ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ

KannadaprabhaNewsNetwork |  
Published : Sep 06, 2025, 01:00 AM IST
04ಬಿಜಿಪಿ-1 | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಕೆರೆಗಳಿಗೂ ಕೆಸಿ ವ್ಯಾಲಿ ನೀರನ್ನು ತುಂಬಿಸಲಾಗುವುದು. ಈ ಭಾಗದಲ್ಲಿ ಸುಮಾರು 8 ವಸತಿ ಶಾಲೆಗಳನ್ನು ಪ್ರಾರಂಭಿಸುವುದು. ಜೊತೆಗೆ ತಾಲೂಕಿನ ಪಾತಪಾಳ್ಯದ ಬಳಿ ಇರುವ ಗಂಟ್ಲಮಲ್ಲಮ್ಮ ಕಣಿವೆಯಲ್ಲಿ ಅತೀ ಶೀಘ್ರದಲ್ಲಿಯೇ ಸುಮಾರು 190 ಕೋಟಿ ರೂ.ಗಳ ವೆಚ್ಚದಲ್ಲಿ ಅಣೆಕಟ್ಟು ನಿರ್ಮಿಣ ಮಾಡಲಾಗುವುದು

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇರೆಸುವುದು ಬೇಡ. ರಾಜಕೀಯ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ ಉಳಿದ ಸಮಯದಲ್ಲಿ ಕ್ಷೇತ್ರದ ಅಭಿವೃದ್ದಿಗೆ ಎಲ್ಲರೂ ಕೈಜೋಡಿಸಬೇಕೆಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ತಾಲೂಕಿನ ಕಾನಗಮಾಕಲಪಲ್ಲಿ ಗ್ರಾಪಂ ಮೇರುವಪಲ್ಲಿ ಕ್ರಾಸ್ ಬಳಿ ನಿರ್ಮಿಸಲಾಗಿರುವ ಗ್ರಾಪಂ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇಲ್ಲಿನ ಗ್ರಾಪಂ ಅಧ್ಯಕ್ಷರ ಹಾಗೂ ಸದಸ್ಯರುಗಳ ಸಹಕಾರ ಮತ್ತು ಒಗ್ಗಟ್ಟಿನಿಂದ ಸುಸಜ್ಜಿತ ಕಟ್ಟಡ ನಿರ್ಮಿಸಲು ಸಾಧ್ಯವಾಯಿತು. ಇದೇ ರೀತಿಯಲ್ಲಿ ಕ್ಷೇತ್ರದ ಅಭಿವೃದ್ದಿಯ ವಿಚಾರದಲ್ಲಿಯೂ ಸಹ ಪಕ್ಷಾತೀತವಾಗಿ ಎಲ್ಲರೂ ಸಹಕರಿಸಿದರೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ದಿಪಡಿಸಲು ಸಹಕಾರಿಯಾಗುತ್ತೆ ಎಂದು ಅಭಿಪ್ರಾಯಪಟ್ಟರು.

ಗಂಟ್ಲಮಲ್ಲಮ್ಮ ಕಣಿವೆ ಬಳಿ ಅಣೆ

ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಯಂತೆ ಈಗಾಗಲೇ ಈ ಭಾಗಕ್ಕೆ ಎಚ್‌ಎನ್ ವ್ಯಾಲಿ ನೀರನ್ನು ಹಲವು ಕೆರೆಗಳಿಗೆ ತುಂಬಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಕೆರೆಗಳಿಗೂ ನೀರನ್ನು ತುಂಬಿಸಲಾಗುವುದು. ಈ ಭಾಗದಲ್ಲಿ ಸುಮಾರು 8 ವಸತಿ ಶಾಲೆಗಳನ್ನು ಪ್ರಾರಂಭಿಸುವುದು. ಜೊತೆಗೆ ತಾಲೂಕಿನ ಪಾತಪಾಳ್ಯದ ಬಳಿ ಇರುವ ಗಂಟ್ಲಮಲ್ಲಮ್ಮ ಕಣಿವೆಯಲ್ಲಿ ಅತೀ ಶೀಘ್ರದಲ್ಲಿಯೇ ಸುಮಾರು 190 ಕೋಟಿ ರೂ.ಗಳ ವೆಚ್ಚದಲ್ಲಿ ಅಣೆಕಟ್ಟು ನಿರ್ಮಿಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮಗಳ ಅಭಿವೃದ್ಧಿಗೆ ಒತ್ತು

ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಬೀದಿ ದೀಪ,ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಪಿ.ಮಂಜುನಾಥರೆಡ್ಡಿ, ಜಿ.ಪಂ ಮಾಜಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ತಾ.ಪಂ ಇಒ ರಮೇಶ್ ಮುಖಂಡರಾದ ಎ.ವಿ.ಪೂಜಪ್ಪ,ಪಿ.ವಿ.ವೆಕಟರವಣ, ಗ್ರಾ.ಪಂ ಅಧ್ಯಕ್ಷ ಅಶ್ವಥಪ್ಪ, ಉಪಾಧ್ಯಕ್ಷೆ ಲಕ್ಷ್ಮೀದೇವಿ, ಗ್ರಾಪಂ ಸದಸ್ಯರಾದ ಮಲ್ಲಿಕಾರ್ಜುನ, ಉಮಾ, ಗಾಯತ್ರಿ, ಶಿವಶಂಕರ, ನಾಗಮ್ಮ ಮತ್ತಿತರರು ಇದ್ದರು.

PREV

Recommended Stories

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ: 9ರಂದು ಬೃಹತ್ ಜನಾಗ್ರಹ ಸಭೆ
ಮೋದಿ ಸರ್ಕಾರದಿಂದ ಜಿಎಸ್‌ಟಿ ಇಳಿಕೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ್‌ ಕಾಮತ್