ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಸಲ್ಲ: ಶಾಸಕ ಬಿ.ಕೆ.ಸಂಗಮೇಶ್ವರ್

KannadaprabhaNewsNetwork |  
Published : Oct 04, 2024, 01:07 AM ISTUpdated : Oct 04, 2024, 01:08 AM IST
ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಯಲ್ಲಿ  ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.  | Kannada Prabha

ಸಾರಾಂಶ

ನಗರದ ಮಾಧವಚಾರ್ ವೃತ್ತದಿಂದ ಶಾಸಕ ಬಿ.ಕೆ.ಸಂಗಮೇಶ್ವರ್ ಅವರನ್ನು ನಾದಸ್ವರದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿ ನಗರಸಭೆ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದವರೆಗೂ ಮೆರವಣಿಗೆ ಮೂಲಕ ಕರೆ ತರಲಾಯಿತು. ನಂತರ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಬಲ ನೀಡುವ ಮೂಲಕ ತಾಯಿ ಚಾಮುಂಡೇಶ್ವರಿ ದೇವಿ ಪ್ರತಿಯೊಬ್ಬರಿಗೂ ಆಯುರಾರೋಗ್ಯ ಕರುಣಿಸಲಿ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್ ಆಶಿಸಿದರು.

ಅವರು ಗುರುವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕಾರಣ ಬೇಡ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಕೋಟ್ಯಾಂತರ ರು. ವೆಚ್ಚದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ಮಂಜೂರಾಗಿದ್ದು, ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಪ್ರತಿಯೊಬ್ಬರೂ ಜೋಡಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ನಗರಸಭೆ ಅಧ್ಯಕ್ಷ ಎಂ.ಮಣಿ ಎಎನ್‌ಎಸ್ ಮಾತನಾಡಿ, ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡು ತ್ತಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಮತ್ತು ನಗರಸಭೆ ಹಿರಿಯ ಸದಸ್ಯ ಬಿ.ಕೆ.ಮೋಹನ್ ಮಾತನಾಡಿದರು. ವೇದಿಕೆಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗೂ ನಗರಸಭೆ ಎಲ್ಲಾ ಸದಸ್ಯರು, ಆಶ್ರಯ ಸಮಿತಿ ಮತ್ತು ಸೂಡಾ ಸದಸ್ಯರು, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಸ್ವಾಗತಿಸಿದರು. ಬಸವರಾಜ ನಾಯ್ಕ ಪ್ರಾರ್ಥಿಸಿ, ಮಹಮ್ಮದ್ ಗೌಸ್ ಕಾರ್ಯಕ್ರಮ ನಿರೂಪಿಸಿ, ಸಮುದಾಯ ಸಂಘಟನಾ ಅಧಿಕಾರಿ ಎಂ.ಸುಹಾಸಿನಿ ವಂದಿಸಿದರು. ಗಮನ ಸೆಳೆದ ಭರತ್ಯ ನಾಟ್ಯ

ನಗರದ ಮಾಧವಚಾರ್ ವೃತ್ತದಿಂದ ಶಾಸಕ ಬಿ.ಕೆ.ಸಂಗಮೇಶ್ವರ್ ಅವರನ್ನು ನಾದಸ್ವರದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿ ನಗರಸಭೆ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದವರೆಗೂ ಮೆರವಣಿಗೆ ಮೂಲಕ ಕರೆ ತರಲಾಯಿತು. ನಂತರ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಿಖಿತಾ ಕೃಷ್ಣ ಬಾಲಕಿಯ ಭರತ್ಯ ನಾಟ್ಯ ಗಮನ ಸೆಳೆಯಿತು. ಬಾಲಕಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಅರ್ಚಕ ಪವನ್‌ಕುಮಾರ್ ಉಡುಪ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ಪ್ರತಿ ವರ್ಷದಂತೆ ಈ ಬಾರಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ನರಸಿಂಹಚಾರ್, ರಮಾಕಾಂತ್ ಸೇರಿದಂತೆ ಇನ್ನಿತರರು ಧಾರ್ಮಿಕ ಆಚರಣೆಗಳ ಕುರಿತು ಮಾರ್ಗದರ್ಶನ ನೀಡಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...