ಸತ್ಯದ ಆಧಾರದಲ್ಲಿ ಸೃಜನೇತರ ಬರವಣಿಗೆ: ಪ್ರೊ.ನಿರಂಜನ ವಾನಳ್ಳಿ

KannadaprabhaNewsNetwork |  
Published : Oct 22, 2025, 01:03 AM IST
ಸೃತನೇತರ ಬರವಣಿಗೆ ಕಾರ್ಯಾಗಾರ ಉದ್ಘಾಟನೆ  | Kannada Prabha

ಸಾರಾಂಶ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ಶುಕ್ರವಾರ ವಿ.ವಿ.ಕಾಲೇಜಿನ ಶಿವರಾಮ ಕಾರಂತ್ ಸಭಾಂಗಣದಲ್ಲಿ ಸೃಜನೇತರ ಬರವಣಿಗೆ ಕಾರ್ಯಾಗಾರ ನೆರವೇರಿತು.

ಮಂಗಳೂರು: ಸೃಜನಶೀಲ ಹಾಗೂ ಸೃಜನೇತರ ಬರೆವಣಿಗೆಯಲ್ಲಿ ವ್ಯತ್ಯಾಸವಿದೆ. ಬರಹಗಾರನ ಕಲ್ಪನೆಯಲ್ಲಿ ಮೂಡಿಬರುವ ಕಥೆ, ಕವನಗಳು ಸೃಜನಶೀಲ ಬರೆವಣಿಗೆಯಾದರೆ, ಸತ್ಯದ ಆಧಾರದಲ್ಲಿ ನೇರವಾಗಿ ಬರೆಯುವುದು ಸೃಜನೇತರ ಬರೆವಣಿಗೆಯಾಗಿ ಗುರುತಿಸಲ್ಪಟ್ಟಿದೆ ಎಂದು ಬೆಂಗಳೂರು ಉತ್ತರ ವಿ.ವಿ.ಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಹೇಳಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ಶುಕ್ರವಾರ ವಿ.ವಿ.ಕಾಲೇಜಿನ ಶಿವರಾಮ ಕಾರಂತ್ ಸಭಾಂಗಣದಲ್ಲಿ ನಡೆದ ಸೃಜನೇತರ ಬರವಣಿಗೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಬರೆವಣಿಗೆ ಒಂದು ಕಲೆ. ಅಕ್ಷರ ಕಲಿತವರೆಲ್ಲ ಬರಹಗಾರರಾಗಲು ಸಾಧ್ಯವಿಲ್ಲ. ಅದಕ್ಕೆ ವಿಷಯಗ್ರಹಿಕೆ, ಸೃಜನಶೀಲತೆ , ತಪಸ್ಸು ಎಲ್ಲವೂ ಮುಖ್ಯ. ಇಂತಹ ಕಾರ್ಯಾಗಾರಗಳು ಬರೆವಣಿಗೆ ಕಲೆಯನ್ನು ಉದ್ದೀಪನಗೊಳಿಸಲು ಪೂರಕವಾಗಿದೆ ಎಂದು ಅವರು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿ.ವಿ.ಯ ಕುಲ ಸಚಿವ ಕೆ.ರಾಜು ಮೊಗವೀರ ಮಾತನಾಡಿ , ಬರವಣಿಗೆಯ ಸಾಧ್ಯತೆ ಮತ್ತು ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು ಎಂದರು.ವಿ.ವಿ.ಕಾಲೇಜು ಪ್ರಾಂಶುಪಾಲ ಪ್ರೊ.ಗಣಪತಿ ಗೌಡ, ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿದ್ದರು.ಅಭಾಸಾಪ ವಿಭಾಗ ಸಂಯೋಜಕ ಸುಂದರ ಶೆಟ್ಟಿ ಇಳಂತಿಲ, ಜತೆ ಕಾರ್ಯದರ್ಶಿ ಶ್ರೀಲಕ್ಷ್ಮಿ ಮಠದಮೂಲೆ, ಸಮಿತಿ ಸದಸ್ಯರಾದ ಡಾ.ಸುರೇಶ್ ನೆಗಳಗುಳಿ, ಗೀತಾ ಲಕ್ಷ್ಮೀಶ, ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಡಾ.ಮೀನಾಕ್ಷಿ ರಾಮಚಂದ್ರ, ಉಪನ್ಯಾಸಕರಾದ ಜಯವಂತ ನಾಯಕ್, ಡಾ.ಸುಧಾ.ಎನ್.ವೈದ್ಯ ಇದ್ದರು.ಮಂಗಳಗಂಗೆ ಸಂಚಿಕೆಯ ಕಾರ್ಯನಿರ್ವಾಹಕ ಸಂಪಾದಕ ಡಾ.ಮಾಧವ.ಎಂ.ಕೆ. ಸ್ವಾಗತಿಸಿದರು. ಅಭಾಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿದುಷಿ ಸುಮಂಗಳಾ ರತ್ನಾಕರ್ ವಂದಿಸಿದರು. ಉಪನ್ಯಾಸಕಿ ಸಿಂಧು ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿನೇದಿನೇ ಏರುತ್ತಿರುವ ಚಿನ್ನದ ದರ ಇಳಿಯಲಿ ಎಂದು ಭಕ್ತನ ಹರಕೆ !
₹70 ಲಕ್ಷ ವಿದ್ಯುತ್‌ ಬಿಲ್‌ ಬಾಕಿ: ಸಿದ್ಧಗಂಗಾ ಮಠಕ್ಕೆ ನೀರು ಬಂದ್‌!