ಶಿವಮೊಗ್ಗದಲ್ಲಿ ಅಣು ವಿದ್ಯುತ್‌ ಸ್ಥಾವರ ಸ್ಥಾಪನೆ ಬೇಡ: ಸಂಸದ ಬಿ.ವೈ.ರಾಘವೇಂದ್ರ

KannadaprabhaNewsNetwork |  
Published : Apr 27, 2026, 01:30 AM IST
ಬಿ.ವೈ.ರಾಘವೇಂದ್ರ | Kannada Prabha

ಸಾರಾಂಶ

ಕೇಂದ್ರ ಸಚಿವರಿಗೆ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿದಂತೆ ಪ್ರಸ್ತಾವನೆ ಕೈಬಿಡಲು ಮನವರಿಕೆ ಮಾಡಿಕೊಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕೇಂದ್ರ ಸಚಿವರಿಗೆ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿದಂತೆ ಪ್ರಸ್ತಾವನೆ ಕೈಬಿಡಲು ಮನವರಿಕೆ ಮಾಡಿಕೊಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಇತ್ತೀಚಿಗೆ ಪತ್ರಿಕೆಗಳಲ್ಲಿ ಸಾಗರ ತಾಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಸಂಬಂಧ ಗ್ರಾಮೀಣ ಭಾಗದ ಜನರು ಆತಂಕದಲ್ಲಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾದ ನಂತರ ಈ ಕುರಿತು ಹೇಳಿಕೆ ನೀಡಿದ್ದಾರೆ.

ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಲಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಶರಾವತಿ ಸಂತ್ರಸ್ತರಿಗೆ ಇಂದಿಗೂ ಸಮರ್ಪಕ ಭೂಪರಿಹಾರ ಒದಗಿಸಲಾಗಿಲ್ಲ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಸರ ಆಸಕ್ತರು ಮತ್ತು ಬುದ್ಧಿಜೀವಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿರುತ್ತಾರೆ. ಈ ಸಂಬಂಧ ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಪರಿಸರ ಹಾನಿ ಉಂಟಾಗುವ ಯಾವುದೇ ಯೋಜನೆಗೂ ತಮ್ಮ ಸ್ಪಷ್ಟ ವಿರೋಧವಿದ್ದು, ಜನರ ಹಿತಾಸಕ್ತಿ ಕಾಪಾಡಲು ಬದ್ಧರಾಗಿರುವುದಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಧೀನದ ಎನ್‌ಟಿಪಿಸಿ (ನ್ಯಾಷನಲ್‌ ಥರ್ಮಲ್‌ ಪವರ್‌ ಕಾರ್ಪೊರೇಷನ್‌) ಸಂಸ್ಥೆಯಿಂದ ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೂಕ್ತ ಸ್ಥಳಗಳ ಆಯ್ಕೆಗಾಗಿ ಪ್ರಾಥಮಿಕ ಅಧ್ಯಯನಗಳು ಹಾಗೂ ಭೂ-ವೈಜ್ಞಾನಿಕ ಪರಿಶೀಲನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆಮನೆಗಳಲ್ಲಿ ಶ್ರೀ ಶಂಕರ ಜಯಂತಿ ಆಚರಣೆ
ಹಣಕ್ಕಿಂತ ಆರೋಗ್ಯವೇ ಅಮೂಲ್ಯ ಎಂದ ಶಾಸಕ ಸ್ವರೂಪ್‌