ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಮುಖ್ಯಮಂತ್ರಿ, ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಇದ್ದಾರೆ. ಯಾರೋ ಹಿರಿಯರು ಸಂದರ್ಭಕ್ಕೆ ಅನುಗುಣವಾಗಿ ಮಾತನಾಡಿರಬಹುದು. ಅದು ಬಿಟ್ಟರೆ ಕ್ರಾಂತಿ ಆಗುವಂತಹದ್ದು ಅಥವಾ ಹೆಚ್ಚು ಕಡಿಮೆ ಆಗುವುದೆಲ್ಲ ಇಲ್ಲ. ಪಕ್ಷದಲ್ಲಿ ಆಗಲಿ, ಆಡಳಿತದಲ್ಲಿ ಆಗಲಿ, ಏನೇ ಆಗಬೇಕಾದರೂ ಹೈಕಮಾಂಡ್ ಇದೆ, ಪಕ್ಷವಿದೆ. ಹಾಗೆ ನಡೆದುಕೊಳ್ಳುವ ಪದ್ಧತಿ ನಮ್ಮ ಪಕ್ಷದಲ್ಲಿ ಇದೆ. ಅದು ಮೊದಲಿನಿಂದಲೂ ಇದ್ದು, ಹಾಗೆಯೇ ಮುಂದುವರಿಯುತ್ತದೆ ಎಂದರು.
ಸಚಿವ ಸಂಪುಟ ಬದಲಾವಣೆ ವಿಷಯ ಕೂಡ ಇಲ್ಲ. ಏನೇ ಆಗಬೇಕಾದರೂ ಮುಖ್ಯಮಂತ್ರಿಗಳು ಅಥವಾ ಕೆಪಿಸಿಸಿ ಅಧ್ಯಕ್ಷರು ಹೇಳಬೇಕು. ಪ್ರಸ್ತುತ ಸಂದರ್ಭದಲ್ಲಿ ಅಂತಹ ಯಾವುದೇ ನಿರ್ಧಾರಗಳು ಇಲ್ಲ ಎಂದು ಹೇಳಿದರು.ಮಳೆ ತುರ್ತು ನಿರ್ವಹಣೆಗೆ ಹಣದ ಕೊರತೆ ಇಲ್ಲ:
ಅಧಿಕಾರಿಗಳು ಚುರುಕಾಗಿ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಬಗೆಹರಿಸಲು ಸೂಚಿಸಲಾಗಿದೆ. ಯಾವುದೇ ಅಧಿಕಾರಿ ಕೇಂದ್ರ ಸ್ಥಾನ ಬಿಡುವಂತಿಲ್ಲ. ಮುಂದಿನ 40 ದಿನ ಅಧಿಕಾರಿಗಳು ಮುಂಜಾಗೃತೆ ಕ್ರಮ ವಹಿಸಬೇಕು. ಅವರವರ ಇಲಾಖೆ ಕೆಲಸಗಳನ್ನು ಮಾಡಬೇಕು. ಜೊತೆಗೆ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಭೇಟಿ ನೀಡಬೇಕು. ಅವುಗಳ ಸುರಕ್ಷತೆಗೆ ಸಂಬಂಧಿಸಿದಂತೆ ಕೂಡಲೇ ವರದಿ ನೀಡಬೇಕು ಎಂದು ಎನ್.ಎಸ್. ಭೋಸರಾಜ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.