ಯತ್ನಾಳ್-ವಿಜಯೇಂದ್ರ ಭೇಟಿ ವೇಳೆ ರಾಜಕೀಯ ಚರ್ಚೆ ಆಗಿಲ್ಲ

KannadaprabhaNewsNetwork |  
Published : Oct 23, 2026, 01:15 AM IST
ಕ್ಯಾಪ್ಷನ22ಕೆಡಿವಿಜಿ39, 40 ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಮಸ್ಟರಿಂಗ್ ಕಾರ್ಯದ ಸಿದ್ಧತೆಗಳನ್ನು ಪರಿಶೀಲಿಸಿದರು. | Kannada Prabha

ಸಾರಾಂಶ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬಿಜೆಪಿಗೆ ಮರುಸೇರ್ಪಡೆ ವಿಚಾರವು ರಾಷ್ಟ್ರೀಯ ನಾಯಕರ ಕೈಯಲ್ಲಿದೆ. ಇದರಲ್ಲಿ ರಾಜ್ಯ ನಾಯಕರು ಏನೂ ಮಾಡಲಾಗುವುದಿಲ್ಲ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ ಹೇಳಿದ್ದಾರೆ.

- ವಿಪ 4 ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಗೆಲುವು: ಬಿ.ಪಿ.ಹರೀಶ ವಿಶ್ವಾಸ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬಿಜೆಪಿಗೆ ಮರುಸೇರ್ಪಡೆ ವಿಚಾರವು ರಾಷ್ಟ್ರೀಯ ನಾಯಕರ ಕೈಯಲ್ಲಿದೆ. ಇದರಲ್ಲಿ ರಾಜ್ಯ ನಾಯಕರು ಏನೂ ಮಾಡಲಾಗುವುದಿಲ್ಲ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಛಬ್ಬಿಯಲ್ಲಿ ಹಿರಿಯ ಪತ್ರಕರ್ತ ಅಜಿತ್ ಹನುಮಕ್ಕನವರ್ ನಿವಾಸಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಹೋಗಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹ ಹೋದಾಗ ಇಬ್ಬರೂ ಭೇಟಿಯಾಗಿದ್ದರು. ಅಲ್ಲಿ ರಾಜಕೀಯ ಚರ್ಚೆಗಳೇನೂ ನಡೆದಿಲ್ಲ ಎಂದರು.

ರಾಜ್ಯದ ವಿಧಾನ ಪರಿಷತ್‌ನ 4 ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಲಿದೆ. ಮೈತ್ರಿಕೂಟದ ಬಿಜೆಪಿ 3 ಕ್ಷೇತ್ರ, ಜೆಡಿಎಸ್ 1 ಕ್ಷೇತ್ರದಲ್ಲಿ ಜಯ ಸಾಧಿಸಲಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಸುಮಾರು 1,84,900 ಮತದಾರರಿದ್ದು, ನಮ್ಮ ಕಾರ್ಯಕರ್ತರು ಮತದಾರರನ್ನು ಭೇಟಿಯಾಗಿ ಮತ ಯಾಚಿಸಿದ್ದಾರೆ. ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟಕ್ಕೆ ಭರ್ಜರಿ ಗೆಲುವು ಸಿಗಲಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯ 3 ತಾಲೂಕುಗಳಲ್ಲಿರುವ ಸುಮಾರು 31 ಸಾವಿರ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮತದಾನ ಪ್ರಮಾಣವನ್ನು ಅಧಿಕವಾಗಬೇಕು. ಪದವೀಧರ ಮತದಾರರು ಮತದಾನಕ್ಕೆ ಸಮಯ ನೀಡುವ ಮೂಲಕ ಎನ್.ಡಿ.ಎ ಮೈತ್ರಿಕೂಟದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಮನವಿ ಮಾಡಿದರು.

ತಾವು, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಬೆಂಗಳೂರಿಗೆ ಹೋಗಿದ್ದರಿಂದ ದಾವಣಗೆರೆಯಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಅಂದು, ಸಿದ್ದೇಶ್ವರ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸ ಕಾಣಿಸಿಕೊಂಡಿದ್ದರಿಂದ ಇಲ್ಲಿಗೆ ಬರುವುದು ತಡವಾಯಿತಷ್ಟೇ. ನಮ್ಮಲ್ಲಿ ಆ ಬಣ, ಈ ಬಣ ಎನ್ನದೇ ಎಲ್ಲರೂ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಹರಿಹರದ ಎಲ್ಲ ಶಾಲಾ-ಕಾಲೇಜು, ಬ್ಯಾಂಕ್, ಕಚೇರಿ ಸಂಪರ್ಕಿಸಿ ಮತದಾರರನ್ನು ತಲುಪಲಾಗಿದೆ. ನಮ್ಮ ಅಭ್ಯರ್ಥಿ ಕೆ.ಎಂ.ಸುರೇಶ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿ.ಪಿ.ಹರೀಶ ವಿಶ್ವಾಸ ವ್ಯಕ್ತಪಡಿಸಿದರು.

- - -

(ಕೋಟ್‌)

ಕೆಆರ್‌ಎಸ್ ಪಕ್ಷದ ರವಿ ಕೃಷ್ಣಾರೆಡ್ಡಿ ನನ್ನ ಹೋರಾಟ ಬೆಂಬಲಿಸಿ ಫೋನ್ ಕರೆ ಮಾಡಿದ್ದರು. ತಾವೂ ನಮ್ಮೊಂದಿಗೆ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. ಅದರ ಬಗ್ಗೆ ನಮ್ಮ ನಾಯಕರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಜಿಲ್ಲಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಕ್ಕೆ ಬಿಜೆಪಿ ಹೋರಾಟ ಕೈಗೊಳ್ಳಬೇಕಿತ್ತು. ಆದರೆ ಕಾಂಗ್ರೆಸ್ ಸರ್ಕಾರದ ನೂರಾರು ಹಗರಣಗಳ ಮಧ್ಯೆ ಯಾವುದಕ್ಕೆ ಹೋರಾಟ ಕೈಗೊಳ್ಳಬೇಕೆಂಬ ಬಗ್ಗೆ ರಾಜ್ಯಾಧ್ಯಕ್ಷರು ಗೊಂದಲದಲ್ಲಿದ್ದಾರೆ. ಈ ಸರ್ಕಾರ ಭಂಡ ಬಿದ್ದಿದೆ.

- ಬಿ.ಪಿ.ಹರೀಶ, ಹರಿಹರ ಶಾಸಕ.

- - -

(ಫೋಟೋ: ಬಿ.ಪಿ. ಹರೀಶ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೈಸೂರು ದಸರಾದಲ್ಲಿ ಸ್ತ್ರೀ ಶಕ್ತಿಗೆ ಭಾರೀ ಮೆಚ್ಚುಗೆ
ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಭೂಮಿ ಕೊಡಲು ವಿಳಂಬ