ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಯಶ್‌ಪಾಲ್

KannadaprabhaNewsNetwork |  
Published : Aug 28, 2026, 02:45 AM IST
27ಯಶ್‌ಪಾಲ್ | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ಅಲ್ಪಸಂಖ್ಯಾತರ ಓಲೈಕೆಯಿಂದ ಮತೀಯ ಶಕ್ತಿಗಳು ರಾಜಾರೋಷವಾಗಿ ಪೊಲೀಸರ ಭಯವಿಲ್ಲದೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತಿದ್ದು, ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ಅಲ್ಪಸಂಖ್ಯಾತರ ಓಲೈಕೆಯಿಂದ ಮತೀಯ ಶಕ್ತಿಗಳು ರಾಜಾರೋಷವಾಗಿ ಪೊಲೀಸರ ಭಯವಿಲ್ಲದೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತಿದ್ದು, ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಬಸವನ ಗುಡಿಯಲ್ಲಿ ಈದ್ ಮೆರವಣಿಗೆಯಲ್ಲಿ ಕಿಡಿಗೇಡಿಗಳು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಜೀವ ಬೆದರಿಕೆ ಘೋಷಣೆ ಹಾಕಿ ಸ್ಥಳದಲ್ಲಿದ್ದ ಹಿಂದೂ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮೊನ್ನೆ ಪುತ್ತೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಅಂಗಡಿಗೆ ನುಗ್ಗಿ ಹಲ್ಲೆ ಮಾಡಿ ಬಳಿಕ ಪೊಲೀಸ್ ಜೀಪ್‌ ಒಳಗೆ ಪ್ರವೇಶಿಸಿ, ಪೊಲೀಸರ ಸಮ್ಮುಖದಲ್ಲೇ ಹಲ್ಲೆ ನಡೆಸುವ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಇಲಾಖೆ ಇದೆಯೇ ಎಂದವರು ಪ್ರಶ್ನಿಸಿದ್ದಾರೆ. ರಾಜ್ಯದ ಹಿಂದೂ ಸಮಾಜ ತನ್ನ ರಕ್ಷಣೆಗೆ ರಾಜ್ಯ ಸರ್ಕಾರದ ಮೇಲಿನ ನಂಬಿಕೆಯನ್ನೇ ಕಳೆದುಕೊಂಡು ಮತಾಂಧ ಶಕ್ತಿಗಳಿಗೆ ತಾವೇ ಉತ್ತರ ನೀಡುವ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಪೋಕ್ಲು ವ್ಯಾಪ್ತಿಯಲ್ಲಿ ಸಂಭ್ರಮದ ಈದ್ ಮಿಲಾದ್
ಟಿಟಿ ಮೇಲೆ ಲಾರಿ ಉರುಳಿ ನಾಲ್ವರಿಗೆ ಗಾಯ