ಕನ್ನಡ ಭಾಷೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಮಂಕಾಳ ವೈದ್ಯ

KannadaprabhaNewsNetwork |  
Published : Nov 02, 2026, 03:30 AM IST
ಪೊಟೋ ಪೈಲ್ : 1ಬಿಕೆಲ್1,2 | Kannada Prabha

ಸಾರಾಂಶ

ಧ್ವಜಾರೋಹಣ ನಡೆಸಿ ಮಾತನಾಡಿದ ಸಹಾಯಕ ಆಯುಕ್ತ ಜೆ ಮಹೇಶ ಅವರು, ಕನ್ನಡ ಭಾಷೆಯಲ್ಲ ಅದೊಂದು ನಮ್ಮ ಅಸ್ಮಿತೆ. ಕನ್ನಡ ನಾಡು, ಭಾಷೆ ಉಳಿಸಲು ನಾವೆಲ್ಲರೂ ಶ್ರಮಿಸೋಣ ಎಂದರು.

ಭಟ್ಕಳ: ಕನ್ನಡವೊಂದು ಅದ್ಭುತ ಭಾಷೆಯಾಗಿದೆ. ಕನ್ನಡ ಭಾಷೆ ನಮ್ಮ ಆಸ್ತಿ. ಇದನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನಸಭಾ ಉಪಸಭಾಧ್ಯಕ್ಷ ಮಂಕಾಳ ಎಸ್. ವೈದ್ಯ ಹೇಳಿದರು.

ಅವರು ತಾಲೂಕು ಕ್ರೀಡಾಂಗಣದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ಭಾಷೆ ನಿರಂತರವಾಗಿ ಇರಲಿದೆ. ಕನ್ನಡ ಭಾಷೆಯ ಬಳಕೆ ಹೆಚ್ಚಾಗಬೇಕು. ಮನೆಯಲ್ಲಿ ಕನ್ನಡ ಭಾಷೆ ಬಳಕೆಯಾಗಬೇಕು. ಮಾತೃಭಾಷೆಯಾಗಿರುವ ಕನ್ನಡಕ್ಕೆ ತನ್ನದೇ ಆದ ಮಹತ್ವವಿದ್ದು, ಈ ಭಾಷೆಯನ್ನು ಕಡೆಗಣಿಸುವುದು ಸರಿಯಲ್ಲ. ಈ ಭಾಷೆ ಸದಾ ಉಳಿಯಬೇಕು ಎಂದರು.

ಧ್ವಜಾರೋಹಣ ನಡೆಸಿ ಮಾತನಾಡಿದ ಸಹಾಯಕ ಆಯುಕ್ತ ಜೆ ಮಹೇಶ ಅವರು, ಕನ್ನಡ ಭಾಷೆಯಲ್ಲ ಅದೊಂದು ನಮ್ಮ ಅಸ್ಮಿತೆ. ಕನ್ನಡ ನಾಡು, ಭಾಷೆ ಉಳಿಸಲು ನಾವೆಲ್ಲರೂ ಶ್ರಮಿಸೋಣ ಎಂದರು.

ಉಪನ್ಯಾಸ ನೀಡಿದ ನ್ಯಾಯವಾದಿ ಧನ್ಯಕುಮಾರ ಜೈನ್, ಕನ್ನಡ ನಾಡು, ಭಾಷೆಯ ಬಗ್ಗೆ ನಾವೆಲ್ಲರೂ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಗೆ ಸಂವಿಧಾನದಲ್ಲೂ ಅಧಿಕೃತ ಸ್ಥಾನವಿದೆ. ಕನ್ನಡ ಭಾಷೆ ಆಡಳಿತ ಭಾಷೆಯಾಗಿದ್ದು, ಇದರ ಬಳಕೆ ಹೆಚ್ಚಾಗಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ ನಾಯ್ಕ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ಮಾತನಾಡಿದರು. ಭಟ್ಕಳ ನಗರಸಭೆ ಪೌರಾಯುಕ್ತ ಬಾಬಾ ಸಾಹೇಬ ಮಾನೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ, ಜಾಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಪ್ಪ, ಜಾಲಿ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಈಶ್ವರ ಮೊಗೇರ ಮುಂತಾದವರಿದ್ದರು. ಕಾರ್ಯಕ್ರಮದಲ್ಲಿ ಜಾನಪದ ಕಲೆಯಲ್ಲಿ ಸಾಧನೆ ಮಾಡಿದ ಈಶ್ವರ ಕೆ. ಮೊಗೇರ ಗೊರಟೆ, ಭಜನೆಯಲ್ಲಿ ಸಾಧನೆ ಮಾಡಿದ ಅನಂತ ಹೆಗಡೆ, ಡಕ್ಕೆ ಕುಣಿತಕ್ಕೆ ಗಣಪಯ್ಯ ಗೊಂಡ, ನಾಟಕ ಕ್ಷೇತ್ರದಲ್ಲಿ ಭಾಸ್ಕರ ನಾಯ್ಕ ಸರ್ಪನಕಟ್ಟೆ, ಸಮಾಜ ಸೇವೆಗಾಗಿ ಡಾ. ಲಿಂಗಪ್ರಸಾದ, ಯಕ್ಷಗಾನ ಕ್ಷೇತ್ರದಲ್ಲಿ ನಾಗಪ್ಪ ದೇವಡಿಗ, ಸಂಗೀತ ಕ್ಷೇತ್ರದಲ್ಲಿ ಪವಿತ್ರ ನಾಯ್ಕ, ಸಾಹಿತ್ಯ ಕ್ಷೇತ್ರಕ್ಕೆ ಕೃಷ್ಣ ಮೊಗೇರ, ಪತ್ರಕರ್ತರ ವಿಭಾಗದಲ್ಲಿ ಹಿರಿಯ ಪತ್ರಕರ್ತ ಸತೀಶಕುಮಾರ ನಾಯ್ಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ತಾಪಂ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ ವಂದಿಸಿದರು. ಶಿಕ್ಷಕ ಶ್ರೀಧರ ಶೇಟ್ ಶಿರಾಲಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರ ಮಕ್ಕಳಿಗೆ ಹಳ್ಳಿ ಜೀವನ ಪರಿಚಯಿಸುವ ‘ಗ್ರಾಮಾನುಭವ’ಕ್ಕೆ ಚಾಲನೆ
ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ: ರಿಝ್ವಾನ್ ಅರ್ಷದ್