ಕಂಪ್ಲಿ: 2028ರ ಚುನಾವಣೆಯಲ್ಲಿ ನನ್ನನ್ನು ನೋಡಿಕೊಳ್ಳುತ್ತೇನೆ ಎಂಬ ಗಾಲಿ ಜನಾರ್ದನ ರೆಡ್ಡಿ ಅವರ ದರ್ಪದ ಮಾತುಗಳಿಗೆ ನಾನು ಯಾವುದೇ ರೀತಿಯ ಉತ್ತರ ನೀಡುವ ಅಗತ್ಯವಿಲ್ಲ. ಕ್ಷೇತ್ರದ ಜನತೆಯ ಆಶೀರ್ವಾದ ಸದಾ ನನ್ನ ಮೇಲಿದೆ. ನಾನು ಮಾಡಿದ ಕೆಲಸಗಳೇ ನನ್ನ ಪರವಾಗಿ ಮಾತನಾಡುತ್ತವೆ ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.ಪಟ್ಟಣದಲ್ಲಿ ಶನಿವಾರ ₹3 ಕೋಟಿ ವೆಚ್ಚದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ₹15 ಲಕ್ಷ ವೆಚ್ಚದ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪಟ್ಟಣದಲ್ಲಿ ಬಿಇಒ ಕಚೇರಿ ಆರಂಭಿಸುವ ಸಂಬಂಧ ಶಿಕ್ಷಣ ಸಚಿವರ ಮೇಲೆ ಒತ್ತಡ ಹೇರಲಾಗಿದೆ. ಶೀಘ್ರದಲ್ಲೇ ಕಂಪ್ಲಿಯಲ್ಲಿ ಬಿಇಒ ಕಚೇರಿ ಆರಂಭಿಸುವುದಾಗಿ ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ. ಇದರಿಂದ ತಾಲೂಕಿನ ಶಿಕ್ಷಣ ವ್ಯವಸ್ಥೆಗೆ ಹೆಚ್ಚಿನ ಅನುಕೂಲವಾಗಲಿದೆ.
ಕಂಪ್ಲಿ- ತುಂಗಭದ್ರಾ ನದಿ ಸೇತುವೆ ನಿರ್ಮಾಣಕ್ಕೆ ಅಗತ್ಯವಾದ ಎಲ್ಲ ಪ್ರಕ್ರಿಯೆಗಳು ಪ್ರಗತಿಯಲ್ಲಿದ್ದು, ಕೆಲ ತಿಂಗಳೊಳಗೆ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಭರವಸೆ ನೀಡಿದರು.ಕಂಪ್ಲಿ ಹಾಗೂ ಕುರುಗೋಡು ಉತ್ಸವಗಳನ್ನು ರಾಜ್ಯ ಸರ್ಕಾರದ ಸಹಕಾರದಿಂದ ವಿಜೃಂಭಣೆಯಿಂದ ನಡೆಸಲು ಅನುದಾನವನ್ನು ಕೇಳಲಾಗಿದ್ದು, ಆದಷ್ಟು ಬೇಗ ಎರಡೂ ಉತ್ಸವಗಳ ಆಯೋಜನೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಡಿಪ್ಲೋಮಾ ಕಾಲೇಜಿನ ಬಳಿ ಬಸ್ ನಿಲುಗಡೆಗಾಗಿ ಪ್ರಯಾಣಿಕರ ಅನುಕೂಲಕ್ಕೆ ತಂಗುದಾಣ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಪಟ್ಟಣದಿಂದ 3 ಕಿ.ಮೀ. ವ್ಯಾಪ್ತಿಯಲ್ಲಿ ಸೂಕ್ತ ಭೂಮಿ ದೊರಕದ ಕಾರಣ ಬಸ್ ಡಿಪೋ ಆರಂಭಕ್ಕೆ ತಾತ್ಕಾಲಿಕ ತೊಡಕು ಎದುರಾಗಿದೆ. ಭೂಮಿ ಲಭ್ಯವಾದ ತಕ್ಷಣ ಬಸ್ ಡಿಪೋ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ನಿಲಯಪಾಲಕರಾದ ವಿರುಪಾಕ್ಷಪ್ಪ, ಗಾದಿಲಿಂಗಪ್ಪ, ಪ್ರಮುಖರಾದ ಭಟ್ಟ ಪ್ರಸಾದ್, ಎಂ. ಸುಧೀರ್, ರಾಜು ಜೈನ್, ಗದ್ಗಿ ವಿರುಪಾಕ್ಷಿ, ಕೆ. ಮೆಹಬೂಬ್, ಅಕ್ಕಿ ಜಿಲಾನ್, ಕರಿಬಸವನಗೌಡ, ಎಂ. ಗೋಪಾಲ್, ಕೆ. ಮನೋಹರ, ಎಂ. ಗಾಳಿಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಾನು ಒಳ್ಳೆಯ ಕೆಲಸ ಮಾಡಿದರೆ ಜನ ಖಂಡಿತ ನನ್ನನ್ನು ಆಶೀರ್ವದಿಸುತ್ತಾರೆ. ದೊಡ್ಡ ನಾಯಕರು, ಸ್ಟೇಟ್ ಅಥವಾ ಸೆಂಟ್ರಲ್ ಲೀಡರ್‌ಗಳ ವಿಚಾರಕ್ಕೆ ನಾನು ಹೋಗುವುದಿಲ್ಲ. ನನ್ನ ಬಗ್ಗೆ ಮಾತನಾಡುವ ಹಕ್ಕು ಅವರಿಗಿದೆ ಇದೆ. ಆದರೆ ನಾನು ಕ್ಷೇತ್ರದ ಅಭಿವೃದ್ಧಿಯತ್ತ ಮಾತ್ರ ಗಮನ ಹರಿಸುತ್ತೇನೆ ಎಂದು ಹೇಳಿದರು.ಪಟ್ಟಣದಲ್ಲಿ ಬಿಇಒ ಕಚೇರಿ ಆರಂಭಿಸುವ ಸಂಬಂಧ ಶಿಕ್ಷಣ ಸಚಿವರ ಮೇಲೆ ಒತ್ತಡ ಹೇರಲಾಗಿದೆ. ಶೀಘ್ರದಲ್ಲೇ ಕಂಪ್ಲಿಯಲ್ಲಿ ಬಿಇಒ ಕಚೇರಿ ಆರಂಭಿಸುವುದಾಗಿ ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ. ಇದರಿಂದ ತಾಲೂಕಿನ ಶಿಕ್ಷಣ ವ್ಯವಸ್ಥೆಗೆ ಹೆಚ್ಚಿನ ಅನುಕೂಲವಾಗಲಿದೆ.