ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಶಂಕರ ಮಠದಿಂದ ಆರಂಭವಾಗಿ ಹೊಳಲು ಗ್ರಾಮದ ಮೂಲಕ ಮೇಲುಕೋಟೆ, ಶ್ರವಣಬೆಳಗೊಳ ಹಾಗೂ ಹಾಸನ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗೆ 5 ಕೋಟಿ ರು. ಅನುದಾನ ಬಿಡುಗಡೆಯಾಗಿದೆ ಎಂದರು.
ಗುತ್ತಲು ಗ್ರಾಮದ ಅರ್ಕೇಶ್ವರ ದೇವಾಲಯದ ಸೇತುವೆ ಕಾಮಗಾರಿಗೂ 5 ಕೋಟಿ ರು. ಅನುದಾನ ಬಿಡುಗಡೆ. ಶೀಘ್ರ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು. ಅದೇ ರೀತಿ ತಾವರೆಕೆರೆ–ಹಾಲಹಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ 5 ಕೋಟಿ ರು ಅನುದಾನ ಮಂಜೂರಾಗಿದೆ ಎಂದು ತಿಳಿಸಿದರು.ಮಂಡ್ಯ ನಗರದ ಹಾಗೂ ಸುತ್ತಮುತ್ತಲಿನ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿರುವ ಮೂರು ಸೇತುವೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆಯಿಂದ ಒಟ್ಟು 15 ಕೋಟಿ ರು. ಅನುದಾನ ಬಿಡುಗಡೆಯಾಗಿದೆ. ಜೊತೆಗೆ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹೆಚ್.ಕೊಡಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 75 ಲಕ್ಷ ರು. ಅನುದಾನ ಬಿಡುಗಡೆ ಮಾಡಲಾಗಿದ್ದು ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಅಭಿವೃದ್ಧಿ ಕಾಮಗಾರಿಗಳು ಕೇವಲ ಕಾಗದದ ಮೇಲಿನ ಯೋಜನೆಗಳಾಗದೆ ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಪೂರ್ಣಿಮಾ ರವಿ, ನಹಿಂ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.