ನೋಟಿಸ್‌ಗೆ ಯಾರೂ ಭಯಪಡಬೇಕಾದ ಅಗತ್ಯವಿಲ್ಲ

KannadaprabhaNewsNetwork |  
Published : Mar 24, 2025, 12:34 AM IST
ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ತಾಲೂಕು ಪಂಚಾಯಿತಿ ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿ ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು | Kannada Prabha

ಸಾರಾಂಶ

ಭದ್ರಾವತಿ: ರಾಜ್ಯ ಸರ್ಕಾರ ಎಂದಿಗೂ ರೈತರ ಪರವಾಗಿದ್ದು, ಯಾವುದೇ ಕಾರಣಕ್ಕೂ ಅವರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಪ್ರಸ್ತುತ ಬಗರ್‌ಹುಕುಂ ಸಾಗುವಳಿದಾರರಿಗೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಭದ್ರಾವತಿ: ರಾಜ್ಯ ಸರ್ಕಾರ ಎಂದಿಗೂ ರೈತರ ಪರವಾಗಿದ್ದು, ಯಾವುದೇ ಕಾರಣಕ್ಕೂ ಅವರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಪ್ರಸ್ತುತ ಬಗರ್‌ಹುಕುಂ ಸಾಗುವಳಿದಾರರಿಗೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಭಾನುವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಗರ್ ಹುಕುಂ ಸಾಗುವಳಿದಾರರಿಗೆ ನೀಡಿರುವ ನೋಟಿಸ್‌ನಿಂದ ಯಾರು ಭಯಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಎದುರಾಗಿರುವ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವ ಸಂಬಂಧ ಶಾಸಕರು ಹೆಚ್ಚಿನ ಶ್ರಮವಹಿಸುತ್ತಿದ್ದಾರೆ. ಅವರೊಂದಿಗೆ ನಾನು ಸಹ ಕೈಜೋಡಿಸುತ್ತೇನೆ. ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಒಂದು ವೇಳೆ ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸುವ ಅಗತ್ಯವಿದ್ದಲ್ಲಿ ಇದ್ದಕ್ಕೂ ಸಹ ಸಿದ್ಧನಿದ್ದೇನೆ ಎಂದರು. ಪಕ್ಷದ ಜಿಲ್ಲಾಧ್ಯಕ್ಷ, ವಿಧಾನಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷರಾದ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಆದೇಶದಂತೆ ತಾಪಂ ಹಾಗೂ ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ತಾಲೂಕು ಹಾಗೂ ಜಿಲ್ಲೆಗಳಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗುತ್ತಿದೆ. ಕ್ಷೇತ್ರದಲ್ಲಿ ಈಗಾಗಲೇ ನಗರಸಭೆ ಆಡಳಿತ ಕಾಂಗ್ರೆಸ್ ಪಕ್ಷದಲ್ಲಿದ್ದು, ಶಾಸಕರ ನೇತೃತ್ವದಲ್ಲಿ ಪಕ್ಷ ಹೆಚ್ಚು ಕ್ರಿಯಾಶೀಲವಾಗಿದೆ. ಈ ಹಿನ್ನೆಲೆಯಲ್ಲಿ ತಾಪಂ ಹಾಗೂ ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. ಶಾಸಕ ಬಿ.ಕೆ.ಸಂಗಮೇಶ್ವರ್ ಮಾತನಾಡಿ, ಚುನಾವಣೆಯಲ್ಲಿ ಎಲ್ಲರಿಗೂ ಟಿಕೆಟ್ ಕೊಡಲು ಸಾಧ್ಯವಿಲ್ಲ. ಪಕ್ಷ ಯಾರನ್ನು ಆಯ್ಕೆ ಮಾಡುತ್ತವೆಯೋ ಅವರನ್ನು ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸಬೇಕು. ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಅವುಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ಕುರಿತು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು. ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್.ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್.ಷಡಾಕ್ಷರಿ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಪ್ರಮುಖರಾದ ಚಂದ್ರಭೂಪಾಲ, ವೈ.ರೇಣುಕಮ್ಮ, ಬಿ.ಕೆ.ಮೋಹನ್, ಬಿ.ಕೆ.ಶಿವಕುಮಾರ್, ಸಿ.ಎಂ.ಖಾದರ್, ಎಸ್.ಮಣಿಶೇಖರ್, ಬಿ.ಎಸ್.ಗಣೇಶ್, ಸುಕನ್ಯ ದಶರಥಗಿರಿ, ಎಚ್.ರವಿಕುಮಾರ್, ನಗರಸಭೆ ಸದಸ್ಯರಾದ ವಿ.ಕದಿರೇಶ್, ಶಶಿಕಲಾ ನಾರಾಯಣಪ್ಪ, ಬಿ.ಟಿ.ನಾಗರಾಜ್, ಅಮೀರ್ ಜಾನ್, ಗಂಗಾಧರ್, ಎಂ.ಶಿವಕುಮಾರ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV

Recommended Stories

ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು