ಭಟ್ಕಳ: ಇಲ್ಲಿನ ಅರ್ಬನ್ ಬ್ಯಾಂಕ್ ಸಭಾಭವನದಲ್ಲಿ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಸಚಿವ ಮಂಕಾಳು ಎಸ್. ವೈದ್ಯ ಉದ್ಘಾಟಿಸಿದರು.
ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೊದಲ ಮೂರು ಸ್ಥಾನ ಪಡೆದ ಹರ್ಷನ್ ನಾಗಯ್ಯ ಗೊಂಡ, ಮೈಮುನಾ ಆಜೈಬ್, ಭಾವನಾ ಪ್ರಭಾಕರ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಅಲ್ಲದೇ ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದಿರುವ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳ 21 ಮುಖ್ಯ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಇಲಾಖೆಯ ವತಿಯಿಂದ ನೀಡಿರುವ ಲ್ಯಾಪ್‌ಟಾಪ್‌ನ್ನು ಸಚಿವರು ವಿತರಿಸಿದರು. ಇದೇ ವೇಳೆ ಈ ವರ್ಷದ ಶೈಕ್ಷಣಿಕ ಸಾಧನೆಗೆ ವಿನೂತನ ಕಾರ್ಯಕ್ರಮಗಳಿಂದ ಕಾರ್ಯಯೋಜನೆ ರೂಪಿಸಿ ಯಶಸ್ಸನ್ನು ಪಡೆದಿರುವ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೊಗೇರ ಅವರನ್ನು ಸಚಿವರು ಸನ್ಮಾನಿಸಿದರು.ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಎನ್.ಜಿ. ನಾಯಕ, ಜಿಲ್ಲಾ ಅಕ್ಷರ ದಾಸೋಹ ನಿರ್ದೇಶಕ ವಿ.ಟಿ. ನಾಯ್ಕ, ತಹಸೀಲ್ದಾರ್ ನಾಗರಾಜ ನಾಯ್ಕಡ ಮುಂತಾದವರಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಪೂರ್ಣಿಮಾ ಮೊಗೇರ ವಂದಿಸಿದರು.