ಕನ್ನಡಪ್ರಭ ವಾರ್ತೆ ಉಡುಪಿ
ಈ ಬಗ್ಗೆ ಕ್ಷೇತ್ರದ ಚುನಾವಣಾಧಿಕಾರಿ, ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಆದರೆ ಮಾ.29ರಂದು ಗುಡ್ ಫ್ರೈಡೆ ಮತ್ತು 31ರಂದು ಭಾನುವಾರ ರಜೆಯಾದ್ದರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ಇಲ್ಲ. ನಾಮಪತ್ರಗಳನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಲ್ಲಿಸಲು ಅವಕಾಶವಿದೆ. ಮಣಿಪಾಲದ ರಜತಾದ್ರಿಯ ಜಿಲ್ಲಾ ಕಚೇರಿಗಳ ಸಂಕೀರ್ಣದ ಕೊಠಡಿ ಸಂಖ್ಯೆ 107ರಲ್ಲಿ ನಾಮಪತ್ರಗಳನ್ನು ಸಲ್ಲಿಸಬೇಕು.ಮಾ.5ರಂದು ಡಿಸಿ ಕೋರ್ಟ್ ಹಾಲ್ ನಲ್ಲಿ ಎಲ್ಲಾ ನಾಮಪತ್ರಗಳ ಪರಿಶೀಲಿಸಿ, ಕ್ರಮಬದ್ಧವಾಗಿರುವ ಉಮೇದುವಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಮಾ.8ರಂದು ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿದೆ. ನಂತರ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ಹಂಚಿಕೆ ಮಾಡಿ ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.ಮಾ.26ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಕ್ಷೇತ್ರದಲ್ಲಿ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಸಾರ್ವಜನಿಕರೆಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದ್ದಾರೆ.
3 ವಾಹನ, 5 ಜನರಿಗೆ ಮಾತ್ರ ಅವಕಾಶ: ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಬರುವಾಗ ಚುನಾವಣಾಧಿಕಾರಿ ಕಚೇರಿಯ 100 ಮೀ. ವ್ಯಾಪ್ತಿಯೊಳಗೆ ಗರಿಷ್ಠ 3 ವಾಹನಗಳಿಗೆ ಮಾತ್ರ ಪ್ರವೇಶ ಇರುತ್ತದೆ. ಚುನಾವಣಾಧಿಕಾರಿಯವರ ಕೊಠಡಿಯೊಳಗೆ ಅಭ್ಯರ್ಥಿ ಸಹಿತ ಒಟ್ಟು 5 ಮಂದಿ ಮಾತ್ರ ಪ್ರವೇಶ ಇರುತ್ತದೆ ಎಂದು ಡಿಸಿ ಅವರು ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಯಲ್ ಉಪಸ್ಥಿತರಿದ್ದರು.