ಗ್ರಾಮದ ಅಭಿವೃದ್ಧಿಗೆ ಪಕ್ಷಾತೀತ ಆಡಳಿತ ಅಗತ್ಯ

KannadaprabhaNewsNetwork |  
Published : Feb 23, 2025, 12:31 AM IST
ಪೊಟೋ-ಸಮೀಪದ ಅಡರಕಟ್ಟಿ ಗ್ರಾಮದಲ್ಲಿ ಗ್ರಾಪಂ ನೂತನ ಕಟ್ಟವನ್ನು ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಜಗಧೀಶ ಶೆಟ್ಟರ ಮಾತನಾಡಿದರು. | Kannada Prabha

ಸಾರಾಂಶ

ಗ್ರಾಮದ ಅಭಿವೃದ್ಧಿಗೆ ಪಕ್ಷಾತೀತವಾಗಿ ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡುವುದು ಅಗತ್ಯವಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಸರ್ಕಾರದ ಅನೇಕ ಯೊಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಲಕ್ಷ್ಮೇಶ್ವರ: ಗ್ರಾಮದ ಅಭಿವೃದ್ಧಿಗೆ ಪಕ್ಷಾತೀತವಾಗಿ ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡುವುದು ಅಗತ್ಯವಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಸರ್ಕಾರದ ಅನೇಕ ಯೊಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಶನಿವಾರ ಸಮೀಪದ ಅಡರಕಟ್ಟಿ ಗ್ರಾಮದ ನೂತನ ಗ್ರಾಪಂನ ಕಟ್ಟಡದ ಉದ್ಘಾಟನೆ ನೆರವೇರಿಸಿ ನಂತರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸುಂದರ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಗ್ರಾಮದ ಅಭಿವೃದ್ಧಿಗೆ ಉತ್ತಮ ಆಡಳಿತ ಅವಶ್ಯವಾಗಿದೆ. ಜನಸಾಮಾನ್ಯರಿಗೆ ಉತ್ತಮ ಆಡಳಿತ ನೀಡುವಲ್ಲಿ ಸದಸ್ಯರ ಸಹಕಾರ ಅಗತ್ಯ. ನೂತನ ಗ್ರಾಪಂ ಕಟ್ಟಡದ ಗ್ರಾಮದ ಜನತೆಗೆ ಅಗತ್ಯವಾಗಿರುವ ಮೂಲ ಸೌಲಭ್ಯಗಳು ದೊರೆಯುವಂತೆ ಮಾಡುವುದು ಅಧಿಕಾರಗಳ ಕರ್ತವ್ಯವಾಗಿದೆ. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆ ಮೂಲಕ ಗ್ರಾಮದ ಆಡಳಿತ ಸುಲಭವಾಗುವಂತೆ ಮಾಡಿ ಪಕ್ಷಾತೀತವಾಗಿ ಆಡಳಿತ ನಡೆಸಿ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮಗಳ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡುತ್ತವೆ. ಉತ್ತಮ ಆಡಳಿತ ನೀಡುವ ಮೂಲಕ ಆದರ್ಶ ಗ್ರಾಪಂ ಇದಾಗಲಿ. ಗ್ರಾಮದ ಅರ್ಹ ಫಲಾನುಭವಿಗಳಿಗೆ ಎಲ್ಲಾ ರೀತಿಯ ಸೌಲಭ್ಯ ಸಿಗವಂತಾಗಬೇಕು ಎಂದು ಹೇಳಿದರು. ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿದ್ದ ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರು ಡಾ. ವೀರ ಸೋಮೇಶ್ವರ ಮಹಾಸ್ವಾಮಿಗಳು ಮಾತನಾಡಿ, ಗ್ರಾಮದ ಹಿರಿಯರ ಅಭಿಪ್ರಾಯ ಹಾಗೂ ಮಾರ್ಗದರ್ಶನ ಪಡೆದು ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಹೊಂದಿದರೆ ದೇಶದ ಅಭಿವೃದ್ಧಿ ಸಾಧ್ಯ. ಜನಸಾಮಾನ್ಯರ ಕೆಲಸ ಮಾಡುವ ಪ್ರವೃತ್ತಿ ಅಧಿಕಾರಿಗಳಲ್ಲಿ ಕಂಡು ಬರಲಿ. ಆಡಳಿತ ವಿಕೇಂದ್ರೀಕರಣ ವ್ಯವಸ್ಥೆ ಮೂಲಕ ಗ್ರಾಮದ ಅಭಿವೃದ್ಧಿ ಸಾಧ್ಯ. ಜನರ ಕಲ್ಯಾಣ ಹಾಗೂ ರೈತರ ಅಭಿವೃದ್ಧಿಗೆ ಸಹಕಾರ ನೀಡುವುದು ಗ್ರಾಪಂ ಸದಸ್ಯರು ಮಾಡಬೇಕಾದ ಕೆಲಸವಾಗಿದೆ. ಶಿಕ್ಷಣ, ಆರೋಗ್ಯ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಗ್ರಾಪಂ ಸದಸ್ಯರು ರಾಜಕೀಯ ಮಾಡಬಾರದು ಎಂದರು.

ರಾಜ್ಯದಲ್ಲಿ ಪ್ರಸ್ತುತ ಪಂಚ ಗ್ಯಾರಂಟಿ ಯೋಜನೆಗಳ ಭರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯದ ಜನರು ಗ್ಯಾರಂಟಿ ಯೋಜನೆಗಳ ಬಗ್ಗೆ ಅತೃಪ್ತಿ ಹೊಂದಿದ್ದಾರೆ ಎಂದ ಅವರು, ಗ್ರಾಮೀಣ ಆಡಳಿತದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ, ಅವರು ಉತ್ತಮ ಆಡಳಿತ ನಡೆಸುತ್ತಾರೆ ಎಂಬ ಅಭಿಪ್ರಾಯ ಜನಸಾಮಾನ್ಯರಲ್ಲಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಾಸಕ ಡಾ ಚಂದ್ರು ಲಮಾಣಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಜಿ.ಎಸ್. ಗಡ್ಡದೇವರಮಠ, ಗಂಗಣ್ಣ ಮಹಾಂತಶೆಟ್ಟರ, ಎಸ್.ಪಿ.ಬಳಿಗಾರ ಮಾತನಾಡಿದರು.ನೂತನ ಕಟ್ಟಡದ ಉದ್ಘಾಟನೆಯ ಸಮಾರಂಭದಲ್ಲಿ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು, ಆದರಳ್ಳಿಯ ಗವಿಮಠದ ಡಾ. ಕುಮಾರ ಮಹಾರಾಜರು ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಪ್ರೇಮಕ್ಕ ಲಮಾಣಿ, ಸುಜಾತಾ ದೊಡ್ಡಮನಿ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಮುದಿಯಪ್ಪ ಹವಳದ. ಚನ್ನಬಸಪ್ಪ ಹಳೆಮನಿ, ನಿಂಗಪ್ಪ ಪ್ಯಾಟಿ, ಸುಶೀಲವ್ವ ಲಮಾಣಿ, ಗಂಗನಗೌಡ ಪಾಟೀಲ, ಚನ್ನಪ್ಪ ಜಗಲಿ, ಕಾಶವ್ವ ಲಮಾಣಿ, ಪವಿತ್ರಾ ಗಡೆಪ್ಪನವರ, ಗಣೇಶ ಲಮಾಣಿ, ಸೋಮಪ್ಪ ಹವಳದ, ಕವಿತಾ ಲಮಾಣಿ, ಲಕ್ಷ್ಮೀ ಕಾರಭಾರಿ, ಸೋಮಕ್ಕ ತಳವಾರ, ಇಓ ಕೃಷ್ಣಪ್ಪ ಧರ್ಮರ, ಜಿಪಂ ಎಇ ಮಾರುತಿ ರಾಠೋಡ, ಪಿಡಿಒ ಸವಿತಾ ಸೋಮಕ್ಕನವರ, ಸಿಡಿಪಿಓ ಮೃತ್ಯುಂಜಯ ಗುಡ್ಡದಾನ್ವೇರಿ ಸೇರಿದಂತೆ ಅನೇಕರು ಇದ್ದರು.

2021ಕ್ಕಿಂತ ಪೂರ್ವದ ಗ್ರಾಪಂ ಆಡಳಿತ ಮಂಡಳಿಯ ಅವಧಿಯಲ್ಲಿ ಆರಂಭಗೊಂಡ ಗ್ರಾಮ ಪಂಚಾಯಿತಿ ಕಟ್ಟಡದ ಕಾಮಗಾರಿ ಹಲವು ಕಾರಣಗಳಿಂದ ಸ್ಥಗಿತಗೊಂಡಿತ್ತು. 2021ರಲ್ಲಿ ಆಯ್ಕೆಯಾದ ನೂತನ ಸದಸ್ಯರು ಹಾಗೂ ನಾನು ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡ ನಂತರ, ನಿರಂತರ ಪ್ರಯತ್ನದಿಂದ ಹಾಗೂ ಹಲವಾರು ಅಧಿಕಾರಿಗಳನ್ನು ಭೇಟಿ ಮಾಡಿ ಹೆಚ್ಚಿನ ಅನುದಾನ ಪಡೆದುಕೊಂಡು ಮತ್ತೆ ಬೃಹತ್ ಕಟ್ಟಡ ಕಾಮಗಾರಿ ಆರಂಭಗೊಂಡಿತು. ಈಗ ಉತ್ತಮ ಕಟ್ಟಡ ಕಟ್ಟಿದ ಹೆಮ್ಮೆ ನಮಗಿದೆ. ಇದಕ್ಕೆ ಎಲ್ಲಾ ಸದಸ್ಯರು ಹಾಗೂ ಗ್ರಾಮದ ಹಿರಿಯರು ಸಹಕಾರ ನೀಡಿದ್ದು ಸ್ಮರಣೀಯ ಗ್ರಾಪಂ ಸದಸ್ಯ ನಿಂಗಪ್ಪ ಪ್ಯಾಟಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೋರಾಟಗಾರರ ಮೇಲೆ ಹಲ್ಲೆ, ಕೆಂಗನಾಳ ಕಿಡಿ
ಬಿಡಿಸಿಸಿ ಬ್ಯಾಂಕ್ ಯುನಿಯನ್‌ ಅಧ್ಯಕ್ಷನ ಮೇಲೆ ಹಲ್ಲೆ