ಕೇಂದ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಚಿವ ಕುಮಾರಣ್ಣ ಅವರು ಶಕ್ತಿ ಮೀರಿ ಓಡಾಡುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಚಿಂತಿಸಿದವರು. ಬೃಹತ್ ಉದ್ದಿಮೆಗಳನ್ನು ರಾಜ್ಯಕ್ಕೆ ತಂದು ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ/ಕೆ.ಆರ್.ಪೇಟೆ
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ರಾಜ್ಯ ಸರ್ಕಾರ ಕೈ ಜೋಡಿಸಿ ಕೆಲಸ ಮಾಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು.
ಪಟ್ಟಣ ಸಮೀಪದ ಹೊಸಹೊಳಲು ಗ್ರಾಮದ ಶ್ರೀಕೋಟೆ ಭೈರವೇಶ್ವರಸ್ವಾಮಿ ದೇವಸ್ಥಾನದ ರಾಜಗೋಪುರ ಮತ್ತು ಸಮುದಾಯದ ಭವನ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಚಿವ ಕುಮಾರಣ್ಣ ಅವರು ಶಕ್ತಿ ಮೀರಿ ಓಡಾಡುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಚಿಂತಿಸಿದವರು. ಬೃಹತ್ ಉದ್ದಿಮೆಗಳನ್ನು ರಾಜ್ಯಕ್ಕೆ ತಂದು ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದಾರೆ ಎಂದರು.
ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಸಹಕಾರ ನೀಡಬೇಕು. ಜೊತೆಗೆ ಜಿಲ್ಲೆಯ ನಾಯಕರು, ಸಚಿವರು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಟಾಂಗ್ ನೀಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಸದ್ಯಕ್ಕೆ ಅಪ್ರಸ್ತುತ. ಕೇಂದ್ರ ಸಚಿವ ಕುಮಾರಣ್ಣ ಅವರು ತಮ್ಮ ವಯಸ್ಸಿನ ಶಕ್ತಿ ಮೀರಿ ಓಡಾಡುತ್ತಿದ್ದಾರೆ. ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಅಪ್ರಸ್ತುತ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ 138 ಸ್ಥಾನ ಗೆದ್ದರೂ ಆ ಪಕ್ಷದಲ್ಲಿ ಇನ್ನೂ ಬಣ ರಾಜಕೀಯ ದಿನನಿತ್ಯ ಮಾಧ್ಯಮದಲ್ಲಿ ನಾವು ನೋಡುತಿದ್ದೇವೆ. ನಮ್ಮ ಪಕ್ಷದ 17 ಶಾಸಕರು ಹಣ ಆಮಿಷಕ್ಕೆ ಆಸ ಪಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ವೇಳೆ ಶಾಸಕ ಎಚ್.ಟಿ.ಮಂಜು, ಜೆಡಿಎಸ್ ತಾಲೂಕು ಅಧ್ಯಕ್ಷ ಜಾನಕಿರಾಂ, ಮುಖಂಡರಾದ ಮಲ್ಲೇಶ್, ಕಿರಣ್, ದೇವಾಲಯದ ಟ್ರಸ್ಟ್ ಅಧ್ಯಕ್ಷೆ ಮಂಜುಳ ಚನ್ನಕೇಶವ ಸೇರಿದಂತೆ ತಾಲೂಕಿನ ಪ್ರಮುಖ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.