ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಬಗ್ಗೆ ಪರಿಶೀಲನೆಗೆ ಹೈಕೋರ್ಟ್ ಮೂವರು ನ್ಯಾಯಾಧೀಶರ ಸಮಿತಿ ರಚಿಸಿದ್ದು, ಎಲ್ಲಾ ಪಕ್ಷಗಳು ಭಿನ್ನಮತವಿಲ್ಲದೇ ಒಗ್ಗಟ್ಟಿನಿಂದ ಒತ್ತಾಯಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ಉಡುಪಿ : ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಬಗ್ಗೆ ಪರಿಶೀಲನೆಗೆ ಹೈಕೋರ್ಟ್ ಮೂವರು ನ್ಯಾಯಾಧೀಶರ ಸಮಿತಿ ರಚಿಸಿದ್ದು, ಎಲ್ಲಾ ಪಕ್ಷಗಳು ಭಿನ್ನಮತವಿಲ್ಲದೇ ಒಗ್ಗಟ್ಟಿನಿಂದ ಒತ್ತಾಯಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.ಅವರು ನಗರದ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆ ಕುರಿತ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಹೈಕೋರ್ಟ್ ಪೀಠದ ಬೇಡಿಕೆ ಯಾವುದೇ ಒಂದು ಪಕ್ಷ ಅಥವಾ ಸಂಘಟನೆಗೆ ಸೀಮಿತವಾದದ್ದಲ್ಲ. ಇದು ಇಡೀ ಕರಾವಳಿ ಭಾಗದ ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರ. ಆದ್ದರಿಂದ ರಾಜಕೀಯ ಪಕ್ಷಗಳು, ವಕೀಲರ ಸಂಘಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳು ಒಗ್ಗೂಡಿ ಪಕ್ಷಾತೀತವಾಗಿ ಧ್ವನಿ ಎತ್ತಬೇಕಾಗಿದೆ ಎಂದು ಹೇಳಿದರು.ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ವಕೀಲರ ಸಂಘದ ಮಾಜಿ ಕಾರ್ಯದರ್ಶಿ ರಾಜೇಶ್ ಎ.ಆರ್., ಮಾಜಿ ಉಪಾಧ್ಯಕ್ಷ ಮಿತ್ರಕುಮಾರ್ ಶೆಟ್ಟಿ, ವಕೀಲರಾದ ಸಚಿನ್ ಕುಮಾರ್ ಶೆಟ್ಟಿ ಮೆಲ್ವಿನ್ ನೊರೊನ್ಹಾ, ಪ್ರಶಾಂತ್ ಪೂಜಾರಿ, ಪದ್ಮಪ್ರಸಾದ್, ರಾಘವೇಂದ್ರ, ಗೌತಮ್ ಹಾಗೂ ಪ್ರವೀಣ್ ಆದ್ಯಪಾಡಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.