ಜಾತಿ-ಧರ್ಮ ಆಧಾರದ ಮೇಲಿನ ರಾಜಕೀಯ ಬೇಡ

KannadaprabhaNewsNetwork |  
Published : May 08, 2025, 12:33 AM IST
ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ಮುಸ್ಲಿಂ ಸಮಾಜದ ವತಿಯಿಂದ ಶಾಸಕ ಯತ್ನಾಳ ಹೇಳಿಕೆ ಖಂಡಿಸಿ, ಯತ್ನಾಳ ಮತ್ತು ವಕ್ಫ್ ತಿದ್ದುಪಡಿ ಕಾಯಿದೆ ವಿರೋಧಿಸಿ ಬೃಹತ್ ಪ್ರತಿಭಟನೆ ಮತ್ತು ಫಹಲ್ಗಾಮನಲ್ಲಿ ಹುತಾತ್ಮರಾದ ಭಾರತೀಯ ವೀರರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆ ನಡೆಯಿತು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಯಾರೂ ರಾಜಕೀಯ ಮಾಡಬಾರದು. ದೇಶ ಮೊದಲು ಎಂಬ ತತ್ವ ನಮ್ಮದಾಗಬೇಕು ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಯಾರೂ ರಾಜಕೀಯ ಮಾಡಬಾರದು. ದೇಶ ಮೊದಲು ಎಂಬ ತತ್ವ ನಮ್ಮದಾಗಬೇಕು ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.

ಬಬಲೇಶ್ವರದಲ್ಲಿ ಮುಸ್ಲಿಂ ಸಮಾಜದಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರವಾದಿ ಹಜರತ್ ಮೊಹಮ್ಮದ ಪೈಗಂಬರ್ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ, ಯತ್ನಾಳ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ ಹಾಗೂ ಫಹಲ್ಗಾಮ್‌ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಪ್ರವಾಸಿಗರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಾಸಕ ಯತ್ನಾಳ ಅವರು ಪ್ರವಾದಿ ಮೊಹಮ್ಮದ ಪೈಗಂಬರ್ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸುತ್ತೇನೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಯತ್ನಾಳ ತಮ್ಮ ಮಾತಿನ ಮೇಲೆ ನಿಯಂತ್ರಣ ಹೊಂದಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಬಲೇಶ್ವರ ಮತಕ್ಷೇತ್ರ ಭಾವೈಕ್ಯತೆಗೆ ಹೆಸರಾಗಿದೆ. ಇಲ್ಲಿ ಹಿಂದೂ ಮತ್ತು ಮುಸ್ಲಿಮರು ಸೇರಿ ಜಾತ್ರೆ ಮತ್ತು ಉರುಸ್‌ ಆಚರಿಸುತ್ತಾರೆ. ಸಬ್ ಕಾ ಮಾಲಿಕ ಏಕ್ ಹೈ ಎಂಬಂತೆ ಮತಕ್ಷೇತ್ರ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ನಮ್ಮ ಮನೆತನವೂ ಕೂಡ ಸರ್ವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಇಲ್ಲಿ ಸರ್ವ ಸಮಾಜದವರು ಸಹಬಾಳ್ವೆ ನಡೆಸುತ್ತಿದ್ದಾರೆ. ವೋಟಿನ ಆಸೆಗಾಗಿ ನಾವು ಎಂದೂ ರಾಜಕಾರಣ ಮಾಡಿಲ್ಲ. ಯಾವುದೇ ಭೇದಭಾವ ಮಾಡಿಲ್ಲ. ನಮ್ಮದು ನೀರಿನ ಜಾತಿ. ಮಾನವೀಯ ಧರ್ಮ ತತ್ವದ ಮೇಲೆ ನಾವು ಸಾಮರಸ್ಯದಿಂದ ಬದುಕು ಸಾಗಿಸುತ್ತಿದ್ದೇವೆ. ನಮ್ಮ ತಂದೆ ದಿ.ಬಿ.ಎಂ.ಪಾಟೀಲ ಅವರ ಕಾಲದಿಂದಲೂ ನಾವು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಮತ್ತು ಸಂಬಂಧ ಹೊಂದಿದ್ದೇವೆ ಎಂದು ಹೇಳಿದರು.

ಪಹಲ್ಗಾಮನಲ್ಲಿ ಉಗ್ರರು ನಡೆಸಿದ ದಾಳಿ ಘಟನೆಯಲ್ಲಿ ಮೃತ ಪ್ರವಾಸಿಗರ ಕುಟುಂಬದ ಪರ ಇಡೀ ದೇಶವೇ ನಿಂತಿದೆ. ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪಾಕಿಸ್ತಾನದ ವಿರುದ್ಧ ಕೈಗೊಳ್ಳುವ ಕೇಂದ್ರದ ನಿರ್ಧಾರಕ್ಕೆ ಬದ್ಧರಿದ್ದೇವೆ ಎಂದು ಸುನೀಲಗೌಡ ಪಾಟೀಲ ತಿಳಿಸಿದರು.

ಪ್ರತಿಭಟನೆ ಬಳಿಕ ಪ್ರತಿಭಟನಾಕಾರರಿಂದ ಬಬಲೇಶ್ವರ ತಹಸೀಲ್ದಾರ್‌ ಸಂತೋಷ ಮ್ಯಾಗೇರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಮಾಜಿ ಶಾಸಕ ಪ್ರೊ.ರಾಜು ಆಲಗೂರ, ಮುಖಂಡರಾದ ಯಾಕೂಬ್ ಜತ್ತಿ, ಡಾ.ಕೌಸರ್ ಅತ್ತಾರ, ಪೀರ ಪಟೇಲ, ವಿ.ಎಸ್.ಪಾಟೀಲ, ರಫೀಕ ಸೋನಾರ, ಸೈಯ್ಯದ್ ಆಸಿಫುಲ್ಲಾ ಖಾದ್ರಿ, ಶಕೀಲ ಬಾಗಮಾರೆ, ಅಶೋಕ ಕಾಖಂಡಕಿ, ಸೋಮಶೇಖರ ಕೋಟ್ಯಾಳ, ಆನಂದ ಬೂದಿಹಾಳ, ಈರಗೊಂಡ ಬಿರಾದಾರ, ಶಕೀಲ ಬಾಗಮಾರೆ, ಅಕ್ಬರ್ ಗೋಕಾವಿ, ಲಾಲಸಾಬ್ ಜಮಾದಾರ, ಜಾಫರ್ ಇನಾಮದಾರ, ಅಶ್ಫಾಕ್ ಜಹಾಗೀರದಾರ, ಅಲ್ಲಿಸಾಬ ಖಡಕೆ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ