬರದಂತೆ ತಡೆಗಟ್ಟಲು ಆರೋಗ್ಯ ಇಲಾಖೆಯ ಜತೆ ಸಾರ್ವಜನಿಕರು ಸಹಕರಿಬೇಕು ಮತ್ತು ಅಗತ್ಯ ಮುಂಜಾಗ್ರತಾ ಕ್ರಮ ಪಾಲನೆ ಮಾಡಬೇಕು ಎಂದರು.

ವಿಶೇಷವಾಗಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದರು ತಕ್ಷಣವೆ ವೈದ್ಯರನ್ನು ಸಂಪರ್ಕಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಕುರಿತಾಗಿ ತಲಾ ೫ರಂತೆ ಪುರುಷರಿಗೆ ಮತ್ತು ಮಹಿಳೆಯರಿಗೆ ಹಾಸಿಗೆ ಮೀಸಲಿಡಲಾಗಿದೆ. ಕೋವಿಡ್ ಕುರಿತಾಗಿ ಅಗತ್ಯ ಔಷಧಿ ದಾಸ್ತಾನು ಇಡಲಾಗಿದೆ. ಕೋವಿಡ್ ಪರಿಕ್ಷಾ ಕೇಂದ್ರ ತೆರೆಯಲು ಸಹ ಸಿದ್ಧತೆ ನಡೆಸಲಾಗಿದೆ. ಕೊರೋನಾದ ಬಗ್ಗೆ ಯಾರು ಭಯ ಪಡದೇ ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ವ್ಯದ್ಯಾಧಿಕಾರಿ ಅನಿಲಕುಮಾರ ನಾಯ್ಕ, ನಗರಸಭೆಯ ಅಧ್ಯಕ್ಷ ಅಷ್ಪಾಕ ಶೇಖ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ನಗರಸಭಾ ಸದಸ್ಯ ಅನಿಲ ನಾಯ್ಕರ, ಮಾಜಿ ನಗರಸಭಾ ಸದಸ್ಯ ಅನಿಲ ದಂಡಗಲ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಸಿರ ಗಿರಿಯಾಳ, ಹಳಿಯಾಳ ಪುರಸಭೆಯ ನಾಮನಿರ್ದೇಶಿತ ಸದಸ್ಯ ರವಿ ತೊರಣಗಟ್ಟಿ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''