ಗಣೇಶ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಿ

KannadaprabhaNewsNetwork |  
Published : Aug 12, 2025, 02:02 AM IST
26 | Kannada Prabha

ಸಾರಾಂಶ

ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವುದರಿಂದ ಪರಿಸರಕ್ಕೆ ಮಾರಕವಾಗುವುದನ್ನು ತಪ್ಪಿಸಬಹುದು

ಕನ್ನಡಪ್ರಭ ವಾರ್ತೆ ಮೈಸೂರು

ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಗಣೇಶ ಹಬ್ಬದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವುದರಿಂದ ಪರಿಸರಕ್ಕೆ ಮಾರಕವಾಗುವುದನ್ನು ತಪ್ಪಿಸಬಹುದು ಎಂದರು.ಪಿಒಪಿಯಿಂದ ನಿರ್ಮಿಸಿರುವ ಹಾಗೂ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದಾಗ ವಿಷಕಾರಿ ರಾಸಾಯನಿಕಗಳು ಜಲಮೂಲಗಳಾದ ಕೆರೆ, ಬಾವಿ, ಹಳ್ಳ ಸೇರಿ ನೀರು ಕಲುಷಿತಗೊಳ್ಳುತ್ತದೆ. ಇದು ಜಲಚರಗಳಿಗೆ ಹಾಗೂ ಮಾನವನಿಗೆ ಅತ್ಯಂತ ಹಾನಿಕರ ಎಂದು ಅವರು ಹೇಳಿದರು.ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಅನುಕೂಲವಾಗುವಂತೆ ಸ್ಥಳೀಯ ಸಂಸ್ಥೆಗಳು ಕೆರೆ, ನದಿಪಾತ್ರಗಳಲ್ಲಿ ಸ್ಥಳಗಳನ್ನು ನಿಗದಿಪಡಿಸಬೇಕು. ಪೂಜೆಗೆ ಬಳಸಿದ ಹೂವು ಸೇರಿದಂತೆ ಮತ್ತಿತರ ತ್ಯಾಜ್ಯಗಳ ಶೇಖರಣೆಗೆ ಸಂಗ್ರಹಣಾ ಘಟಕಗಳನ್ನು ಅಳವಡಿಸಬೇಕು ಎಂದರು.ಸಾರ್ವಜನಿಕವಾಗಿ ಇಡಲಾಗುವ ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಮಹಾನಗರ ಪಾಲಿಕೆ/ ನಗರ ಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ/ ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿಯನ್ನು ಪಡೆದ ನಂತರವೇ ಸ್ಥಾಪಿಸಬೇಕು. ಅನುಮತಿ ನೀಡುವ ಪತ್ರಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ತೋರಣ, ಪ್ಲಾಸ್ಟಿಕ್ ಪ್ಲೆಕ್ಸ್, ಮುಂತಾದ ವಸ್ತುಗಳನ್ನು ಬಳಸದಂತೆ ಷರತ್ತು ವಿಧಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ಫೆಂಡಲ್ ಸಮಿತಿಯವರು ರಾತ್ರಿ 10 ರಿಂದ ಬೆಳಗ್ಗೆ 6ರ ತನಕ ಧ್ವನಿವರ್ಧಕಗಳ ಬಳಕೆ ಮಾಡುವುದನ್ನು ನಿಷೇಧಿಸಿದ್ದುಪಾರಂಪರಿಕ ಗೌರಿ-ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗೌರಿ-ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದೊರಕಿಸಿ ಕೊಡಲಾಗುವ ಸ್ಥಳೀಯ ವತಿಯಿಂದ ಹೊಂಡ ಅಥವಾ ಸಂಚಾರಿ ವಿಸರ್ಜನಾ ವ್ಯವಸ್ಥೆ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ ಗಳಲ್ಲಿ ವಿಸರ್ಜಿಸಬೇಕು ಎಂದರು.ನೈಸರ್ಗಿಕ/ ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಪೂಜಾ ಸಾಮಗ್ರಿಗಳಿಂದ ಉತ್ಪತ್ತಿಯಾಗುವ ಹಸಿಕಸವನ್ನು (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಸ್ಥಳೀಯ ಸಂಸ್ಥೆ ಕಸವಿಲೇವಾರಿ ವ್ಯವಸ್ಥೆಗೆ ನೀಡುವಂತೆ ಹಾಗೂ ನಿರ್ಧಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗೌರಿ ಹಾಗೂ ಗಣೇಶ ಮೂರ್ತಿಯ ವಿಗ್ರಹಗಳನ್ನು ವಿಲೇವಾರಿ ಮಾಡಲು ನಿರ್ಧಿಷ್ಟ ಜಲ ಮೂಲಗಳನ್ನು ನಿಗಧಿಪಡಿಸಲಾಗುವುದು. ನಿಯಮಗಳನ್ನು ಉಲ್ಲಂಘಿಸಿ ಪ್ಲಾಸ್ಟರ್ ಆಫ್ ಪ್ಯಾರಿಸ್/ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಮೂರ್ತಿಗಳನ್ನು ಸಾಗಾಣಿಕೆ, ಮಾರಾಟ, ಪ್ರತಿಷ್ಠಾಪನೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳಾದ ಕುಮಾರ್, ವಿ. ಸುನೀಲ್, ನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ