ಧಾರವಾಡ:
ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಕಲಿ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳದೆ ಇದ್ದರೆ ಡಿಎಚ್‌ಒ, ಟಿಎಚ್‌ಒಗಳ ಮೇಲೆಯೇ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ವೈದ್ಯರ ವರ್ಗಾವಣೆ ಸಮಾಲೋಚನೆಯಲ್ಲಿ ಪತಿ-ಪತ್ನಿ ಒಂದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗುವಂತೆ ಕೆಲವು ಬದಲಾವಣೆ ತರಲಾಗುವುದು. ಉತ್ತಮ ಸೇವೆ ಸಲ್ಲಿಸಿರುವ ವೈದ್ಯರಿಗೆ ಅದೇ ಸ್ಥಳದಲ್ಲಿ ಮುಂದುವರಿಯಲು ಅವಕಾಶ ನೀಡಲಾಗುವುದು ಎಂದ ಅವರು, ಗುತ್ತಿಗೆ ಆಧಾರದ ಮೇಲೆ 3ರಿಂದ 5 ವರ್ಷ ಸೇವೆ ಸಲ್ಲಿಸಿರುವ ವೈದ್ಯರನ್ನು ಕಾಯಂಗೊಳಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.ಇಲಾಖೆಯಲ್ಲಿ ಬಹಳ ಹುದ್ದೆಗಳನ್ನು ಭರ್ತಿ ಮಾಡಿದ್ದು ಕೆಲವೆಡೆ ಮಾತ್ರ ಎಂಬಿಬಿಎಸ್ ವೈದ್ಯರ ಕೊರತೆ ಇದೆ. ಈ ಹುದ್ದೆಗಳ ಭರ್ತಿಗೆ ಆದೇಶಿಸಲಾಗಿದೆ. ತಾಲೂಕು ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೊರತೆಯನ್ನೂ ತಕ್ಷಣ ಸರಿಪಡಿಸಲಾಗುವುದು ಎಂದ ಸಚಿವರು, ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ವೈದ್ಯರು ಮತ್ತು ಸಿಬ್ಬಂದಿಯ ಪ್ರಮುಖ ಜವಾಬ್ದಾರಿ. ಸಣ್ಣ-ಪುಟ್ಟ ಲೋಪದೋಷಗಳಿಂದ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡದಂತೆ ಎಚ್ಚರ ವಹಿಸಬೇಕು ಎಂದರು.
ಆಸ್ಪತ್ರೆಗಳ ಸ್ವಚ್ಛತೆ, ಪೇಂಟಿಂಗ್ ಸೇರಿದಂತೆ ಸಣ್ಣ-ಪುಟ್ಟ ಅಗತ್ಯಗಳಿಗೆ ಸ್ಥಳೀಯ ಸಂಘ-ಸಂಸ್ಥೆ, ದಾನಿಗಳು ಹಾಗೂ ಕಾಲೇಜುಗಳ ಎನ್‌ಸಿಸಿ ತಂಡಗಳ ಸಹಕಾರ ಪಡೆಯಬೇಕು. ಅಗತ್ಯವಿರುವ ರೋಗಿಗಳನ್ನು 108 ಆ್ಯಂಬುಲೆನ್ಸ್ ಮೂಲಕ 30 ನಿಮಿಷಗಳಲ್ಲಿ ತಾಲೂಕು ಆಸ್ಪತ್ರೆಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಬೇಕು. ತಾಲೂಕು ಆಸ್ಪತ್ರೆಗಳಲ್ಲೇ ಮರಣೋತ್ತರ ಪರೀಕ್ಷೆ ಸೇರಿದಂತೆ ಪ್ರಮುಖ ಚಿಕಿತ್ಸಾ ಸೌಲಭ್ಯ ಒದಗಿಸಿ, ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳನ್ನು ಸುಸಜ್ಜಿತಗೊಳಿಸಬೇಕು ಎಂದು ಅವರು ಹೇಳಿದರು.