ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ಲೋಕ ಅದಾಲತ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಮಧ್ಯಪ್ರವೇಶ ಮಾಡುವುದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವುದು ಮಾಡಬಾರದು ಎಂದು ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನ ಸ್ಪಷ್ಟ ಸೂಚನೆ ಇದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದರು.
ಡಿಸೆಂಬರ್ 12ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ. ಇದರ ಮೂಲಕ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸಿ, ಆನ್‌ಲೈನ್, ವಿಡಿಯೋ ಕಾನ್ಫರೆನ್ಸ್, ಇ-ಮೇಲ್ ಅಥವಾ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದರು.ಪ್ರತಿದಿನ ಪಾಂಡವಪುರದ ನ್ಯಾಯಾಲಯಗಳಲ್ಲಿ ಲೋಕ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ. ನೀರಿನ ಬಿಲ್, ದೂರವಾಣಿ ಬಿಲ್, ವಿದ್ಯುತ್ ಬಿಲ್, ಸಣ್ಣಪುಟ್ಟ ಬ್ಯಾಂಕ್ ಸಾಲ ವಸೂಲಾತಿ, ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ವ್ಯಾಜ್ಯಗಳು ಹಾಗೂ ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥಪಡಿಸಲು ವಿಶೇಷ ಪೀಠಗಳನ್ನು ರಚಿಸಲಾಗುವುದು ಎಂದರು.
ರಾಜೀಸಂಧಾನದ ಮೂಲಕ ಪ್ರಕರಣ ಇತ್ಯಾರ್ಥ ಮಾಡಿಕೊಳ್ಳುವ ಕಕ್ಷಿದಾರರು ವಕೀಲರ ಮೂಲಕ ಅರ್ಜಿಸಲ್ಲಿಸಿ ಪ್ರಕರಣ ಬಗೆಹರಿಸಿಕೊಳ್ಳಬೇಕು. ಈ ಹಿಂದೆ ನಡೆದ ಲೋಕ ಅದಾಲತ್ ನಲ್ಲಿ ಒಟ್ಟು 6,300 ಪ್ರಕರಣ ಇತ್ಯರ್ಥಪಡಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.