ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಕಂದೇಗಾಲ, ತಳಗವಾದಿ ಗ್ರಾಮಗಳಲ್ಲಿ ವಿಶ್ವೇಶ್ವರಯ್ಯ ನಾಲಾ ಜಾಲದಡಿ ಬರುವ ಹೆಬ್ಬಕವಾಡಿ ಮತ್ತು ನಿಡಘಟ್ಟ ಮುಖ್ಯ ನಾಲೆಗಳು ಹಾಗೂ ಪಿಕಪ್‌ನಾಲಾ ಆಧುನೀಕರಣಕ್ಕೆ ಚಾಲನೆ ನೀಡಿ ಮಾತನಾಡಿ, ನೀರಿನ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಿಸುವ ಹಿನ್ನೆಲೆಯಲ್ಲಿ ರೈತನ ಗಂಡು ಮಗ ಕೆಲಸ ಮಾಡುವ ಜವಾಬ್ದಾರಿಯಲ್ಲಿ ನಾಲಾ ಆಧುನೀಕರಣಕ್ಕೆ 600 ಕೋಟಿ ರು. ಬಿಡುಗಡೆಗೊಳಿಸಿದ್ದೇನೆಂದು ಹೇಳಿದರು.
ಐತಿಹಾಸಿಕ ಪ್ರಸಿದ್ಧಿ ಪಡೆದಿರುವ ಮತ್ತಿತಾಳೇಶ್ವರ ದೇವಸ್ಥಾನವನ್ನು ಜೀರ್ಣೋದ್ದಾರಗೊಳಿಸಲು ಕೆಲವೇ ದಿನಗಳಲ್ಲಿ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳಲಾಗುವುದು, ತಾಲೂಕಿನ ಎಲ್ಲಾ ಪುಣ್ಯ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲಾಗಿದೆ. ವಿದ್ಯುತ್, ಕುಡಿಯುವ ನೀರು, ರಸ್ತೆ, ನಾಲಾ ಆಧುನೀಕರಣದ ಜೊತೆಗೆ ರೈತರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬೇಕೆಂಬ ಆಶಯದೊಂದಿಗೆ 40 ಕೋಟಿ ರು. ವೆಚ್ಚದಲ್ಲಿ ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸುವ ಜೊತೆಗೆ ಸ್ಮಾರ್ಟ್ ಕ್ಲಾಸ್ ಶಿಕ್ಷಣಕ್ಕೆ ಒತ್ತು ನೀಡಿದ್ದೇನೆ ಎಂದರು.ಸರ್ಕಾರದಿಂದ ಸಾವಿರಾರು ಕೋಟಿ ರು.ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತಿದ್ದರೇ ಕೆಲವೊಂದು ವರ್ಗ ನನ್ನ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ತಾಲೂಕಿಗೆ ಬೇಕಾದ ಯೋಜನೆಗಳನ್ನು ತರಲು ಸೌಮ್ಯಸ್ವಭಾವ ಸಲ್ಲದು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.
ನಾಲಾ ಆಧುನೀಕರಣಕ್ಕೆ ಖರ್ಚು ಮಾಡುತ್ತಿರುವ ಹಣವನ್ನು ರೈತರು ಒಂದೇ ಬೆಳೆಯಲ್ಲಿ ಸಂಪಾದನೆ ಮಾಡಲಿದ್ದಾರೆ. ಸಂಪೂರ್ಣ ನಾಲೆಗಳು ಅಭಿವೃದ್ಧಿಗೊಂಡರೇ ಕೆಆರ್‌ಎಸ್‌ನಿಂದ 24 ಗಂಟೆಯಲ್ಲಿ ನೀರು ನಿಮ್ಮ ಹೊಲಗದ್ದೆಗಳಿಗೆ ಸೇರಲಿದೆ. ಹೆಚ್ಚುವರಿ ಕೆಲಸವಿದ್ದರೂ ಕೂಡ ಮುಗಿಸಬೇಕೆಂದು ಗುತ್ತಿಗೆದಾರರಿಗೆ ತಾಕೀತು ಮಾಡಲಾಗಿದೆ. ನಾಲಾ ಆಧುನೀಕರಣ ವಿಚಾರದಲ್ಲಿ ಗೊಂದಲ ಸೃಷ್ಟಿಸುವವರಿಗೆ ತಕ್ಕ ಉತ್ತರವನ್ನು ರೈತರೇ ನೀಡಬೇಕೆಂದು ಸಲಹೆ ನೀಡಿದರು.
ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಲಿಂಗರಾಜು, ನಿದೇಶಕ ವಿಶ್ವ(ದಿಲೀಪ್) ಗ್ರಾಪಂ ಅಧ್ಯಕ್ಷ ಮರಿಸ್ವಾಮಿ, ಮುಖಂಡರಾದ ಕುಳ್ಳಚನ್ನಂಕಯ್ಯ, ಚನ್ನಿಗರಾಯ, ಶ್ರೀನಿವಾಸ್, ರವಿ, ಶಿವಲಿಂಗ ಶ್ರೀನಿವಾಸ್, ಸಿಪಿರಾಜು ದೇವರಾಜು, ಸೇರಿದಂತೆ ಇತರರು ಇದ್ದರು.