ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷ್ಣಾ ಮತ್ತು ಭೀಮಾ ನದಿ ಪಾತ್ರದ ಹತ್ತಿರದಲ್ಲಿರುವ ಗ್ರಾಮಗಳ ಜನ-ಜಾನುವಾರುಗಳ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಕ್ಕಾಗಿ ಗ್ರಾಮವಾರು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು,
ಮಳೆಗಾಲ ಇರುವುದರಿಂದ ಜನರ ಆರೋಗ್ಯ ದೃಷ್ಟಿಯಿಂದ ಸ್ವಚ್ಛ, ಶುದ್ಧ ಕುಡಿವ ನೀರು ಒದಗಿಸಲು ಕ್ರಮವಹಿಸಬೇಕು. ಜಿಲ್ಲಾ ವ್ಯಾಪ್ತಿ ಗ್ರಾಮೀಣ ಜನ ವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತಿರುವ ಪ್ರಕರಣಗಳನ್ನು ತಡೆಯುವ ಸಲುವಾಗಿ ಎಲ್ಲ ಜಲ ಮೂಲ ಹಾಗೂ ಚರಂಡಿ ಸ್ವಚ್ಛಗೊಳಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಪ್ರತಿ ಹಳ್ಳಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕಾರ್ಯದರ್ಶಿಗಳು ತಮ್ಮ ಕ್ಷೇತ್ರದಲ್ಲಿದ್ದು, ಯಾವುದೇ ತೊಂದರೆ ಸಂಭವಿಸಿದಲ್ಲಿ ಆ ಕುರಿತು ಡಂಗೂರ ಬಾರಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ತಿಳಿಸಿದರು.
ಪ್ರವಾಹದಿಂದ ಹಾಗೂ ಜಲಾಶಯಗಳ ಹಿನ್ನೀರಿನಿಂದ ಮುಳುಗಡೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿಕೊಂಡು, ಅಂತಹ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಮುಂಚಿತವಾಗಿಯೇ ತೆರವುಗೊಳಿಸಿ ಕ್ರಮ ಜರುಗಿಸಬೇಕು. ಕಾಳಜಿ ಕೇಂದ್ರಗಳನ್ನು ಗುರುತಿಸಿ ಅಲ್ಲಿ ಮೂಲ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಜಿಪಂ ಸಿಇಒ ಗರಿಮಾ ಪನ್ವಾರ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಜಿಪಂ ಉಪ ಕಾರ್ಯದರ್ಶಿ ವಿಜಯ ಕುಮಾರ ಮಡ್ಡಿ, ಜಿಪಂ ಸಿಪಿಒ ಗುರುನಾಥ ಗೌಡಪ್ಪನ್ನೋರ್, ಕೃಷಿ ಜಂಟಿ ನಿರ್ದೇಶಕ ಕೆ.ಎಚ್. ರವಿ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ರಾಜು ದೇಶಮುಖ, ಜಿಪಂ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ ಚಟ್ನಳ್ಳಿ, ನಗರಸಭೆ ಪೌರಾಯುಕ್ತ ಲಕ್ಷ್ಮಿಕಾಂತ, ಮಹಿಳಾ ಇಲಾಖೆ ಪ್ರಭಾರಿ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಇತರರಿದ್ದರು.