ರಾಮನಗರ: ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಏನಿದು ಪ್ರಕರಣ ?
2018ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿ ಇರುವ ಹೀಲ್ ವ್ಯೂ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಎಚ್.ಸಿ. ಬಾಲಕೃಷ್ಣ ನಡೆಸಿದ್ದರು. ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ತಹಸೀಲ್ದಾರ್ ವಿಷಯವನ್ನು ಫ್ಲೈಯಿಂಗ್ ಸ್ಕ್ಯಾಡ್‌ಗೆ ತಿಳಿಸಿದ್ದರು. ಆ ಮಾಹಿತಿ ಆಧರಿಸಿ ಅಬಕಾರಿ ಸಬ್ ಇನ್ಸ್‌ಕ್ಟರ್ ಸಮೇತ ಸ್ಥಳಕ್ಕೆ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿ ಭೇಟಿ ನೀಡಿದ್ದು, ಈ ವೇಳೆ ವೇದಿಕೆ ಮೇಲೆ ಎಚ್.ಸಿ.ಬಾಲಕೃಷ್ಣ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದು ಕಂಡಿತ್ತು. ಈ ಕಾರ್ಯಕ್ರಮ ಆಯೋಜನೆ ಮಾಡಲು ಸಂಬಂಧಪಟ್ಟ ಚುನಾವಣೆ ಅಧಿಕಾರಿಯಿಂದ ಯಾವುದೇ ಅನುಮತಿಯನ್ನು ಪಡೆಯದ ಕಾರಣ ಪ್ರಕರಣ ದಾಖಲಾಗಿತ್ತು.ಅಲ್ಲದೆ, ಹಿಲ್ ವ್ಯೂನ ರೆಸಾರ್ಟ್‌ನಲ್ಲಿ ಪರವಾನಗಿ ಇಲ್ಲದೆ ಮದ್ಯಪಾನಕ್ಕೆ ವ್ಯವಸ್ಥೆಯನ್ನೂ ಮಾಡಿದ್ದ ಕಾರಣ ರೆಸಾರ್ಟ್ ಮಾನೇಜರ್ ವಿರುದ್ಧವೂ ಕ್ರಮ ಜರುಗಿಸುವಂತೆ ರಾಮನಗರ ರೂರಲ್ ಪೊಲೀಸ್ ಠಾಣೆಯಲ್ಲಿ ಕಲಂ 34 ಐಪಿಸಿ, ಕಲಂ 171(E) RP Act ಹಾಗೂ ಕಲಂ 34, 38(A) K.E Act-1965 ಅಡಿ ಪ್ರಕರಣ ದಾಖಲಾಗಿದ್ದು, ಈ ಕೇಸ್ನ ವಿಚಾರಣೆಯು ಜನಪ್ರತಿನಿಧಿಗಳ ( 42ನೇ ಎಸಿಎಂಎಂ ಕೋರ್ಟ್) ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಆದರೆ ಹಾಲಿ ಶಾಸಕ ಬಾಲಕೃಷ್ಣ ವಿಚಾರಣೆಗೆ ಬಾರದ ಕಾರಣ ನ್ಯಾಯಾಲಯವೀಗ ಬಿಸಿ ಮುಟ್ಟಿಸಿದೆ.
ಶಾಸಕ ಬಾಲಕೃಷ್ಣ