ರಾಮನಗರ: ನಾಡಹಬ್ಬ ಮೈಸೂರು ದಸರಾದಲ್ಲಿ ಜಂಬೂ ಸವಾರಿ ಮೆರವಣಿಗೆಯ ಮೆರಗು ಹೆಚ್ಚಿಸಲಿರುವ ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಈ ಬಾರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತವರು ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡಿಲ್ಲ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುಶ್ರೀ ಅಧ್ಯಕ್ಷತೆಯಲ್ಲಿ ರಚಿಸಿದ್ದ ರಾಜ್ಯಮಟ್ಟದ ಆಯ್ಕೆ ಸಮಿತಿ, ಜಿಲ್ಲೆಗಳಿಂದ ಸಲ್ಲಿಸಿದ್ದ ಸ್ತಬ್ಧಚಿತ್ರಗಳ ಮಾದರಿಗಳನ್ನು ಪರಿಶೀಲಿಸಿ ಆಯ್ಕೆಯನ್ನು ಅಂತಿಮಗೊಳಿಸಿದೆ.
ಪರಿಸರ, ಕೃಷಿ, ಪ್ರಕೃತಿ, ಪ್ರವಾಸಿ ತಾಣಗಳು, ಸಾಧಕರು, ಕಲೆ ಮತ್ತು ಸಂಸ್ಕೃತಿ, ಪುಣ್ಯಕ್ಷೇತ್ರಗಳು, ಕೈಗಾರಿಕೆ, ಗ್ರಾಮೀಣ ಬದುಕು, ದಾರ್ಶನಿಕರು, ಸಾಹಿತಿಗಳು, ಸ್ವಸಹಾಯ ಸಂಘಗಳು, ನಾರಿಶಕ್ತಿ, ಶಿಕ್ಷಣ, ಜಲಪಾತ ಮತ್ತು ಅಭಯಾರಣ್ಯ ಸೇರಿದಂತೆ ಹಲವು ವಿಷಯಗಳನ್ನು ಆಧರಿಸಿ ಮಾದರಿಗಳನ್ನು ಆಹ್ವಾನಿಸಲಾಗಿತ್ತು.15 ಜಿಲ್ಲೆಗಳಿಗೆ ಮಾತ್ರ ಅವಕಾಶ?
ಪ್ರತಿ ಜಿಲ್ಲೆಯಿಂದ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಆಯಾ ಜಿಲ್ಲೆಯ ವೈಶಿಷ್ಟ್ಯ, ಸಾಧನೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವುದು ದಸರಾ ಮೆರವಣಿಗೆಯ ವಿಶೇಷತೆಯಾಗಿತ್ತು. ಆದರೆ ಈ ಬಾರಿ ರಾಜ್ಯದ 31 ಜಿಲ್ಲೆಗಳಿಂದ ಸಲ್ಲಿಸಿದ್ದ ಮಾದರಿಗಳ ಪೈಕಿ 15 ಜಿಲ್ಲೆಗಳ ಸ್ತಬ್ಧಚಿತ್ರಗಳಿ ಗೆ ಮಾತ್ರ ಆಯ್ಕೆ ಸಮಿತಿ ಅವಕಾಶ ನೀಡಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ಪಬ್ಲಿಕ್ ಶಾಲೆಗಳ(ಕೆಪಿಎಸ್ )ತ್ತ ಹೆಚ್ಚಿನ ಒಲವು ತೋರುತ್ತಿದ್ದಾರೆ. ಈಗಾಗಲೇ ಜಿಲ್ಲಾದ್ಯಂತ 20ಕ್ಕೂ ಹೆಚ್ಚು ಕೆಪಿಎಸ್ ಶಾಲೆಗಳು ಅಭಿವೃದ್ಧಿಗೊಳ್ಳುತ್ತಿರುವುದು, ಪ್ರತಿ ಶಾಲೆಗೆ 6 ರಿಂದ 8 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ.
ಈ ಬಗೆಯ ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿದ್ದರೂ, ಹೊಸತನದ ಕೊರತೆಯ ಕಾರಣ ನೀಡಿ ಆಯ್ಕೆ ಸಮಿತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದರಿಯನ್ನು ಕೈಬಿಡಲು ಪ್ರಮುಖ ಕಾರಣ ಎನ್ನಲಾಗಿದೆ.
ಕೋಟ್ ................
- ಚಿಕ್ಕಸುಬ್ಬ, ಮುಖ್ಯ ಯೋಜನಾಧಿಕಾರಿ, ಬೆಂಗಳೂರು ದಕ್ಷಿಣ ಜಿಪಂ
ರಾಜ್ಯಮಟ್ಟದ ಆಯ್ಕೆ ಸಮಿತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಆದರೆ ದಸರಾದಲ್ಲಿ ವಿಶೇಷ ಕಲಾ ಪ್ರದರ್ಶನಕ್ಕೆ ಅವಕಾಶ ದೊರಕಿದೆ. ಅದರಂತೆ 40 ಮಂದಿ ಕಲಾವಿದರನ್ನು ಒಳಗೊಂಡ ಗಾರುಡಿ ಗೊಂಬೆ ತಂಡ ಜಿಲ್ಲೆಯನ್ನು ಪ್ರತಿನಿಧಿಸುತ್ತಿದೆ.
- ಕೆ.ಸತೀಶ್, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂ.ದಕ್ಷಿಣ12ಕೆಆರ್ ಎಂಎನ್ 1.ಜೆಪಿಜಿ
ಬೆಂ.ದಕ್ಷಿಣ ಜಿಲ್ಲಾಡಳಿತ ಕಚೇರಿ