ಯಾರಿಗೂ ನ್ಯಾಯ ಪಡೆವ ಅವಕಾಶ ತಪ್ಪಬಾರದು: ನ್ಯಾಯಾಧೀಶ ಹನುಮಂತಪ್ಪ

KannadaprabhaNewsNetwork |  
Published : Nov 12, 2025, 01:00 AM IST
ಚಿಕ್ಕಮಗಳೂರಿನ ಶ್ರೀ ಶಾರದಾ ಸ್ಕೂಲ್ ಆಫ್ ಲಾ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯನ್ನು ನ್ಯಾ. ವಿ.ಹನುಮಂತಪ್ಪ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಭಾರತ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶಗಳನ್ನು ಕಲ್ಪಿಸಿದ್ದು, ಆರ್ಥಿಕವಾಗಿ ದುರ್ಬಲರಾಗಿರುವ, ಅಂಗವೈಕಲ್ಯದ ಕಾರಣದಿಂದ ಯಾರೂ ಕೂಡ ನ್ಯಾಯ ಪಡೆಯುವ ಅವಕಾಶಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಭಾರತ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶಗಳನ್ನು ಕಲ್ಪಿಸಿದ್ದು, ಆರ್ಥಿಕವಾಗಿ ದುರ್ಬಲರಾಗಿರುವ, ಅಂಗವೈಕಲ್ಯದ ಕಾರಣದಿಂದ ಯಾರೂ ಕೂಡ ನ್ಯಾಯ ಪಡೆಯುವ ಅವಕಾಶಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶ್ರೀ ಶಾರದಾ ಸ್ಕೂಲ್ ಆಫ್ ಲಾ, ಜಿಲ್ಲಾ ವಕೀಲರ ಸಂಘ, ವಾರ್ತಾ ಇಲಾಖೆ ವತಿಯಿಂದ ಲಾ ಕಾಲೇಜಿನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಅಂಗವಾಗಿ ನಡೆದ ಕಾನೂನು ಸಾಕ್ಷರತಾ ದಿನವನ್ನು ಉದ್ಘಾಟಿಸಿ ಮಾತನಾಡಿದರು.

ನ್ಯಾಯ ಪಡೆಯುವಲ್ಲಿ ಯಾರೂ ವಂಚಿತರಾಗಬಾರದೆನ್ನುವ ಉದ್ದೇಶಕ್ಕಾಗಿ ಸೂಕ್ತ ಶಾಸನ, ಯೋಜನೆಗಳು ಅಥವಾ ಯಾವುದೇ ಇತರ ರೀತಿಯಲ್ಲಿ ಉಚಿತ ಕಾನೂನು ನೆರವನ್ನು ಒದಗಿಸಬೇಕು. ಸಂವಿಧಾನದ ಅನುಚ್ಚೇದ 14 ರ ಪ್ರಕಾರ ಕಾನೂನುಗಳು ಎಲ್ಲರಿಗೂ ಸಮಾನ ರಕ್ಷಣೆಯನ್ನು ನೀಡಬೇಕು ಎಂದು ಹೇಳಿದರು.

ಕಾನೂನು ನೆರವು ರಕ್ಷಣಾ ಸಲಹೆಗಾರ ಡಿ.ನಟರಾಜು ಭಾರತದ ಸಂವಿಧಾನದ ಅನುಚ್ಚೇದ 21 "ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ರಕ್ಷಣೆ " ಬಗ್ಗೆ ಸಮರ್ಥವಾಗಿ ಪ್ರತಿಪಾದಿಸಿದೆ. ಅನುಚ್ಚೇದ 19 (1) (ಎ) ಪ್ರಕಾರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕನು ತನ್ನ ಅಭಿಪ್ರಾಯ, ಆಲೋಚನೆ ಮತ್ತು ವಿಚಾರಗಳನ್ನು ಮುಕ್ತವಾಗಿ ಮೌಖಿಕವಾಗಿ, ಬರವಣಿಗೆಯಲ್ಲಿ ಅಥವಾ ಇತರೆ ಯಾವುದೇ ರೀತಿಯಲ್ಲಿ ವ್ಯಕ್ತಪಡಿಸುವ ಹಕ್ಕನ್ನು ಹೊಂದಿರುತ್ತಾನೆ ಎಂದು ಹೇಳಿದರು.

ಶಾರದಾ ಸ್ಕೂಲ್ ಆಫ್ ಲಾ ಸಂಸ್ಥೆಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ಜಿ.ಆರ್.ಶ್ರವಣ್, ಶಾರದಾ ಎಜುಕೇಶನ್ ಟ್ರಸ್ಟ್‌ನ ಆಡಳಿತ ಸಮಿತಿ ಸದಸ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ನಿವೃತ್ತ ಉಪ ಕಾರ್ಯದರ್ಶಿ ಕೆ.ವಿ.ಶ್ರೀನಿವಾಸ ಮೂರ್ತಿ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಎಸ್.ಕುಮಾರ ಅಧ್ಯಕ್ಷತೆ ವಹಿಸಿದ್ದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!