ಬಿಜೆಪಿ ಸುಳ್ಳು ಗ್ಯಾರೆಂಟಿಗೆ ವಾರೆಂಟಿ ಇಲ್ಲ: ಮಧು ಬಂಗಾರಪ್ಪ ಲೇವಡಿ

KannadaprabhaNewsNetwork |  
Published : Apr 21, 2024, 02:16 AM IST
ಶಿಕಾರಿಪುರ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಗ್ಯಾರೆಂಟಿ ಹಬ್ಬ ಕಾರ್ಯಕ್ರಮದಲ್ಲಿ ಸಚಿವ ಮಧು ಗ್ಯಾರೆಂಟಿ ಕಾರ್ಡಗಳನ್ನು ಪ್ರದರ್ಶಿಸಿ ವಿತರಿಸಿದರು. | Kannada Prabha

ಸಾರಾಂಶ

ಶಿಕಾರಿಪುರ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಗ್ಯಾರಂಟಿ ಹಬ್ಬ ಕಾರ್ಯಕ್ರಮದಲ್ಲಿ ಸಚಿವ ಮಧು ಗ್ಯಾರಂಟಿ ಕಾರ್ಡ್‌ಗಳನ್ನು ಪ್ರದರ್ಶಿಸಿ, ಬಳಿಕ ವಿತರಿಸಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕನ್ನಡಪ್ರಭ ವಾರ್ತೆ ಶಿಕಾರಿಪುರ

ರಾಜಕಾರಣಿಗಳು ಆಶ್ವಾಸನೆ, ಭರವಸೆ ನೀಡುವುದು ಸಾಮಾನ್ಯವಾಗಿದ್ದು, ಆದರೆ ನೀಡಿದ ಭರವಸೆಯನ್ನು ಯಥಾ ಪ್ರಕಾರ ಈಡೇರಿಸಿದ ಹಿರಿಮೆ ದಿ.ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶನಿವಾರ ಪಟ್ಟಣದ ಮಾಳೇರಕೇರಿಯಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ತಾಲೂಕು ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ವರ್ಷ ವಿಧಾನಸಭಾ ಚುನಾವಣೆಯ ಇದೇ ವೇಳೆಯಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಜಾರಿಗೊಳಿಸಲಾದ ಗ್ಯಾರಂಟಿ ಯೋಜನೆಯ ಸಮಿತಿಗೆ ಸದಸ್ಯನಾಗಿದ್ದು, ಅತ್ಯಂತ ಹೆಮ್ಮೆ ಹಾಗೂ ಖುಷಿ ಸಂಗತಿಯಾಗಿದೆ ಎಂದ ಅವರು ಚುನಾವಣಾ ಪೂರ್ವದಲ್ಲಿ ನೀಡಿದ ಎಲ್ಲ 5 ಗ್ಯಾರಂಟಿಗಳನ್ನು ಈಡೇರಿಸಲಾಗಿದೆ. ಬಂಗಾರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಜಾರಿಗೊಳಿಸಿದ ಆಶ್ರಯ, ಆರಾಧನಾ, ವಿಶ್ವ, ಉಚಿತ ವಿದ್ಯುತ್ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಗ್ಯಾರಂಟಿ ಗಳನ್ನು ಯಥಾಪ್ರಕಾರ ಅನುಷ್ಠಾನಗೊಳಿಸಿ ರಾಜಕಾರಣಿಗಳು ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆ, ಭರವಸೆ ಈಡೇರಿಸಿದ ಹಿರಿಮೆ ಯನ್ನು ಹೊಂದಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ನೀಡುವ ಎಲ್ಲ ಗ್ಯಾರೆಂಟಿಗೆ ವಾರೆಂಟಿಯಿದ್ದು ಬಿಜೆಪಿ ಸುಳ್ಳು ಗ್ಯಾರೆಂಟಿಗೆ ಯಾವುದೇ ವಾರೆಂಟಿ ಇಲ್ಲ ಸತತ 10 ವರ್ಷ ಮೋದಿ ಚೊಂಬು ನೀಡಿದ್ದು ಚುನಾವಣೆಯಲ್ಲಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ ಎಂದ ಅವರು ಕಾಂಗ್ರೆಸ್ ಒಳ್ಳೆ ಬಾಗ್ಯ ಕೊಡುವ ಅದ್ಬುತ ಕೆಲಸ ಮಾಡಿದೆ ಕಳೆದ ಚುನಾವಣೆಯಲ್ಲಿ ಮನೆಮನೆಗೂ ಗ್ಯಾರೆಂಟಿ ಕಾರ್ಡ ವಿತರಿಸಿದ್ದು ಈ ಬಾರಿ ಹಳೆ ಗ್ಯಾರೆಂಟಿ ಜತೆಗೆ ಹೊಸ ಗ್ಯಾರೆಂಟಿಯನ್ನು ನೀಡಲಾಗಿದೆ ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಮತದಾರರಿಗೆ ಈ ಬಗ್ಗೆ ಅರಿವು ಮೂಡಿಸಿ ಮತಯಾಚಿಸಿದಲ್ಲಿ ಗೀತಕ್ಕರ ಗೆಲುವು ನಿಶ್ಚಿತ ಎಂದು ತಿಳಿಸಿದರು.

ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್,ಬ್ಲಾಕ್ ಅಧ್ಯಕ್ಷ ಶಿವರಾಂ ಪಾರಿವಾಳದ,ವೀರನಗೌಡ,ಮುಖಂಡ ಕಲಗೋಡು ರತ್ನಾಕರ್, ನಾಗರಾಜಗೌಡ, ಗೋಣಿ ಮಾಲತೇಶ್, ನಗರದ ಮಹಾದೇವಪ್ಪ, ರುದ್ರಗೌಡ, ಉಳ್ಳಿ ದರ್ಶನ್, ಜಾಫರ್ ಆಲಿಖಾನ್, ಖಾಸಿಂಸಾಬ್, ರಾಘವೇಂದ್ರ ನಾಯ್ಕ, ಉಮೇಶ್ ಮಾರವಳ್ಳಿ, ಸುರೇಶ್ ಧಾರವಾಡದ, ಕೃಷ್ಣೋಜಿರಾವ್ ಕೊಟ್ಟ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!