ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪುರಸಭಾ ಕಾರ್ಯಾಲಯದ ಪಕ್ಕದ ಮೈದಾನದಲ್ಲಿ ಜಯ ಕರ್ನಾಟಕ ಸಂಘಟನೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು, ನಿವೃತ್ತ ಯೋಧರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ಸಂಘಟನೆಯು ಅಣ್ಣಾ ಮುತ್ತಪ್ಪ ರೈ ಅವರ ನೇತೃತ್ವದಲ್ಲಿ ಆರಂಭವಾಗಿ ಇಂದಿಗೂ ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯನ್ನು ಉಳಿಸುವ ದಿಕ್ಕಿನಲ್ಲಿ ನಾಡಿನಾದ್ಯಂತ ಹೋರಾಟ ನಡೆಸುತ್ತಿದೆ. ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯಲು ಕಾರ್ಯಕರ್ತರು ಹೋರಾಡುತ್ತಿದ್ದಾರೆ ಎಂದರು.ಕನ್ನಡದ ನೆಲದಲ್ಲಿ ವಾಸಿಸುವ ಅನ್ಯ ಭಾಷಿಕರು ಕನ್ನಡ ಕಲಿತು ವ್ಯವಹರಿಸಬೇಕು. ಕನ್ನಡದ ನೆಲದಲ್ಲಿ ಯಾವುದೇ ರೀತಿಯ ಗಲಾಟೆ ಗದ್ದಲಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುತ್ತಿರುವ ಪೊಲೀಸರು ಅಕಾಲಿಕವಾಗಿ ನಿಧನರಾದರೆ ರಾಜ್ಯ ಸರ್ಕಾರವು ಕೇವಲ 20 ಲಕ್ಷ ರು.ಗಳ ಪರಿಹಾರ ನೀಡುತ್ತಿತ್ತು. ಸಂಘಟನೆ ಹೋರಾಟ ಮಾಡಿದ ಫಲವಾಗಿ 50 ಲಕ್ಷ ರು. ನೀಡುವುದನ್ನು ಜಾರಿಗೆ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆ ವಹಿಸಿದ್ದರು. ಕಾಪನಹಳ್ಳಿ ಗವಿಮಠದ ಶ್ರೀಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಬೆಡದಹಳ್ಳಿಯ ಪಂಚಭೂತೇಶ್ವರ ಮಠದ ಶ್ರೀರುದ್ರಮುನಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಆದಿಚುಂಚನಗಿರಿ ಹೇಮಗಿರಿ ಶಾಖಾಮಠದ ಗೌರವ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ರಾಜ್ಯ ಆರ್‌ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎ.ಬಿ.ಕುಮಾರ್, ಮನ್ಮುಲ್ ನಿರ್ದೇಶಕ ಡಾಲು ರವಿ, ಸಂಘಟನೆ ರಾಜ್ಯ ಉಪಾಧ್ಯಕ್ಷರಾದ ನಾರಾಯಣಸ್ವಾಮಿ ವಿಜಯಾಗೌಡ, ಗೌರವಾಧ್ಯಕ್ಷ ಮುನಿಸ್ವಾಮಿ, ಮಂಡ್ಯ ಜಿಲ್ಲಾಧ್ಯಕ್ಷ ಡಾ.ಯೋಗಣ್ಣ, ಹಾಸ್ಯ ನಟರಾದ ಟೆನ್ನಿಸ್ ಕೃಷ್ಣ, ಕಿರುತೆರೆ ಕಲಾವಿದರಾದ ಶಿವಣ್ಣ, ಚಾರ್ಲಿ ಕುಮಾರ್, ನಂದೀಶ್, ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ ಗೌಡ, ತಾಲೂಕು ಯುವ ಘಟಕದ ಅಧ್ಯಕ್ಷ ಕಾಮನಹಳ್ಳಿ ಕೆ. ಎಲ್.ಮಹೇಶ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಮ್ಮ, ಸರಸ್ವತಿ, ರತ್ನಮ್ಮ, ಮಧು, ಕುಮಾರ್ ಹಲವರು ಭಾಗವಹಿಸಿದ್ದರು.