ಚಿತ್ರದುರ್ಗದಲ್ಲಿ ಬಡವರ ಸಮಸ್ಯೆಗಳ ಕೇಳುವರೇ ಇಲ್ಲ

KannadaprabhaNewsNetwork |  
Published : Jun 08, 2026, 01:15 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್ (ಇದನ್ನೇ ಮಾಡಿಕೊಳ್ಲಿ) | Kannada Prabha

ಸಾರಾಂಶ

ಚಿತ್ರದುರ್ಗದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ನಡೆದ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆಯಲ್ಲಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ವೆಂಕಟೇಶ ಯಾದವ್, ಲೋಕೇಶ್ ಪಾಲ್ಗೊಂಡಿದ್ದರು.

ಜಿ.ಎಚ್.ತಿಪ್ಪಾರೆಡ್ಡಿ ಆರೋಪ । ಇ-ಖಾತೆಗಾಗಿ ಬಡವರ ಅಲೆದಾಟಕ್ಕೆ ಬೇಸರ ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಚಿತ್ರದುರ್ಗ ನಗರದಲ್ಲಿ ಬಡವರ ಸಮಸ್ಯೆಗಳ ಕೇಳುವರೇ ಇಲ್ಲದಂತಾಗಿದೆ. ನಗರಸಭೆಯಲ್ಲಿ ಇ-ಖಾತೆ ಸಿಗುತ್ತಿಲ್ಲ. ಇದಕ್ಕಾಗಿ ಬಡವರು ದಿನಂಪ್ರತಿ ನಗರಸಭೆ ಕಾರ್ಯಾಯಕ್ಕೆ ಅಲೆದಾಡುವಂತಾಗಿದೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ತಾವು ಶಾಸಕರಾಗಿದ್ದ ಅವಧಿಯಲ್ಲಿ 11 ಸಾವಿರ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡಲಾಗಿತ್ತು. ನಗರ ಮತ್ತು ಗ್ರಾಮೀಣ ಭಾಗದಲ್ಲಿ 34 ಸಾವಿರ ಆಶ್ರಯ ಮನೆಗಳನ್ನು ವಿತರಿಸಿದ್ದೆ. ಕುಡಿಯುವ ನೀರಿಗಾಗಿ ಬಿಜೆಪಿ ಸರ್ಕಾರ 593 ಕೋಟಿ ರು. ಅನುದಾನ ನೀಡಿತ್ತು ಎಂದರು.

ಮುಂದಿನ ದಿನಗಳಲ್ಲಿ ಎದುರಾಗುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಲ್ಲ 35 ವಾರ್ಡ್‌ಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಹಾಕಿ ಅವರನ್ನು ಗೆಲ್ಲಿಸುವ ಜವಾಬ್ಧಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಾಧನೆ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಜನೋಪಯೋಗಿ ಕೆಲಸಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕು. ಆ ಮೂಲಕ ಜಿಲ್ಲೆಯಲ್ಲಿ ಬಿಜೆಪಿಯನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.

ಮಾತೆತ್ತಿದರೆ ಗ್ಯಾರಂಟಿಗಳ ಬಗ್ಗೆ ಮಾತನಾಡುವ ಕಾಂಗ್ರೆಸ್ ಜನರಿಗೆ ಸಕಾಲದಲ್ಲಿ ಗ್ಯಾರಂಟಿ ಸೌಲಭ್ಯ ನೀಡುತ್ತಿಲ್ಲ. ದುರಾಡಳಿತಕ್ಕೆ ಜನ ರೋಸಿ ಹೋಗಿದ್ದಾರೆ. ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಗೆದ್ದಿರುವ ರಾಜ್ಯಗಳಲ್ಲಿ ಮತದಾರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ಯಾವುದೇ ಚಕಾರವಿಲ್ಲ. ಕೇರಳದಲ್ಲಿ ಕಾಂಗ್ರೆಸ್ ಹಾಗೂ ತಮಿಳುನಾಡಿನಲ್ಲಿ ಕಾಂಗ್ರೆಸ್ ಮಿತ್ರಪಕ್ಷ ಟಿವಿಕೆ ಪಕ್ಷ ಗೆದ್ದಿದೆ.

ಈ ರಾಜ್ಯಗಳಲ್ಲಿ ಚುನಾವಣಾ ಆಯೋಗ ದುರ್ಬಳಕೆಯಾಗಿಲ್ಲ. ಆದರೆ ಬಿಜೆಪಿ ಪಕ್ಷ ಗೆದ್ದಿರುವ ರಾಜ್ಯಗಳಲ್ಲಿ ಮಾತ್ರ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸುವುದು ಹಾಸ್ಯಾಸ್ಪದ ಎಂದರು.

ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲಬೆಲೆ ಹೆಚ್ಚಾಗಿದೆ. ಆದಾಗ್ಯೂ ಪ್ರಧಾನಿ ನರೇಂದ್ರ ಮೋದಿ ಸಮರ್ಥವಾಗಿ ಅದನ್ನು ನಿಭಾಯಿಸಿದ್ದಾರೆ. ಅನೇಕ ರಾಷ್ಟ್ರಗಳ ನಾಯಕರು ಮೋದಿ ಅವರನ್ನು ವಿಶ್ವ ನಾಯಕ ಎಂದು ಕೊಂಡಾಡುತ್ತಿದ್ದಾರೆ. ದೇಶದಲ್ಲಿ 85 ಕೋಟಿ ಜನರಿಗೆ ಉಚಿತ ಪಡಿತರ ಧಾನ್ಯ ನೀಡಲಾಗುತ್ತಿದೆ. ಶೇ.20ರಷ್ಟು ಬೀದಿಬದಿ ವ್ಯಾಪಾರಿಗಳ ಸ್ಥಿತಿ ಸುಧಾರಿಸಿದೆ. ಇದರಿಂದ ದೇಶದಲ್ಲಿ ಬಡತತ ರೇಖೆಗಿಂತ ಕೆಳಗಿರುವವರ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್ ಪಕ್ಷ ಸಂಘಟನೆ ಕುರಿತು ಮಾತನಾಡಿದರು. ಬಿಜೆಪಿ ನಗರ ಮಂಡಲ ಅಧ್ಯಕ್ಷ ಲೋಕೇಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎ.ರೇಖಾ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ಸಹ ವಕ್ತಾರ ಚಾಲುಕ್ಯ ನವೀನ್, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಬಾಲರಾಜ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರುಣ್ ಕುಮಾರ್, ಮಾಜಿ ನಗರಸಭಾ ಸದಸ್ಯ ಸುರೇಶ್, ನಗರ ಪ್ರಧಾನ ಕಾರ್ಯದರ್ಶಿ ಲೀಲಾ ಶಶಿಧರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಕ್ ಉಗ್ರರ ಜತೆ ಮತ್ತಷ್ಟು ಜನಕ್ಕೆ ನಂಟು ಸಾಧ್ಯತೆ!: ರಾಜನಹಳ್ಳಿ ಶಿವಕುಮಾರ ಶಂಕೆ
ಶಾಸಕ ಎಸ್.ಎಸ್.ಮಲ್ಲಿಕಾರ್ಜುನ, ಸಲೀಂಗೆ ಸಚಿವ ಸ್ಥಾನಕ್ಕೆ ಒತ್ತಾಯ