ಪ್ರಜ್ವಲ್‌ ಕೇಸಲ್ಲಿ ಸಂತ್ರಸ್ತೆಯರಿಂದ ದೂರು ಬಂದಿಲ್ಲ: ರಾಷ್ಟ್ರೀಯ ಮಹಿಳಾ ಆಯೋಗ

KannadaprabhaNewsNetwork |  
Published : May 10, 2024, 01:36 AM ISTUpdated : May 10, 2024, 10:25 AM IST
Prajwal Revanna

ಸಾರಾಂಶ

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾವುದೇ ಸಂತ್ರಸ್ತೆಯರಿಂದ ತಮಗೆ ದೂರು ಬಂದಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸ್ಪಷ್ಟಪಡಿಸಿದೆ.

  ನವದೆಹಲಿ ;  ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾವುದೇ ಸಂತ್ರಸ್ತೆಯರಿಂದ ತಮಗೆ ದೂರು ಬಂದಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸ್ಪಷ್ಟಪಡಿಸಿದೆ.

ಮಹಿಳೆಯೊಬ್ಬರಿಂದ ಈ ಪ್ರಕರಣದ ವಿಚಾರವಾಗಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಿ ಆಕೆ ಮೂವರು ವ್ಯಕ್ತಿಗಳ ವಿರುದ್ಧ ದೂರು ನೀಡಿದ್ದಾರೆ.

ಸಿವಿಲ್‌ ಡ್ರೆಸ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ತಾವು ಪೊಲೀಸ್‌ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಪ್ರಜ್ವಲ್ ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಅನಾಮದೇಯ ಕರೆಗಳ ಮೂಲಕವೂ ದೂರು ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇದನ್ನು ನೋಡಿದರೆ ಗುಂಪೊಂದು ಒತ್ತಾಯಪೂರ್ವಕವಾಗಿ ದೂರು ದಾಖಲಿಸಲು ಪ್ರಯತ್ನಿಸುತ್ತಿದೆ ಅನ್ನುವುದು ಅರಿವಿಗೆ ಬರುತ್ತದೆ. ದೂರುದಾರರು ತಮ್ಮ ಮತ್ತು ತಮ್ಮ ಕುಟುಂಬದ ರಕ್ಷಣೆಗೆ ಮೊರೆ ಇಟ್ಟಿದ್ದಾರೆ ಎಂದು ಮಹಿಳಾ ಆಯೋಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತ್ಯೇಕ ಬೆಳವಣಿಗೆಯೊಂದರಲ್ಲಿ 700 ಮಹಿಳೆಯರು ಆನ್‌ಲೈನ್‌ ಮೂಲಕ ದೂರು ನೀಡಿದ್ದು, ಇವರೆಲ್ಲರೂ ಸಾಮಾಜಿಕ ಹೋರಾಟ ನಡೆಸುವ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವರು. ಇವರಿಗೂ ನೊಂದ ಸಂತ್ರಸ್ತರಿಗೂ ಯಾವುದೇ ನೇರ ಸಂಬಂಧ ಇದ್ದಂತಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಯಾಳುವಿಗೆ ಕೆಜಿ ಭೋಪಯ್ಯ ಸಾಂತ್ವನ
ನೀರಿನ‌ ಮಿತ ಬಳಕೆ ಎಲ್ಲರ ಜವಾಬ್ದಾರಿ: ರಾಜೇಶ್ ನಾಯ್ಕ್